Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 20:27 - ಪರಿಶುದ್ದ ಬೈಬಲ್‌

27 ಮಾರನೆಯ ದಿನದಲ್ಲಿ, ಅಂದರೆ ಆ ತಿಂಗಳ ಎರಡನೆಯ ದಿನದಲ್ಲಿ ದಾವೀದನ ಸ್ಥಳವು ಮತ್ತೆ ಖಾಲಿಯಾಗಿತ್ತು. ಆಗ ಸೌಲನು ತನ್ನ ಮಗನಾದ ಯೋನಾತಾನನಿಗೆ, “ನಿನ್ನೆ ಮತ್ತು ಇಂದು ಅಮಾವಾಸ್ಯೆ ಔತಣಕ್ಕೆ ಇಷಯನ ಮಗನಾದ ದಾವೀದನು ಏಕೆ ಬರಲಿಲ್ಲ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಮರುದಿನದಲ್ಲಿಯೂ, ಅಂದರೆ ತಿಂಗಳಿನ ಎರಡನೆಯ ದಿನದಲ್ಲಿಯೂ ದಾವೀದನ ಸ್ಥಾನ ಬರಿದಾಗಿದ್ದರಿಂದ ಸೌಲನು, “ಇಷಯನ ಮಗನು ನಿನ್ನೆಯೂ, ಈ ಹೊತ್ತೂ ಭೋಜನಕ್ಕೆ ಯಾಕೆ ಬರಲಿಲ್ಲ?” ಎಂದು ತನ್ನ ಮಗನಾದ ಯೋನಾತಾನನನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಮರುದಿವಸದಲ್ಲಿಯೂ, ಅಂದರೆ ತಿಂಗಳಿನ ಎರಡನೆಯ ದಿವಸದಲ್ಲಿಯೂ, ದಾವೀದನ ಸ್ಥಾನ ಬರಿದಾಗಿದ್ದುದರಿಂದ ಸೌಲನು, “ಜೆಸ್ಸೆಯನ ಮಗ ನಿನ್ನೆಯೂ ಈ ಹೊತ್ತೂ ಭೋಜನಕ್ಕೆ ಏಕೆ ಬರಲಿಲ್ಲ?” ಎಂದು ತನ್ನ ಮಗ ಯೋನಾತಾನನನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಮರುದಿವಸದಲ್ಲಿಯೂ ಅಂದರೆ ತಿಂಗಳಿನ ಎರಡನೆಯ ದಿವಸದಲ್ಲಿಯೂ ದಾವೀದನ ಸ್ಥಾನವು ಬರಿದಾಗಿದ್ದದರಿಂದ ಸೌಲನು - ಇಷಯನ ಮಗನು ನಿನ್ನೆಯೂ ಈ ಹೊತ್ತೂ ಭೋಜನಕ್ಕೆ ಯಾಕೆ ಬರಲಿಲ್ಲ ಎಂದು ತನ್ನ ಮಗನಾದ ಯೋನಾತಾನನನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅಮಾವಾಸ್ಯೆಯ ಮಾರನೆಯ ದಿವಸದಲ್ಲಿ ಅಂದರೆ ತಿಂಗಳಿನ ಎರಡನೆಯ ದಿವಸದಲ್ಲಿ ದಾವೀದನು ಕೂಡುವ ಸ್ಥಳವು ಹಾಗೆಯೇ ಬರಿದಾಗಿತ್ತು. ಆದ್ದರಿಂದ ಸೌಲನು, “ಇಷಯನ ಮಗನು ನಿನ್ನೆಯೂ ಈ ಹೊತ್ತೂ ಭೋಜನಕ್ಕೆ ಏಕೆ ಬರಲಿಲ್ಲ?” ಎಂದು ತನ್ನ ಪುತ್ರನಾದ ಯೋನಾತಾನನನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 20:27
12 ತಿಳಿವುಗಳ ಹೋಲಿಕೆ  

ಪ್ರಭುವಾದ ಯೇಸುವೇ ಜೀವವುಳ್ಳ “ಕಲ್ಲು.” ಈ ಲೋಕದ ಜನರು ತಮಗೆ ಆ “ಕಲ್ಲು” (ಯೇಸು) ಬೇಡವೆಂದು ತೀರ್ಮಾನಿಸಿದರು. ಆದರೆ ಆತನು ದೇವರಿಂದ ಆರಿಸಲ್ಪಟ್ಟ “ಕಲ್ಲು.” ಆತನು ದೇವರಿಗೆ ಅಮೂಲ್ಯನಾಗಿದ್ದಾನೆ. ಆದ್ದರಿಂದ ಆತನ ಹತ್ತಿರಕ್ಕೆ ಬನ್ನಿರಿ.


ಇವನು ಕೇವಲ ಆ ಬಡಗಿಯ ಮಗನಲ್ಲವೇ? ಇವನ ತಾಯಿ ಮರಿಯಳು. ಯಾಕೋಬ, ಯೋಸೇಫ, ಸಿಮೋನ ಮತ್ತು ಯೂದ ಇವನ ಸಹೋದರರು.


ಆದರೆ ನಾಬಾಲನು ಅವರನ್ನು ಕೀಳಾಗಿ ಕಂಡು, “ದಾವೀದನು ಯಾರು? ಈ ಇಷಯನ ಮಗನೆಂಬವನು ಯಾರು? ಇತ್ತೀಚಿನ ದಿನಗಳಲ್ಲಿ ತಮ್ಮ ಒಡೆಯರ ಹತ್ತಿರದಿಂದ ಓಡಿ ಹೋಗಿರುವ ಅನೇಕ ಗುಲಾಮರುಗಳಿದ್ದಾರೆ!


ಸಂದೇಶಕರು ಹೋಗಿ ಸೌಲನಿಗೆ ವಿಷಯ ತಿಳಿಸಿದಾಗ ಅವನು ದಾವೀದನನ್ನು ನೋಡಲು ಮತ್ತೆ ಸಂದೇಶಕರನ್ನು ಕಳುಹಿಸಿದನು. ಸೌಲನು ಅವರಿಗೆ, “ದಾವೀದನನ್ನು ನನ್ನ ಬಳಿಗೆ ಕರೆತನ್ನಿ! ಹಾಸಿಗೆಯ ಮೇಲೆ ಮಲಗಿರುವ ಅವನನ್ನು ಹಾಸಿಗೆಯ ಸಮೇತವಾಗಿ ತೆಗೆದುಕೊಂಡು ಬನ್ನಿ! ನಾನು ಅವನನ್ನು ಕೊಲ್ಲುತ್ತೇನೆ” ಎಂದು ಹೇಳಿದನು.


ಸೌಲನ ಕೈಯಲ್ಲಿ ಒಂದು ಈಟಿಯಿತ್ತು. “ಗೋಡೆಗೆ ಹತ್ತಿಕೊಳ್ಳುವಂತೆ ನಾನು ದಾವೀದನನ್ನು ತಿವಿಯುವೆ” ಎಂದು ಅವನು ಯೋಚಿಸಿ ಎರಡು ಬಾರಿ ಈಟಿಯನ್ನು ಎಸೆದನು. ಆದರೆ ದಾವೀದನು ಎರಡು ಸಲವೂ ತಪ್ಪಿಸಿಕೊಂಡನು.


ಆಗ ದಾವೀದನು, “ನಾಳೆ ಅಮಾವಾಸ್ಯೆ ಹಬ್ಬ, ನಾನು ರಾಜನ ಜೊತೆಯಲ್ಲಿ ಊಟಮಾಡಬೇಕಾಗಿದೆ. ಆದರೆ ನಾನು ಈಗಲೇ ಹೋಗಿ ಸಂಜೆಯವರೆಗೆ ಹೊಲದಲ್ಲಿ ಅಡಗಿಕೊಳ್ಳಲು ಅವಕಾಶ ಮಾಡಿಕೊಡು.


ಸೌಲನು ಆ ದಿನ ಏನನ್ನೂ ಹೇಳದೆ, “ದಾವೀದನಿಗೆ ಏನೋ ಸಂಭವಿಸಿರಬಹುದು ಆದ್ದರಿಂದ ಅವನು ಇಂದು ಶುದ್ಧನಾಗಿರಲಿಕ್ಕಿಲ್ಲ” ಎಂದು ಯೋಚಿಸಿದನು.


ಯೋನಾತಾನನು, “ಬೆತ್ಲೆಹೇಮಿಗೆ ಹೋಗಲು ತನಗೆ ಅವಕಾಶಕೊಡಬೇಕೆಂದು ದಾವೀದನು ನನ್ನನ್ನು ಬಹಳವಾಗಿ ಕೇಳಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು