29 ‘ನಮ್ಮ ಗೋತ್ರದವರು ಬೆತ್ಲೆಹೇಮಿನಲ್ಲಿ ಯಜ್ಞವನ್ನು ಅರ್ಪಿಸುತ್ತಿರುವುದರಿಂದ ನನ್ನ ಸಹೋದರರು ನನಗೂ ಬರಬೇಕೆಂದು ಕೇಳಿಕೊಂಡಿದ್ದಾರೆ. ನೀನು ನನ್ನ ಗೆಳೆಯನಾಗಿರುವುದಾದರೆ ನನ್ನ ಸೋದರರನ್ನು ನೋಡಿಕೊಂಡು ಬರಲು ದಯವಿಟ್ಟು ನನಗೆ ಅವಕಾಶಕೊಡು ಎಂದು ಹೇಳಿದನು.’ ಆದ್ದರಿಂದಲೇ ದಾವೀದನು ರಾಜನ ಊಟದ ಮೇಜಿಗೆ ಬಂದಿಲ್ಲ” ಎಂದು ಉತ್ತರಿಸಿದನು.
29 ನನ್ನ ಅಣ್ಣನು ಅದಕ್ಕಾಗಿ ನನ್ನನ್ನು ಕರೆದಿದ್ದಾನೆ. ದಯವಿಟ್ಟು ನನಗೆ ಅಪ್ಪಣೆಕೊಡು ನಾನು ಹೋಗಿ ನನ್ನ ಅಣ್ಣಂದಿರನ್ನು ನೋಡಿ ಬರುತ್ತೇನೆ’ ಎಂದು ನನ್ನನ್ನು ಬಹಳವಾಗಿ ಬೇಡಿಕೊಂಡು ಹೋದನು. ಆದ್ದರಿಂದ ಅವನು ಅರಸನ ಪಂಕ್ತಿಗೆ ಬರಲಿಲ್ಲ” ಎಂದು ಉತ್ತರಕೊಟ್ಟನು.
29 ತನ್ನ ಅಣ್ಣ ಅದಕ್ಕಾಗಿ ನನ್ನನ್ನು ಕರೆದಿದ್ದಾನೆ; ತಾನು ಹೋಗಿ ನನ್ನ ಅಣ್ಣಂದಿರನ್ನು ನೋಡಿಬರಲು ಅಪ್ಪಣೆಯಾಗಬೇಕು, ಎಂದು ನನ್ನನ್ನು ಬಹಳವಾಗಿ ಬೇಡಿಕೊಂಡನು. ಆದುದರಿಂದ ಅವನು ಅರಸರ ಪಂಕ್ತಿಗೆ ಬರಲಿಲ್ಲ,” ಎಂದು ಉತ್ತರಕೊಟ್ಟನು.
29 ನನ್ನ ಅಣ್ಣನು ಅದಕ್ಕಾಗಿ ನನ್ನನ್ನು ಕರೆದಿದ್ದಾನೆ; ದಯವಿಟ್ಟು ನನಗೆ ಅಪ್ಪಣೆಕೊಡು. ನಾನು ಹೋಗಿ ನನ್ನ ಅಣ್ಣಂದಿರನ್ನು ನೋಡಿಬರುತ್ತೇನೆ ಎಂದು ನನ್ನನ್ನು ಬಹಳವಾಗಿ ಬೇಡಿಕೊಂಡು ಹೋದನು. ಆದದರಿಂದ ಅವನು ಅರಸನ ಪಂಕ್ತಿಗೆ ಬರಲಿಲ್ಲ ಎಂದು ಉತ್ತರ ಕೊಟ್ಟನು.
29 ಅವನು ನನಗೆ, ‘ದಯಮಾಡಿ ನನಗೆ ಅಪ್ಪಣೆಕೊಡು. ಏಕೆಂದರೆ ಊರೊಳಗೆ ನಮ್ಮ ಕುಟುಂಬಕ್ಕೆ ಯಜ್ಞ ಮಾಡುವುದಿದೆ. ನನ್ನ ಸಹೋದರರು ನನ್ನನ್ನು ಬರಲು ಹೇಳಿ ಕಳುಹಿಸಿದರು. ಈಗ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದರೆ, ನಾನು ಅಪ್ಪಣೆ ತೆಗೆದುಕೊಂಡು ನನ್ನ ಸಹೋದರರನ್ನು ಕಾಣುವುದಕ್ಕೆ ಹೋಗುತ್ತೇನೆ,’ ಎಂದನು. ಆದ್ದರಿಂದ ಅವನು ಅರಸನ ಮೇಜಿಗೆ ಬರಲಿಲ್ಲ,” ಎಂದನು.
ದಾವೀದನು ಸೈನಿಕರೊಡನೆ ಮಾತಾಡುತ್ತಿರುವುದನ್ನು ಅವನ ಹಿರಿಯ ಅಣ್ಣ ಎಲೀಯಾಬನು ಕೇಳಿಸಿಕೊಂಡನು. ಎಲೀಯಾಬನು ದಾವೀದನ ಮೇಲೆ ಕೋಪಗೊಂಡು ಅವನಿಗೆ, “ನೀನು ಇಲ್ಲಿಗೆ ಬಂದದ್ದೇಕೆ? ಅಲ್ಲಿದ್ದ ಕೆಲವು ಕುರಿಗಳನ್ನು ಯಾರ ಬಳಿ ಬಿಟ್ಟಿರುವೆ? ನೀನು ಇಲ್ಲಿಗೆ ಏಕೆ ಬಂದಿರುವೆಯೆಂಬುದು ನನಗೆ ಗೊತ್ತು. ನಿನಗೆ ಹೇಳಿದ್ದನ್ನು ನೀನು ಮಾಡುವುದಿಲ್ಲ. ನೀನು ಕೇವಲ ಯುದ್ಧವನ್ನು ನೋಡುವುದಕ್ಕಾಗಿಯೇ ಇಲ್ಲಿಗೆ ಬಂದಿರುವೆ” ಎಂದು ಗದರಿಸಿದನು.
ಅದಕ್ಕೆ ಸಮುವೇಲನು, “ನಾನು ಹೊರಟರೆ ಸೌಲನಿಗೆ ಈ ಸುದ್ದಿಯು ತಿಳಿಯುತ್ತದೆ. ಆಗ ಅವನು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಾನೆ” ಎಂದನು. ಯೆಹೋವನು, “ಬೆತ್ಲೆಹೇಮಿಗೆ ಹೋಗು. ನಿನ್ನೊಡನೆ ಒಂದು ಎಳೆಕರುವನ್ನು ತೆಗೆದುಕೊಂಡು ಹೋಗು. ‘ನಾನು ಯೆಹೋವನಿಗೆ ಯಜ್ಞವನ್ನರ್ಪಿಸಲು ಬಂದಿದ್ದೇನೆ’ ಎಂದು ಹೇಳು.
ಸೌಲನು ಯೋನಾತಾನನ ಮೇಲೆ ಬಹಳ ಕೋಪಗೊಂಡು, “ನೀನು ಅವಿಧೇಯಳಾದ ದಾಸಿಯ ಮಗ. ನೀನೂ ಅವಳಂತೆಯೇ ಅವಿಧೇಯ. ನೀನು ದಾವೀದನ ಪಕ್ಷವಹಿಸಿರುವುದು ನನಗೆ ಗೊತ್ತಿದೆ. ನೀನು ನಿನಗೂ ಮತ್ತು ನಿನ್ನ ತಾಯಿಗೂ ನಾಚಿಕೆಯನ್ನು ತಂದಿರುವೆ.