Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 20:21 - ಪರಿಶುದ್ದ ಬೈಬಲ್‌

21 ನಂತರ ಆ ಬಾಣಗಳನ್ನು ಹುಡುಕಿಕೊಂಡು ಬರಲು ಹುಡುಗನನ್ನು ಕಳುಹಿಸುತ್ತೇನೆ. ಎಲ್ಲವೂ ಒಳಿತಾಗಿದ್ದರೆ ನಾನು ಆ ಹುಡುಗನಿಗೆ, ‘ನೀನು ಬಹು ದೂರ ಹೋಗಿರುವೆ! ಬಾಣಗಳು ನನ್ನ ಹತ್ತಿರದಲ್ಲೇ ಇವೆ. ಹಿಂತಿರುಗಿಬಂದು ಅವುಗಳನ್ನು ತೆಗೆದುಕೋ’ ಎಂದು ಹೇಳುತ್ತೇನೆ. ನಾನು ಆ ರೀತಿ ಹೇಳಿದರೆ, ನೀನು ಅಡಗಿದ್ದ ಸ್ಥಳದಿಂದ ಹೊರಗೆ ಬಾ. ಯೆಹೋವನಾಣೆ, ನೀನು ಸುರಕ್ಷಿತನಾಗಿರುವೆ. ನಿನಗೆ ಯಾವ ಅಪಾಯವೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ತರುವುದಕ್ಕಾಗಿ ನನ್ನ ಆಳುಗಳನ್ನು ಕಳುಹಿಸುವೆನು. ನಾನು ಅವನಿಗೆ, ‘ಬಾಣಗಳು ಈಚೆ ಬಿದ್ದಿರುತ್ತವೆ ಅವುಗಳನ್ನು ತೆಗೆದುಕೊಂಡು ಬಾ’ ಎಂದು ಹೇಳಿದರೆ ನೀನು ಬಾ ಯೆಹೋವನ ಆಣೆ ಯಾವ ಕೇಡು ಸಂಭವಿಸದೆ ಸುರಕ್ಷಿತನಾಗಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನಾನು ಅವನಿಗೆ, ‘ಬಾಣಗಳು ಈಚೆ ಬಿದ್ದಿರುತ್ತವೆ; ಅವುಗಳನ್ನು ತೆಗೆದುಕೊಂಡು ಬಾ’ ಎಂದು ಹೇಳಿದರೆ ನೀನು ಬಾ; ಸರ್ವೇಶ್ವರನಾಣೆ, ಯಾವ ಕೇಡೂ ಸಂಭವಿಸದೆ ಸುರಕ್ಷಿತನಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅವುಗಳನ್ನು ತರುವದಕ್ಕಾಗಿ ನನ್ನ ಆಳನ್ನು ಕಳುಹಿಸುವೆನು. ನಾನು ಅವನಿಗೆ - ಬಾಣಗಳು ಈಚೆ ಬಿದ್ದಿರುತ್ತವೆ; ಅವುಗಳನ್ನು ತೆಗೆದುಕೊಂಡು ಬಾ ಎಂದು ಹೇಳಿದರೆ ನೀನು ಬಾ; ಯೆಹೋವನಾಣೆ, ಯಾವ ಕೇಡೂ ಸಂಭವಿಸದೆ ಸುರಕ್ಷಿತನಾಗಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅನಂತರ ಹುಡುಗನನ್ನು ಕಳುಹಿಸಿ, ‘ಆ ಬಾಣಗಳನ್ನು ಹುಡುಕಿಕೊಂಡು ಬಾ,’ ಎಂದು ಹೇಳುವೆನು. ‘ಆ ಬಾಣಗಳು ನಿನಗೆ ಈಚೆ ಬಿದ್ದಿವೆ, ಅವುಗಳನ್ನು ತೆಗೆದುಕೊಂಡು ಬಾ,’ ಎಂದು ನಾನು ಹುಡುಗನಿಗೆ ಹೇಳಿದರೆ, ನೀನು ಬರಬಹುದು. ಏಕೆಂದರೆ ಯೆಹೋವ ದೇವರಾಣೆ, ನಿನಗೆ ಕೇಡಿಲ್ಲದೆ ಸಮಾಧಾನವಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 20:21
7 ತಿಳಿವುಗಳ ಹೋಲಿಕೆ  

ಆ ಜನರು ಸಮಾರ್ಯದ ಪಾಪದ ಮೇಲೆ ಆಣೆಯಿಡುವರು, ‘ದಾನೇ, ನಿನ್ನ ದೇವರಾಣೆ ….’ ‘ಬೇರ್ಷೆಬದ ದೇವರಾಣೆ ….’ ಎಂಬುದಾಗಿ ಹೇಳುವರು. ಆದರೆ ಆ ಜನರು ಬಿದ್ದುಹೋಗುವರು. ಅಲ್ಲಿಂದ ತಿರುಗಿ ಏಳುವದೇ ಇಲ್ಲ.”


ಆ ಜನರು ತಮ್ಮ ಪಾಠಗಳನ್ನು ಸರಿಯಾಗಿ ಕಲಿತುಕೊಳ್ಳಬೇಕೆಂಬುದು ನನ್ನ ಅಪೇಕ್ಷೆ. ಮೊದಲು, ಆ ಜನರು ಬಾಳನ ಹೆಸರೆತ್ತಿ ಪ್ರಮಾಣ ಮಾಡುವುದನ್ನು ನನ್ನ ಜನರಿಗೆ ಕಲಿಸಿಕೊಟ್ಟರು. ಈಗ ಆ ಜನರು ಅದೇ ರೀತಿಯಲ್ಲಿ ತಮ್ಮ ಪಾಠವನ್ನು ಕಲಿತುಕೊಳ್ಳಬೇಕೆಂಬುದು ನನ್ನ ಇಚ್ಛೆ. ಅವರು, ‘ಯೆಹೋವನ ಜೀವದಾಣೆ’ ಎಂದು ಹೇಳಿದರೆ ಅವರನ್ನು ಅಭಿವೃದ್ಧಿಪಡಿಸಿ ಅವರನ್ನು ನಮ್ಮ ಜನರ ಮಧ್ಯದಲ್ಲಿ ನೆಲೆಗೊಳಿಸುವೆನು.


ಜನರು ಆಣೆ ಮಾಡುವಾಗ ‘ಯೆಹೋವನಾಣೆ’ ಎಂದು ಹೇಳುವರು. ಆದರೆ ಅದು ಕೇವಲ ಬಾಯಿ ಮಾತಷ್ಟೇ ಹೊರತು ಯಥಾರ್ಥವಾದದ್ದಲ್ಲ.”


ನೀನು ಹೀಗೆ ಮಾಡಿದರೆ ನನ್ನ ಹೆಸರಿನ ಮೇಲೆ ಪ್ರಮಾಣ ಮಾಡಲು ಶಕ್ತಳಾಗುವೆ. ‘ಹಾದು, ಯೆಹೋವನಾಣೆ’ ಎಂದು ಹೇಳಶಕ್ತಳಾಗುವೆ. ನೀನು ಆ ಪದಗಳನ್ನು ಸತ್ಯವಾಗಿಯೂ ಪ್ರಾಮಾಣಿಕವಾಗಿಯೂ ಸರಿಯಾಗಿ ಉಪಯೋಗಿಸಲು ಸಾಧ್ಯವಾಗುತ್ತದೆ. ನೀನು ಹೀಗೆ ಮಾಡಿದರೆ, ಎಲ್ಲಾ ಜನಾಂಗಗಳು ಯೆಹೋವನ ಆಶೀರ್ವಾದವನ್ನು ಪಡೆಯುತ್ತವೆ. ಆತನ ಕಾರ್ಯಗಳಿಗಾಗಿ ಆತನಿಗೆ ಸ್ತೋತ್ರ ಮಾಡುತ್ತವೆ.”


ಮೂರನೆಯ ದಿನ, ನಾನು ಆ ಬೆಟ್ಟಕ್ಕೆ ಹೋಗುತ್ತೇನೆ ಮತ್ತು ಗುರಿಯಿಟ್ಟು ಹೊಡೆಯುವವನಂತೆ ಕೆಲವು ಬಾಣಗಳನ್ನು ಹೊಡೆಯುತ್ತೇನೆ.


ಆದರೆ ಅಲ್ಲಿ ತೊಂದರೆಯಿರುವುದಾದರೆ, ನಾನು ಆ ಹುಡುಗನಿಗೆ, ‘ಬಾಣಗಳು ಬಹಳ ದೂರದಲ್ಲಿವೆ. ಹೋಗಿ ಅವುಗಳನ್ನು ತೆಗೆದುಕೊಂಡು ಬಾ’ ಎಂದು ಹೇಳುವೆ. ನಾನು ಆ ರೀತಿ ಹೇಳಿದರೆ, ನೀನು ಅಲ್ಲಿಂದ ಹೊರಟುಹೋಗು. ಯೆಹೋವನೇ ನಿನ್ನನ್ನು ದೂರ ಕಳುಹಿಸುತ್ತಿದ್ದಾನೆ.


ಯೋನಾತಾನನು ಆ ಬಾಲಕನಿಗೆ, “ನಾನು ಪ್ರಯೋಗಿಸುವ ಬಾಣಗಳನ್ನು ಹುಡುಕಲು ಹೋಗು” ಎಂದು ಹೇಳಿದನು. ಬಾಲಕನು ಓಡಲು ಆರಂಭಿಸಿದನು, ಯೋನಾತಾನನು ಆ ಬಾಲಕನ ಆಚೆಗೆ ಬಾಣಗಳನ್ನು ಪ್ರಯೋಗಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು