Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 20:2 - ಪರಿಶುದ್ದ ಬೈಬಲ್‌

2 ಯೋನಾತಾನನು, “ಎಂದಿಗೂ ಇಲ್ಲ. ನನ್ನ ತಂದೆಯು ನಿನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿಲ್ಲ! ನನ್ನ ತಂದೆಯು ನನಗೆ ತಿಳಿಸದೆ ಏನನ್ನೂ ಮಾಡುವುದಿಲ್ಲ. ಅದು ಬಹು ಮುಖ್ಯವಾದದ್ದೇ ಆಗಿರಲಿ ಇಲ್ಲವೆ ಮುಖ್ಯವಾಗಿಲ್ಲದ್ದೇ ಆಗಿರಲಿ, ನನ್ನ ತಂದೆಯು ನನಗೆ ತಿಳಿಸೇ ತಿಳಿಸುತ್ತಾನೆ. ನನ್ನ ತಂದೆಯು ನಿನ್ನನ್ನು ಕೊಲ್ಲಬೇಕೆಂದಿದ್ದರೆ ನಾನು ನಿನಗೆ ತಿಳಿಸುತ್ತಿರಲಿಲ್ಲವೇ?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೋನಾತಾನನು ಅವನಿಗೆ, “ಇದು ಆಗಲೇಬಾರದು, ನಿನಗೆ ಮರಣವಾಗಕೂಡದು. ನನ್ನ ತಂದೆಯು ಅಲ್ಪಕಾರ್ಯವನ್ನಾಗಲಿ, ಮಹಾಕಾರ್ಯವನ್ನಾಗಲಿ ನನಗೆ ತಿಳಿಸದೇ ಮಾಡುವುದಿಲ್ಲ. ಈ ಕಾರ್ಯವನ್ನು ನನಗೆ ಹೇಗೆ ಮರೆಮಾಡಲು ಸಾಧ್ಯ?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಯೋನಾತಾನನು ಅವನಿಗೆ, “ಇದು ಎಂದಿಗೂ ಆಗಲೇಬಾರದು; ನಿನಗೆ ಮರಣವಾಗಕೂಡದು. ನನ್ನ ತಂದೆ ಚಿಕ್ಕಕಾರ್ಯವನ್ನಾಗಲಿ ದೊಡ್ಡಕಾರ್ಯವನ್ನಾಗಲಿ ನನಗೆ ತಿಳಿಸದೆ ಮಾಡುವುದಿಲ್ಲ; ಇಂಥ ಕಾರ್ಯವನ್ನು ನನಗೆ ಹೇಗೆ ಮರೆಮಾಡಿಯಾರು? ಇಲ್ಲ, ಇದು ನಿಜವಲ್ಲ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇದು ಆಗಲೇಬಾರದು; ನಿನಗೆ ಮರಣವಾಗಕೂಡದು, ನನ್ನ ತಂದೆಯು ಅಲ್ಪಕಾರ್ಯವನ್ನಾಗಲಿ ಅಧಿಕಕಾರ್ಯವನ್ನಾಗಲಿ ನನಗೆ ತಿಳಿಸದೆ ಮಾಡುವದಿಲ್ಲ; ಈ ಕಾರ್ಯವನ್ನು ನನಗೆ ಹೇಗೆ ಮರೆಮಾಡಾನು? ಆಗುವದಿಲ್ಲ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೋನಾತಾನನು ಅವನಿಗೆ, “ಅದು ಆಗಬಾರದು. ನೀನು ಸಾಯುವುದಿಲ್ಲ; ನನ್ನ ತಂದೆಯು ನನಗೆ ತಿಳಿಸದೆ ಯಾವ ಚಿಕ್ಕ ಕಾರ್ಯವನ್ನಾದರೂ, ದೊಡ್ಡ ಕಾರ್ಯವನ್ನಾದರೂ ಮಾಡುವುದಿಲ್ಲ. ಈ ಕಾರ್ಯವನ್ನು ಯಾತಕ್ಕೆ ನನ್ನ ತಂದೆಯು ನನಗೆ ಬಚ್ಚಿಟ್ಟನು? ಹಾಗೆ ಆಗದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 20:2
14 ತಿಳಿವುಗಳ ಹೋಲಿಕೆ  

ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಆ ಮಾತುಗಳನ್ನು ಸ್ವೀಕರಿಸಿಕೊಂಡಿದ್ದಾರೆ. ನಾನು ನಿಜವಾಗಿಯೂ ನಿನ್ನ ಬಳಿಯಿಂದ ಬಂದಿರುವುದಾಗಿಯೂ ನೀನೇ ನನ್ನನ್ನು ಕಳುಹಿಸಿರುವುದಾಗಿಯೂ ಇವರು ನಂಬಿದ್ದಾರೆ.


ಹಿಂದಿನ ದಿನ, ಯೆಹೋವನು ಸಮುವೇಲನಿಗೆ,


ಯೋನಾತಾನನು ದಾವೀದನಿಗೆ, “ನಾನು ಇಸ್ರೇಲರ ದೇವರಾದ ಯೆಹೋವನ ಎದುರಿನಲ್ಲಿ ಈ ಪ್ರಮಾಣವನ್ನು ಮಾಡುತ್ತೇನೆ. ನನ್ನ ತಂದೆಯು ನಿನ್ನ ಬಗ್ಗೆ ಒಳ್ಳೆಯ ಭಾವನೆಯನ್ನು ಹೊಂದಿರುವನೊ ಇಲ್ಲವೊ ಎಂಬುದನ್ನು ತಿಳಿದುಕೊಳ್ಳುತ್ತೇನೆ. ನಂತರ ಸಂದೇಶವೊಂದನ್ನು ನಾನು ಮೂರು ದಿನಗಳೊಳಗಾಗಿ ನಿನಗೆ ಕಳುಹಿಸಿಕೊಡುತ್ತೇನೆ.


ಆದರೆ ಸೈನಿಕರು ಸೌಲನಿಗೆ, “ಈ ದಿನ ಇಸ್ರೇಲರನ್ನು ಮುನ್ನಡೆಸಿ ಮಹಾವಿಜಯವನ್ನು ಉಂಟುಮಾಡಿದ ಯೋನಾತಾನನು ಸಾಯಬೇಕೋ? ಇಲ್ಲ! ಜೀವಸ್ವರೂಪನಾದ ಯೆಹೋವನಾಣೆ, ಯೋನಾತಾನನ ತಲೆಕೂದಲುಗಳಲ್ಲಿ ಒಂದಾದರೂ ನೆಲಕ್ಕೆ ಬೀಳಲು ನಾವು ಬಿಡುವುದಿಲ್ಲ. ಇಂದು ಫಿಲಿಷ್ಟಿಯರ ವಿರುದ್ಧ ಹೋರಾಡಲು ದೇವರು ಯೋನಾತಾನನಿಗೆ ಸಹಾಯಮಾಡಿದ್ದಾನೆ” ಎಂದು ಹೇಳಿದರು. ಹೀಗೆ ಜನರು ಯೋನಾತಾನನನ್ನು ರಕ್ಷಿಸಿದರು. ಅವನನ್ನು ಸಾಯಿಸಲಿಲ್ಲ.


“ಯೆಹೋವನಿಗೆ ವಿರೋಧಿಗಳಾಗಲು ನಮಗೆ ನಿಜವಾಗಿಯೂ ಇಷ್ಟವಿಲ್ಲ. ಆತನಿಗೆ ಅವಿಧೇಯರಾಗುವುದಕ್ಕೂ ಇಷ್ಟವಿಲ್ಲ. ನಿಜವಾದ ಯಜ್ಞವೇದಿಕೆಯು ಪವಿತ್ರಗುಡಾರದ ಎದುರಿಗೆ ಮಾತ್ರ ಇದೆ. ಆ ಯಜ್ಞವೇದಿಕೆಯು ನಮ್ಮ ದೇವರಾದ ಯೆಹೋವನದು ಎಂಬುದನ್ನು ನಾವು ಬಲ್ಲೆವು” ಎಂಬುದಾಗಿ ಉತ್ತರಕೊಟ್ಟರು.


ಆದರೆ ಸಹೋದರರು ಸೇವಕನಿಗೆ, “ರಾಜ್ಯಪಾಲನು ಈ ರೀತಿ ಹೇಳುವುದೇಕೆ? ನಾವು ಇಂಥಾ ಕೃತ್ಯವನ್ನು ಮಾಡಿಲ್ಲ.


ಈಗ ನಾನು ನಿಮ್ಮನ್ನು ನನ್ನ ಸೇವಕರುಗಳೆಂದು ಕರೆಯುವುದಿಲ್ಲ. ಯಜಮಾನನ ಕೆಲಸಕಾರ್ಯಗಳು ಸೇವಕನಿಗೆ ತಿಳಿದಿರುವುದಿಲ್ಲ. ಆದರೆ ಈಗ ನಾನು ನಿಮ್ಮನ್ನು ನನ್ನ ಗೆಳೆಯರೆಂದು ಕರೆಯುತ್ತೇನೆ. ಏಕೆಂದರೆ ನನ್ನ ತಂದೆಯಿಂದ ಕೇಳಿದ ಪ್ರತಿಯೊಂದನ್ನೂ ನಾನು ನಿಮಗೆ ಹೇಳಿದ್ದೇನೆ.


ಅವನು ಬಂದು ಆ ರೈತರನ್ನು ಕೊಲ್ಲುವನು! ಬಳಿಕ ಅವನು ಆ ತೋಟವನ್ನು ಬೇರೆ ಕೆಲವು ರೈತರಿಗೆ ಕೊಡುವನು.” ಜನರು ಈ ಸಾಮ್ಯವನ್ನು ಕೇಳಿ, “ಇಲ್ಲ! ಹಾಗೆಂದಿಗೂ ಆಗಬಾರದು!” ಅಂದರು.


ನನ್ನ ಒಡೆಯನಾದ ಯೆಹೋವನು ನನಗೆ ಕಲಿಯಲು ಸಹಾಯ ಮಾಡುತ್ತಾನೆ. ನಾನು ಆತನಿಗೆ ವಿರುದ್ಧವಾಗಿ ದಂಗೆ ಏಳಲಿಲ್ಲ. ಆತನನ್ನು ಹಿಂಬಾಲಿಸುವದನ್ನು ನಿಲ್ಲಿಸುವದಿಲ್ಲ.


ನಾನು ಗ್ರಹಿಸಿಕೊಂಡಿದ್ದೇನೆಂದರೆ, ಯಜ್ಞಗಳಾಗಲಿ ಧಾನ್ಯಸಮರ್ಪಣೆಗಳಾಗಲಿ ಸರ್ವಾಂಗಹೋಮಗಳಾಗಲಿ ಪಾಪಪರಿಹಾರಕ ಯಜ್ಞಗಳಾಗಲಿ ನಿನಗೆ ಬೇಕಿಲ್ಲ.


ಅದಕ್ಕೆ ಜನರು, “ನಾವು ಯೆಹೋವನನ್ನು ಅನುಸರಿಸುವುದನ್ನು ಎಂದಿಗೂ ನಿಲ್ಲಿಸುವದಿಲ್ಲ. ನಾವು ಬೇರೆ ದೇವರುಗಳ ಸೇವೆಯನ್ನು ಎಂದಿಗೂ ಮಾಡುವುದಿಲ್ಲ.


ದಾವೀದನು ರಾಮದ ಪಾಳೆಯದಿಂದ ಓಡಿಹೋದನು. ದಾವೀದನು ಯೋನಾತಾನನ ಬಳಿಗೆ ಹೋಗಿ, “ನಾನು ಮಾಡಿರುವ ತಪ್ಪೇನು? ನನ್ನ ಅಪರಾಧವೇನು? ನಿನ್ನ ತಂದೆಯು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿರುವುದೇಕೆ?” ಎಂದು ಕೇಳಿದನು.


ಆದರೆ ದಾವೀದನು, “ನಾನು ನಿನ್ನ ಗೆಳೆಯನೆಂಬುದು ನಿನ್ನ ತಂದೆಗೆ ಚೆನ್ನಾಗಿ ತಿಳಿದಿದೆ. ನಿನ್ನ ತಂದೆಯು, ‘ಯೋನಾತಾನನಿಗೆ ಇದು ತಿಳಿಯಲೇಬಾರದು. ಅವನಿಗೆ ತಿಳಿದುಬಿಟ್ಟರೆ ಅವನು ತನ್ನ ಹೃದಯದಲ್ಲಿ ದುಃಖಪಟ್ಟು ದಾವೀದನಿಗೆ ಹೇಳಿಬಿಡುತ್ತಾನೆ’ ಎಂದುಕೊಂಡಿದ್ದಾನೆ. ಯೆಹೋವನಾಣೆ, ನಿನ್ನ ಜೀವದಾಣೆ, ನಾನು ಸಾವಿಗೆ ಬಹು ಹತ್ತಿರವಾಗಿದ್ದೇನೆ” ಎಂದು ಹೇಳಿದನು.


ಕಳ್ಳನ ಸಂಗಡಿಗನು ತನಗೆ ತಾನೆ ಕಡುವೈರಿ. ಸಾಕ್ಷಿ ಹೇಳದ ಜನರಿಗೆ ಬರತಕ್ಕ ಶಾಪದ ಬಗ್ಗೆ ಕೇಳಿದರೂ ಅವನು ಹೇಳುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು