Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 20:13 - ಪರಿಶುದ್ದ ಬೈಬಲ್‌

13 ನನ್ನ ತಂದೆಯು ನಿನಗೆ ಕೇಡುಮಾಡಬೇಕೆಂದಿದ್ದರೆ, ಅದನ್ನು ನಾನು ನಿನಗೆ ತಿಳಿಸಿ, ನೀನು ಸುರಕ್ಷಿತವಾಗಿರಲು ಅವಕಾಶ ಮಾಡಿಕೊಡುತ್ತೇನೆ. ಈ ಕಾರ್ಯವನ್ನು ನಾನು ಮಾಡದೆ ಹೋದರೆ ಯೆಹೋವನು ನನ್ನನ್ನು ದಂಡಿಸಲಿ. ಯೆಹೋವನು ನನ್ನ ತಂದೆಯ ಜೊತೆಯಲ್ಲಿದ್ದಂತೆ ನಿನ್ನ ಜೊತೆಯೂ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನನ್ನ ತಂದೆಯು ನಿನಗೆ ಕೇಡುಮಾಡುವ ಮನಸ್ಸುಳ್ಳವನಾಗಿದ್ದಾನೆಂದು ಗೊತ್ತಾದರೆ, ಅದನ್ನೂ ನಿನಗೆ ತಿಳಿಸಿ, ನೀನು ತಪ್ಪಿಸಿಕೊಂಡು ಸುರಕ್ಷಿತವಾಗುವ ಹಾಗೆ ನಿನ್ನನ್ನು ಕಳುಹಿಸಿಬಿಡುವೆನು. ಹಾಗೆ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ, ಆತನು ನನ್ನ ತಂದೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನನ್ನ ತಂದೆ ನಿನಗೆ ಕೇಡುಮಾಡಲು ಮನಸ್ಸುಮಾಡಿದ್ದಾರೆಂದು ಗೊತ್ತಾದರೆ, ಅದನ್ನೂ ನಿನಗೆ ತಿಳಿಸಿ ನೀನು ತಪ್ಪಿಸಿಕೊಂಡು ಸುರಕ್ಷಿತನಾಗುವ ಹಾಗೆ ನಿನ್ನನ್ನು ಕಳುಹಿಸಿಬಿಡುವೆನು. ಹಾಗೆ ಮಾಡದಿದ್ದರೆ, ಸರ್ವೇಶ್ವರ ನನಗೆ ಏನು ಬೇಕಾದರೂ ಮಾಡಲಿ. ಅವರು ನನ್ನ ತಂದೆಯೊಂದಿಗೆ ಇದ್ದಹಾಗೆ ನಿನ್ನೊಂದಿಗೂ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನನ್ನ ತಂದೆಯು ನಿನಗೆ ಕೇಡುಮಾಡ ಮನಸ್ಸುಳ್ಳವನಾಗಿದ್ದಾನೆಂದು ಗೊತ್ತಾದರೆ ಅದನ್ನೂ ನಿನಗೆ ತಿಳಿಸಿ ನೀನು ತಪ್ಪಿಸಿಕೊಂಡು ಸುರಕ್ಷಿತನಾಗುವ ಹಾಗೆ ನಿನ್ನನ್ನು ಕಳುಹಿಸಿಬಿಡುವೆನು. ಹಾಗೆ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ. ಆತನು ನನ್ನ ತಂದೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದರೆ ನಿನಗೆ ಕೇಡು ಮಾಡಲು ನನ್ನ ತಂದೆಗೆ ಮನಸ್ಸಾಗಿದ್ದರೆ, ಅದನ್ನು ನಿನಗೆ ತಿಳಿಸಿ ನೀನು ಸಮಾಧಾನದಿಂದ ಹೋಗುವಹಾಗೆ ನಿನ್ನನ್ನು ಕಳುಹಿಸುವೆನು. ಯೆಹೋವ ದೇವರು ನನ್ನ ತಂದೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 20:13
22 ತಿಳಿವುಗಳ ಹೋಲಿಕೆ  

ಬಂಗಾರದ ಕೆಲಸಗಾರರೂ ಬೆಳ್ಳಿ, ತಾಮ್ರ, ಕಬ್ಬಿಣದ ಕೆಲಸಗಾರರೂ ಲೆಕ್ಕವಿಲ್ಲದಷ್ಟು ಇದ್ದಾರೆ. ಈಗ ನೀನು ಕೆಲಸ ಪ್ರಾರಂಭಿಸು. ದೇವರು ನಿನ್ನ ಸಂಗಡವಿರಲಿ” ಎಂದು ಹೇಳಿದನು.


“ಮಗನೇ, ನೀನು ದೇವಾಲಯವನ್ನು ಕಟ್ಟುವಾಗ ಯೆಹೋವನು ನಿನ್ನ ಸಂಗಡವಿದ್ದು ನಿನಗೆ ಯಶಸ್ಸನ್ನು ದಯಪಾಲಿಸಲಿ.


ಯೆಹೋವನು ನನ್ನನ್ನು ಸಿಂಹದಿಂದಲೂ ಕರಡಿಯಿಂದಲೂ ರಕ್ಷಿಸಿದನು. ಯೆಹೋವನು ಈ ಗೊಲ್ಯಾತನಿಂದಲೂ ನನ್ನನ್ನು ರಕ್ಷಿಸುತ್ತಾನೆ” ಎಂದು ಹೇಳಿದನು. ಸೌಲನು ದಾವೀದನಿಗೆ, “ಹೋಗು, ಯೆಹೋವನು ನಿನ್ನೊಂದಿಗಿರಲಿ” ಎಂದು ಹೇಳಿದನು.


ನೀನು ಸಾಯುವಲ್ಲೇ ನಾನೂ ಸಾಯುವೆನು; ಅಲ್ಲಿಯೇ ನನಗೆ ಸಮಾಧಿಯಾಗಬೇಕು. ಈ ಪ್ರತಿಜ್ಞೆಯನ್ನು ನಾನು ಪೂರ್ಣಗೊಳಿಸದಿದ್ದರೆ ನನ್ನನ್ನು ಶಿಕ್ಷಿಸು ಎಂದು ನಾನು ಯೆಹೋವನಲ್ಲಿ ಕೇಳಿಕೊಳ್ಳುತ್ತೇನೆ. ಮರಣವು ಮಾತ್ರ ನಮ್ಮಿಬ್ಬರನ್ನು ಅಗಲಿಸಬಲ್ಲದು” ಎಂದು ದೃಢವಾಗಿ ಹೇಳಿದಳು.


ನಾನು ಮೋಶೆಯ ಸಂಗಡ ಇದ್ದಂತೆ ನಿನ್ನ ಸಂಗಡವೂ ಇರುತ್ತೇನೆ. ನಿನ್ನ ಜೀವಮಾನದಲ್ಲೆಲ್ಲಾ ಯಾವನೂ ನಿನ್ನನ್ನು ತಡೆಯಲಾರನು. ನಾನು ನಿನ್ನನ್ನು ಕೈಬಿಡುವುದಿಲ್ಲ; ತೊರೆದುಬಿಡುವುದಿಲ್ಲ” ಎಂದು ಹೇಳಿದನು.


ಏಲಿಯು, “ಯೆಹೋವನು ನಿನಗೆ ಹೇಳಿದ್ದೇನು? ನನ್ನೊಂದಿಗೆ ಅದನ್ನು ಮುಚ್ಚಿಡಬೇಡ. ಆತನು ನಿನ್ನೊಂದಿಗೆ ಆಡಿದ ಮಾತುಗಳಲ್ಲಿ ಏನನ್ನಾದರೂ ಮುಚ್ಚಿಟ್ಟರೆ ಆತನು ನಿನ್ನನ್ನು ಶಿಕ್ಷಿಸುತ್ತಾನೆ” ಎಂದು ತಿಳಿಸಿದನು.


ನೀವು ನನ್ನಿಂದ ಕಲಿತುಕೊಂಡದ್ದನ್ನು, ಹೊಂದಿಕೊಂಡದ್ದನ್ನು, ಕೇಳಿದ್ದನ್ನು ಮತ್ತು ಕಣ್ಣಾರೆ ಕಂಡದ್ದನ್ನು ಮಾಡಿರಿ. ಆಗ, ಶಾಂತಿಯನ್ನು ಕೊಡುವ ದೇವರು ನಿಮ್ಮೊಂದಿಗಿರುವನು.


ನಾನು ನಿಮಗೆ ಆಜ್ಞಾಪಿಸಿದವುಗಳಿಗೆಲ್ಲಾ ವಿಧೇಯರಾಗುವಂತೆ ಜನರಿಗೆ ಉಪದೇಶಿಸಿ, ಲೋಕಾಂತ್ಯದವರೆಗೂ ಸದಾಕಾಲ ನಾನು ನಿಮ್ಮೊಂದಿಗಿರುತ್ತೇನೆ” ಎಂದು ಹೇಳಿದನು.


ನಂತರ ಅವರು ಬೆನ್ಹದದನ ಮತ್ತೊಂದು ಸಂದೇಶದೊಂದಿಗೆ ಹಿಂದಿರುಗಿ ಬಂದರು. ಆ ಸಂದೇಶವು ಹೀಗಿತ್ತು: “ನಾನು ಸಮಾರ್ಯವನ್ನು ಸಂಪೂರ್ಣವಾಗಿ ನಾಶಗೊಳಿಸುತ್ತೇನೆ. ಆ ನಗರದಲ್ಲಿ ಏನನ್ನೂ ಉಳಿಸುವುದಿಲ್ಲವೆಂದು ನಾನು ಪ್ರಮಾಣ ಮಾಡುತ್ತೇನೆ. ನನ್ನ ಜನರು, ಆ ನಗರವನ್ನು ಕಂಡುಹಿಡಿಯಲಾಗದಂತೆ ಮತ್ತು ಮನೆಗೆ ತೆಗೆದುಕೊಂಡು ಹೋಗಲು ಒಂದು ಹಿಡಿ ಧೂಳೂ ಉಳಿಯದಂತೆ ಮಾಡಿಬಿಡುತ್ತಾರೆ. ನಾನು ಇದನ್ನು ಮಾಡದೆ ಹೋದರೆ ದೇವರು ನನ್ನನ್ನು ನಾಶಪಡಿಸಲಿ!”


ಆದ್ದರಿಂದ ಈಜೆಬೆಲಳು ಎಲೀಯನ ಬಳಿಗೆ ಒಬ್ಬ ಸಂದೇಶಕನನ್ನು ಕಳುಹಿಸಿದಳು. ಈಜೆಬೆಲಳು, “ನೀನು ಆ ಪ್ರವಾದಿಗಳನ್ನು ಕೊಂದುಹಾಕಿದಂತೆ ನಾಳೆಯ ದಿನ ನಾನು ಇದೇ ಸಮಯಕ್ಕೆ ಮುಂಚೆ, ನಿನ್ನನ್ನು ಕೊಂದುಹಾಕುವೆನೆಂದು ಪ್ರಮಾಣ ಮಾಡುತ್ತೇನೆ. ನಾನು ಈ ಕಾರ್ಯದಲ್ಲಿ ವಿಜಯಿಯಾಗದಿದ್ದಲ್ಲಿ, ದೇವರುಗಳು ನನ್ನನ್ನು ಕೊಲ್ಲಲಿ” ಎಂದು ಹೇಳಿದಳು.


ಅಲ್ಲದೆ ಅಮಾಸನಿಗೆ, ‘ನೀನು ನನ್ನ ಕುಟುಂಬದ ಒಂದು ಭಾಗವಾಗಿರುವೆ. ನಾನು ನಿನ್ನನ್ನು ಯೋವಾಬನ ಸ್ಥಾನದಲ್ಲಿ ಸೇನಾಪತಿಯನ್ನಾಗಿ ಮಾಡದೆ ಹೋದರೆ, ದೇವರು ನನ್ನನ್ನು ದಂಡಿಸಲಿ’ ಎಂದು ಹೇಳಿ” ಎಂದನು.


ಆದರೆ ನಾನು ಅವನನ್ನು ಪ್ರೀತಿಸುವುದನ್ನು ನಿಲ್ಲಿಸುವುದಿಲ್ಲ. ಅವನು ಯಾವಾಗಲೂ ನನ್ನ ಕರುಣಾಶ್ರಯದಲ್ಲಿರುವನು. ಸೌಲನ ಮೇಲಿಟ್ಟಿದ್ದ ಪ್ರೀತಿಯನ್ನು ಮತ್ತು ದಯೆಯನ್ನು ಹಿಂತೆಗೆದುಕೊಂಡೆನು. ಸೌಲನನ್ನು ನಿನ್ನ ಎದುರಿನಿಂದ ನಾನು ದೂರ ತಳ್ಳಿದೆನು. ನಾನು ನಿನ್ನ ಕುಟುಂಬಕ್ಕೆ ಹಾಗೆ ಮಾಡುವುದಿಲ್ಲ.


ಅಂದು ಹೊತ್ತು ಇಳಿಯುವ ಮೊದಲೇ ಜನರು ದಾವೀದನಿಗೆ ಊಟ ಮಾಡುವಂತೆ ಒತ್ತಾಯಿಸಿದರು. ಆದರೆ ದಾವೀದನು, “ಸೂರ್ಯನು ಮುಳುಗುವುದಕ್ಕೆ ಮುಂಚಿತವಾಗಿ ನಾನು ರೊಟ್ಟಿಯನ್ನಾಗಲಿ ಇತರ ಆಹಾರವನ್ನಾಗಲಿ ತಿಂದರೆ, ದೇವರು ನನ್ನನ್ನು ದಂಡಿಸಲಿ ಅಥವಾ ನನಗೆ ಕೇಡು ಬರಮಾಡಲಿ” ಎಂದು ಪ್ರತಿಜ್ಞೆ ಮಾಡಿದನು.


ನಾಳೆ ಬೆಳಗಾಗುವುದರೊಳಗಾಗಿ ನಾಬಾಲನ ಕುಟುಂಬದಲ್ಲಿ ಒಬ್ಬರಾದರೂ ಜೀವದಿಂದ ಉಳಿದುಕೊಳ್ಳಲು ನಾನು ಅವಕಾಶಕೊಟ್ಟರೆ ದೇವರು ನನ್ನನ್ನು ದಂಡಿಸಲಿ” ಎಂದು ಹೇಳಿದ್ದನು.


ಯೆಹೋವನು ಸೌಲನನ್ನು ಬಿಟ್ಟು ದಾವೀದನ ಜೊತೆಗಿದ್ದನು. ಆದ್ದರಿಂದ ಸೌಲನು ದಾವೀದನಿಗೆ ಭಯಪಟ್ಟನು.


ಸೌಲನು ಇಸ್ರೇಲನ್ನು ಪೂರ್ಣವಾಗಿ ಹತೋಟಿಯಲ್ಲಿಟ್ಟುಕೊಂಡು ತಾನು ರಾಜನೆಂಬುದನ್ನು ತೋರಿಸಿಕೊಟ್ಟನು. ಸೌಲನು ಇಸ್ರೇಲಿನ ಸುತ್ತಲೂ ವಾಸಿಸುತ್ತಿದ್ದ ಶತ್ರುಗಳೊಡನೆ ಅಂದರೆ ಮೋವಾಬ್ಯರೊಡನೆ, ಅಮ್ಮೋನಿಯರೊಡನೆ, ಎದೋಮ್ಯರೊಡನೆ, ಚೋಬದ ಅರಸರೊಡನೆ ಮತ್ತು ಫಿಲಿಷ್ಟಿಯರೊಡನೆ ಹೋರಾಡಿದನು. ಸೌಲನು ತಾನು ಹೋದ ಕಡೆಯಲ್ಲೆಲ್ಲಾ ಇಸ್ರೇಲರ ಶತ್ರುಗಳನ್ನು ಸೋಲಿಸಿದನು.


ಈ ಕಾರ್ಯಗಳು ಸಂಭವಿಸಿದ ಮೇಲೆ, ನೀನು ನಿನ್ನ ನಿರ್ಧಾರದಂತೆ ಮಾಡು. ಯಾಕೆಂದರೆ ದೇವರು ನಿನ್ನೊಂದಿಗಿರುತ್ತಾನೆ.


ನಾನು ನನ್ನ ತಂದೆಯೊಡನೆ ಹೊಲಕ್ಕೆ ಬರುತ್ತೇನೆ. ನೀನು ಅಡಗಿರುವ ಸ್ಥಳದ ಹತ್ತಿರ ನಾವು ನಿಲ್ಲುತ್ತೇವೆ. ನಾನು ನನ್ನ ತಂದೆಯೊಡನೆ ನಿನ್ನ ಬಗ್ಗೆ ಮಾತನಾಡುತ್ತೇನೆ. ನಂತರ ನಾನು ತಿಳಿದುಕೊಂಡದ್ದನ್ನು ನಿನಗೆ ಹೇಳುತ್ತೇನೆ” ಎಂದನು.


ಯೋನಾತಾನನು ದಾವೀದನಿಗೆ, “ನಾನು ಇಸ್ರೇಲರ ದೇವರಾದ ಯೆಹೋವನ ಎದುರಿನಲ್ಲಿ ಈ ಪ್ರಮಾಣವನ್ನು ಮಾಡುತ್ತೇನೆ. ನನ್ನ ತಂದೆಯು ನಿನ್ನ ಬಗ್ಗೆ ಒಳ್ಳೆಯ ಭಾವನೆಯನ್ನು ಹೊಂದಿರುವನೊ ಇಲ್ಲವೊ ಎಂಬುದನ್ನು ತಿಳಿದುಕೊಳ್ಳುತ್ತೇನೆ. ನಂತರ ಸಂದೇಶವೊಂದನ್ನು ನಾನು ಮೂರು ದಿನಗಳೊಳಗಾಗಿ ನಿನಗೆ ಕಳುಹಿಸಿಕೊಡುತ್ತೇನೆ.


ನನ್ನ ಜೀವಮಾನವೆಲ್ಲಾ ನೀನು ನನಗೆ ದಯಾಳುವಾಗಿರು.


ನನ್ನ ಒಡೆಯನಾದ ರಾಜನೇ, ನಿನಗೆ ಯಾವಾಗಲೂ ಸಹಾಯಮಾಡಿದ ಯೆಹೋವನು ಸೊಲೊಮೋನನಿಗೂ ಸಹಾಯ ಮಾಡಲಿ. ನಿನ್ನ ರಾಜ್ಯಕ್ಕಿಂತಲೂ ಸೊಲೊಮೋನನ ರಾಜ್ಯವು ಹೆಚ್ಚು ಬಲಿಷ್ಠವಾಗಲಿ.” ಎಂದು ಉತ್ತರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು