1 ಸಮುಯೇಲ 20:12 - ಪರಿಶುದ್ದ ಬೈಬಲ್12 ಯೋನಾತಾನನು ದಾವೀದನಿಗೆ, “ನಾನು ಇಸ್ರೇಲರ ದೇವರಾದ ಯೆಹೋವನ ಎದುರಿನಲ್ಲಿ ಈ ಪ್ರಮಾಣವನ್ನು ಮಾಡುತ್ತೇನೆ. ನನ್ನ ತಂದೆಯು ನಿನ್ನ ಬಗ್ಗೆ ಒಳ್ಳೆಯ ಭಾವನೆಯನ್ನು ಹೊಂದಿರುವನೊ ಇಲ್ಲವೊ ಎಂಬುದನ್ನು ತಿಳಿದುಕೊಳ್ಳುತ್ತೇನೆ. ನಂತರ ಸಂದೇಶವೊಂದನ್ನು ನಾನು ಮೂರು ದಿನಗಳೊಳಗಾಗಿ ನಿನಗೆ ಕಳುಹಿಸಿಕೊಡುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವರಿಬ್ಬರೂ ಹೊಲಕ್ಕೆ ಹೋದ ಮೇಲೆ ಯೋನಾತಾನನು ದಾವೀದನಿಗೆ, “ಇಸ್ರಾಯೇಲರ ದೇವರಾದ ಯೆಹೋವನೇ ಸಾಕ್ಷಿ, ನಾನು ನಾಳೆ ಇಲ್ಲವೆ ನಾಡಿದ್ದು ನಿನ್ನ ವಿಷಯದಲ್ಲಿ ನನ್ನ ತಂದೆಯೊಡನೆ ಮಾತನಾಡಿ, ನಿನ್ನ ಮೇಲೆ ಅವನಿಗೆ ದಯೆ ಉಂಟೆಂದು ಗೊತ್ತಾದರೆ ಕೂಡಲೆ ನಿನಗೆ ತಿಳಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅವರಿಬ್ಬರೂ ಅಡವಿಗೆ ಹೋದರು. ಅಲ್ಲಿ ಯೋನಾತಾನನು ದಾವೀದನಿಗೆ, “ಇಸ್ರಯೇಲ್ ದೇವರಾದ ಸರ್ವೇಶ್ವರನೇ ಸಾಕ್ಷಿ! ನಾನು ನಾಳೆ ಇಲ್ಲವೆ ನಾಡಿದ್ದು ನಿನ್ನ ವಿಷಯದಲ್ಲಿ ನನ್ನ ತಂದೆಯೊಡನೆ ಮಾತಾಡಿ, ನಿನ್ನ ಮೇಲೆ ಅವರಿಗೆ ದಯೆಯುಂಟೆಂದು ಗೊತ್ತಾದರೆ ಕೂಡಲೆ ನಿನಗೆ ತಿಳಿಯಪಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅವರಿಬ್ಬರೂ ಅಡವಿಗೆ ಹೋದ ಮೇಲೆ ಯೋನಾತಾನನು ದಾವೀದನಿಗೆ - ಇಸ್ರಾಯೇಲ್‍ದೇವರಾದ ಯೆಹೋವನೇ ಸಾಕ್ಷಿ; ನಾನು ನಾಳೆ ಇಲ್ಲವೆ ನಾಡದು ನಿನ್ನ ವಿಷಯದಲ್ಲಿ ನನ್ನ ತಂದೆಯೊಡನೆ ಮಾತಾಡಿ ನಿನ್ನ ಮೇಲೆ ಅವನಿಗೆ ದಯವುಂಟೆಂದು ಗೊತ್ತಾದರೆ ಕೂಡಲೆ ನಿನಗೆ ತಿಳಿಯಪಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಯೋನಾತಾನನು ದಾವೀದನಿಗೆ, “ಇಸ್ರಾಯೇಲರ ದೇವರಾದ ಯೆಹೋವ ದೇವರೇ, ನಾನು ನಾಳೆ ನಾಡಿದ್ದರೊಳಗೆ ನನ್ನ ತಂದೆಯನ್ನು ವಿಚಾರಿಸಲು, ದಾವೀದನ ಮೇಲೆ ದಯೆ ಇದ್ದರೆ ನಿನಗೆ ತಿಳಿಸುವ ಹಾಗೆ ಹೇಳಿಕಳುಹಿಸದೆ ಇದ್ದರೆ, ಯೆಹೋವ ದೇವರು ಯೋನಾತಾನನಿಗೆ ಅದಕ್ಕಿಂತ ಅಧಿಕವಾಗಿ ಮಾಡಲಿ. ಅಧ್ಯಾಯವನ್ನು ನೋಡಿ |