Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 20:25 - ಪರಿಶುದ್ದ ಬೈಬಲ್‌

25 ರಾಜನು ತಾನು ಯಾವಾಗಲೂ ಕುಳಿತುಕೊಳ್ಳುವಂತೆ ಗೋಡೆಯ ಸಮೀಪದಲ್ಲಿ ಕುಳಿತುಕೊಂಡನು. ಯೋನಾತಾನನು ಸೌಲನ ಎದುರಾಗಿ ಕುಳಿತುಕೊಂಡನು. ಸೌಲನ ಪಕ್ಕದಲ್ಲಿ ಅಬ್ನೇರನು ಕುಳಿತುಕೊಂಡನು. ಆದರೆ ದಾವೀದನ ಸ್ಥಳವು ಖಾಲಿಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅರಸನು ಅಮಾವಾಸ್ಯೆ ದಿನ, ಪದ್ದತಿಯ ಪ್ರಕಾರ ಗೋಡೆಯ ಬಳಿಯಲ್ಲಿರುವ ತನ್ನ ಆಸನದ ಮೇಲೆ ಭೋಜನಕ್ಕೆ ಕುಳಿತುಕೊಂಡನು. ಅರಸನ ಎದುರಾಗಿ ಯೋನಾತಾನನೂ, ಅರಸನ ಪಕ್ಕದಲ್ಲಿ ಅಬ್ನೇರನೂ ಕುಳಿತುಕೊಂಡನು. ಸೌಲನು ದಾವೀದನ ಸ್ಥಳವು ಬರಿದಾಗಿರುವುದನ್ನು ಕಂಡರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅರಸನು ಶುದ್ಧಪಾಡ್ಯಮಿಯ ದಿವಸ ಪದ್ಧತಿಯ ಪ್ರಕಾರ ಗೋಡೆಯ ಬಳಿಯಲ್ಲಿ ಇರುವ ತನ್ನ ಆಸನದ ಮೇಲೆ ಭೋಜನಕ್ಕೆ ಕುಳಿತುಕೊಂಡನು. ಅವನ ಪಾರ್ಶ್ವದಲ್ಲಿ ಅಬ್ನೇರನೂ ಕುಳಿತುಕೊಂಡನು. ಸೌಲನು ದಾವೀದನ ಸ್ಥಳ ಬರಿದಾಗಿರುವುದನ್ನು ಕಂಡರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅರಸನು ಶುದ್ಧಪಾಡ್ಯದ ದಿವಸ ಪದ್ಧತಿಯ ಪ್ರಕಾರ ಗೋಡೆಯ ಬಳಿಯಲ್ಲಿರುವ ತನ್ನ ಆಸನದ ಮೇಲೆ ಭೋಜನಕ್ಕೆ ಕೂತುಕೊಂಡನು. ಅವನ ಎದುರಾಗಿ ಯೋನಾತಾನನೂ ಅವನ ಪಾರ್ಶ್ವದಲ್ಲಿ ಅಬ್ನೇರನೂ ಕೂತುಕೊಂಡರು. ಸೌಲನು ದಾವೀದನ ಸ್ಥಳವು ಬರಿದಾಗಿರುವದನ್ನು ಕಂಡರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅರಸನು ಎಂದಿನಂತೆ ಗೋಡೆಯ ಬಳಿಯಲ್ಲಿ ಇರುವ ತನ್ನ ಆಸನದ ಮೇಲೆ ಕುಳಿತಾಗ, ಯೋನಾತಾನನು ಎದ್ದನು ಆದರೆ ಅಬ್ನೇರನು ಸೌಲನ ಬಳಿಯಲ್ಲಿ ಕುಳಿತನು. ದಾವೀದನು ಇರುವ ಸ್ಥಳವು ಬರಿದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 20:25
3 ತಿಳಿವುಗಳ ಹೋಲಿಕೆ  

ಯೋನಾತಾನನು ದಾವೀದನಿಗೆ, “ನಾಳೆ ಅಮಾವಾಸ್ಯೆಯ ಔತಣ. ನಿನ್ನ ಸ್ಥಳವು ಖಾಲಿಯಾಗಿರುವುದನ್ನು ನನ್ನ ತಂದೆಯು ಕಂಡು, ನೀನು ಹೊರಟುಹೋಗಿರುವೆ ಎಂದು ತಿಳಿದುಕೊಳ್ಳುವನು.


ಆಮೇಲೆ ದೆಲೀಲಳು ಅವನನ್ನು, “ಸಂಸೋನನೇ, ಫಿಲಿಷ್ಟಿಯರು ನಿನ್ನನ್ನು ಬಂಧಿಸಲಿದ್ದಾರೆ” ಎಂದು ಕೂಗಿದಳು. ಅವನು ಎಚ್ಚೆತ್ತನು. “ಮುಂಚಿನಂತೆಯೇ ನಾನು ತಪ್ಪಿಸಿಕೊಳ್ಳುವೆನು” ಎಂದು ಅವನು ತಿಳಿದಿದ್ದನು. ಆದರೆ ಯೆಹೋವನು ಅವನನ್ನು ಬಿಟ್ಟುಹೋಗಿದ್ದಾನೆಂಬುದು ಅವನಿಗೆ ಗೊತ್ತಾಗಲಿಲ್ಲ.


ನಂತರ ದಾವೀದನು ಹೊಲದಲ್ಲಿ ಅಡಗಿಕೊಂಡನು. ಅಮಾವಾಸ್ಯೆಯ ಔತಣದ ಸಮಯವು ಬಂದಿತು. ರಾಜನು ಊಟಕ್ಕೆ ಕುಳಿತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು