Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 20:3 - ಪರಿಶುದ್ದ ಬೈಬಲ್‌

3 ಆದರೆ ದಾವೀದನು, “ನಾನು ನಿನ್ನ ಗೆಳೆಯನೆಂಬುದು ನಿನ್ನ ತಂದೆಗೆ ಚೆನ್ನಾಗಿ ತಿಳಿದಿದೆ. ನಿನ್ನ ತಂದೆಯು, ‘ಯೋನಾತಾನನಿಗೆ ಇದು ತಿಳಿಯಲೇಬಾರದು. ಅವನಿಗೆ ತಿಳಿದುಬಿಟ್ಟರೆ ಅವನು ತನ್ನ ಹೃದಯದಲ್ಲಿ ದುಃಖಪಟ್ಟು ದಾವೀದನಿಗೆ ಹೇಳಿಬಿಡುತ್ತಾನೆ’ ಎಂದುಕೊಂಡಿದ್ದಾನೆ. ಯೆಹೋವನಾಣೆ, ನಿನ್ನ ಜೀವದಾಣೆ, ನಾನು ಸಾವಿಗೆ ಬಹು ಹತ್ತಿರವಾಗಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅದಕ್ಕೆ ದಾವೀದನು, “ನಿನ್ನ ಕಣ್ಣುಮುಂದೆ ನನಗೆ ದಯೆ ದೊರಕುತ್ತದೆಂಬುದನ್ನು ನಿನ್ನ ತಂದೆಯು ಬಲ್ಲನು. ಆದ್ದರಿಂದ ಇದನ್ನು ಯೋನಾತಾನನಿಗೆ ತಿಳಿಸಿದರೆ ಅವನಿಗೆ ದುಃಖವಾಗುವುದೆಂದು ಮರೆಮಾಡುತ್ತಾನೆ. ನಿನ್ನ ಜೀವದಾಣೆ, ಯೆಹೋವನ ಆಣೆ, ನನಗೂ ಮರಣಕ್ಕೂ ಒಂದು ಗೇಣು ಅಂತರವಿದೆ” ಎಂದು ಖಂಡಿತವಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅದಕ್ಕೆ ದಾವೀದನು, “ನಿನಗೆ ನಾನು ಪ್ರೀತಿಪಾತ್ರನೆಂದು ನಿನ್ನ ತಂದೆಗೆ ಗೊತ್ತಿದೆ. ಆದುದರಿಂದ ಇದನ್ನು ಯೋನಾತಾನನಿಗೆ ತಿಳಿಸಿದರೆ ಅವನಿಗೆ ದುಃಖವಾಗುವುದೆಂದು ಮರೆಮಾಡುತ್ತಾರೆ. ನಿನ್ನ ಜೀವದಾಣೆ, ಸರ್ವೇಶ್ವರನ ಆಣೆ, ನನಗೂ ಮರಣಕ್ಕೂ ಒಂದು ಗೇಣು ಮಾತ್ರ ಅಂತರ,” ಎಂದು ಖಂಡಿತವಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅದಕ್ಕೆ ದಾವೀದನು - ನಿನ್ನ ಕಣ್ಣು ಮುಂದೆ ನನಗೆ ದಯೆ ದೊರಕುತ್ತದೆಂಬದನ್ನು ನಿನ್ನ ತಂದೆಯು ಬಲ್ಲನು. ಆದದರಿಂದ ಇದನ್ನು ಯೋನಾತಾನನಿಗೆ ತಿಳಿಸಿದರೆ ಅವನಿಗೆ ದುಃಖವಾಗುವದೆಂದು ಮರೆಮಾಡುತ್ತಾನೆ. ನಿನ್ನ ಜೀವದಾಣೆ, ಯೆಹೋವನಾಣೆ, ನನಗೂ ಮರಣಕ್ಕೂ ಒಂದು ಗೇಣು ಮಾತ್ರ ಅಂತರವಿದೆ ಎಂದು ಖಂಡಿತವಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದಾವೀದನು ಪ್ರಮಾಣಮಾಡಿ, “ನಿನ್ನ ಕಣ್ಣು ಮುಂದೆ ನನಗೆ ದಯೆ ದೊರಕಿತೆಂದು ನಿನ್ನ ತಂದೆಯು ನಿಶ್ಚಲವಾಗಿ ಬಲ್ಲನು. ಆದಕಾರಣ ಅವನು ಯೋನಾತಾನನು ವ್ಯಥೆಪಡದ ಹಾಗೆ, ‘ಅವನು ಇದನ್ನು ತಿಳಿಯಬಾರದು,’ ಎಂದು ಹೇಳುತ್ತಾನೆ. ನಿಶ್ಚಯವಾಗಿ ಯೆಹೋವ ದೇವರಾಣೆ, ನನ್ನ ಪ್ರಾಣದಾಣೆ, ನನಗೂ ಮರಣಕ್ಕೂ ಒಂದು ಹೆಜ್ಜೆ ಮಾತ್ರ ದೂರ ಇದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 20:3
18 ತಿಳಿವುಗಳ ಹೋಲಿಕೆ  

ಎಲೀಯನು ಎಲೀಷನಿಗೆ, “ದಯವಿಟ್ಟು ಇಲ್ಲಿಯೇ ಇರು, ಏಕೆಂದರೆ ಯೆಹೋವನು ಜೋರ್ಡನ್ ನದಿಗೆ ಹೋಗುವಂತೆ ನನಗೆ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಎಲೀಷನು, “ಯೆಹೋವನಾಣೆ, ನಿನ್ನಾಣೆ, ನಾನು ನಿನ್ನನ್ನು ಬಿಟ್ಟಿರುವುದಿಲ್ಲವೆಂದು ಪ್ರಮಾಣ ಮಾಡುತ್ತೇನೆ” ಎಂದು ಹೇಳಿದನು. ಅವರಿಬ್ಬರೂ ಮುಂದೆ ಸಾಗಿದರು.


ಆದರೆ ದಾವೀದನು, “ಸೌಲನು ಎಂದಾದರೂ ಒಂದು ದಿನ ನನ್ನನ್ನು ಹಿಡಿದುಕೊಳ್ಳುವನು. ಈಗ ಫಿಲಿಷ್ಟಿಯರ ರಾಜ್ಯಕ್ಕೆ ತಪ್ಪಿಸಿಕೊಂಡು ಹೋಗುವುದೇ ನಾನು ಮಾಡಬಹುದಾದ ಒಳ್ಳೆಯ ಕೆಲಸ. ಆಗ ಸೌಲನು ಇಸ್ರೇಲಿನಲ್ಲಿ ನನ್ನನ್ನು ಹುಡುಕುವುದನ್ನು ಬಿಟ್ಟುಬಿಡುತ್ತಾನೆ. ಸೌಲನಿಂದ ತಪ್ಪಿಸಿಕೊಳ್ಳಲು ಇದೇ ಸರಿಯಾದ ಮಾರ್ಗ” ಎಂದು ತನ್ನಲ್ಲೇ ಯೋಚಿಸಿದನು.


ಮುಗ್ದಜನರನ್ನು ಕೊಂದು ಅಪರಾಧಿಯಾಗದಂತೆ ಯೆಹೋವನು ನಿನ್ನನ್ನು ಕಾಪಾಡಿದ್ದಾನೆ. ಯೆಹೋವನ ಆಣೆಯಾಗಿಯೂ ನಿನ್ನ ಆಣೆಯಾಗಿಯೂ ನಿನ್ನ ಶತ್ರುಗಳೂ ನಿನಗೆ ಕೇಡುಮಾಡುವವರೂ ನಾಬಾಲನಂತಾಗಲಿ.


ಆತನ ಹೆಸರಿನಲ್ಲಿಯೇ ವಾಗ್ದಾನಗಳನ್ನು ಮಾಡಿರಿ; ಅನ್ಯ ದೇವರ ಹೆಸರಿನಲ್ಲಿ ಮಾಡಕೂಡದು.


ಎಲೀಯನು ಎಲೀಷನಿಗೆ, “ದಯವಿಟ್ಟು ಇಲ್ಲಿಯೇ ಇರು, ಏಕೆಂದರೆ ಯೆಹೋವನು ಜೆರಿಕೊವಿಗೆ ಹೋಗುವಂತೆ ನನಗೆ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಆದರೆ ಎಲೀಷನು, “ಯೆಹೋವನಾಣೆ, ನಿನ್ನಾಣೆ, ನಾನು ನಿನ್ನನ್ನು ಬಿಟ್ಟಿರುವುದಿಲ್ಲವೆಂದು ಪ್ರಮಾಣ ಮಾಡುತ್ತೇನೆ!” ಎಂದು ಹೇಳಿದನು. ಇಬ್ಬರೂ ಜೆರಿಕೊವಿಗೆ ಹೋದರು.


ಎಲೀಯನು ಎಲೀಷನಿಗೆ, “ದಯವಿಟ್ಟು ಇಲ್ಲಿಯೇ ಇರು; ಏಕೆಂದರೆ ಬೇತೇಲಿಗೆ ಹೋಗುವಂತೆ ಯೆಹೋವನು ನನಗೆ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಆದರೆ ಎಲೀಷನು, “ಯೆಹೋವನಾಣೆ, ನಿನ್ನಾಣೆ, ನಾನು ನಿನ್ನನ್ನು ಬಿಟ್ಟಿರುವುದಿಲ್ಲವೆಂದು ಪ್ರಮಾಣ ಮಾಡುತ್ತೇನೆ” ಎಂದು ಹೇಳಿದನು. ಇಬ್ಬರೂ ಬೇತೇಲಿಗೆ ಹೋದರು.


ಹನ್ನಳು, “ಸ್ವಾಮೀ, ನನ್ನನ್ನು ಕ್ಷಮಿಸಿ. ನಿಮ್ಮ ಬಳಿ ನಿಂತಿರುವ ನಾನೇ ಅಂದು ಯೆಹೋವನಿಗೆ ಪ್ರಾರ್ಥನೆ ಮಾಡಿದವಳು. ನಾನು ಹೇಳುತ್ತಿರುವುದು ನಿಜವೆಂದು ಪ್ರಮಾಣ ಮಾಡುತ್ತೇನೆ.


ಜನರು ವಾಗ್ದಾನ ಮಾಡುವಾಗ ಯಾವಾಗಲೂ ತಮಗಿಂತ ದೊಡ್ಡವರಾದ ಯಾರಾದರೊಬ್ಬರನ್ನು ಬಳಸಿಕೊಳ್ಳುತ್ತಾರೆ. ಅವರು ಹೇಳಿದ್ದು ನಿಜವೆಂಬುದನ್ನು ಆ ವಾಗ್ದಾನವು ಶ್ರುತಪಡಿಸುತ್ತದೆ. ಇದರಿಂದಾಗಿ ಅವರ ಎಲ್ಲಾ ವಾಗ್ವಾದಗಳಿಗೆ ಕೊನೆಯಾಗುತ್ತದೆ.


ಆದರೆ ರಾಜನಾದ ಚಿದ್ಕೀಯನು ಯೆರೆಮೀಯನಿಗೆ ರಹಸ್ಯವಾಗಿ, “ಯೆರೆಮೀಯನೇ, ನಮಗೆ ಉಸಿರನ್ನೂ ಜೀವವನ್ನೂ ದಯಪಾಲಿಸಿದ ಯೆಹೋವನ ಆಣೆಯಾಗಿ ಹೇಳುತ್ತೇನೆ, ನಾನು ನಿನ್ನನ್ನು ಕೊಲ್ಲುವುದಿಲ್ಲ. ಕೊಲ್ಲಬಯಸುವ ಅಧಿಕಾರಿಗಳ ಕೈಗೂ ನಿನ್ನನ್ನು ಕೊಡುವದಿಲ್ಲವೆಂದು ನಾನು ಮಾತು ಕೊಡುತ್ತೇನೆ” ಎಂದು ಹೇಳಿದನು.


ನೀನು ಹೀಗೆ ಮಾಡಿದರೆ ನನ್ನ ಹೆಸರಿನ ಮೇಲೆ ಪ್ರಮಾಣ ಮಾಡಲು ಶಕ್ತಳಾಗುವೆ. ‘ಹಾದು, ಯೆಹೋವನಾಣೆ’ ಎಂದು ಹೇಳಶಕ್ತಳಾಗುವೆ. ನೀನು ಆ ಪದಗಳನ್ನು ಸತ್ಯವಾಗಿಯೂ ಪ್ರಾಮಾಣಿಕವಾಗಿಯೂ ಸರಿಯಾಗಿ ಉಪಯೋಗಿಸಲು ಸಾಧ್ಯವಾಗುತ್ತದೆ. ನೀನು ಹೀಗೆ ಮಾಡಿದರೆ, ಎಲ್ಲಾ ಜನಾಂಗಗಳು ಯೆಹೋವನ ಆಶೀರ್ವಾದವನ್ನು ಪಡೆಯುತ್ತವೆ. ಆತನ ಕಾರ್ಯಗಳಿಗಾಗಿ ಆತನಿಗೆ ಸ್ತೋತ್ರ ಮಾಡುತ್ತವೆ.”


ಮರಣಕರವಾದ ಹಗ್ಗಗಳು ನನ್ನನ್ನು ಸುತ್ತಿಕೊಂಡಿದ್ದವು. ಸಮಾಧಿಯು ನನ್ನನ್ನು ಮುಚ್ಚಿಕೊಳ್ಳುತ್ತಿತ್ತು. ನಾನು ಭಯಗೊಂಡಿದ್ದೆನು; ಚಿಂತೆಗೊಳಗಾಗಿದ್ದೆನು.


ಅದಕ್ಕೆ ಇತ್ತೈಯನು ರಾಜನಿಗೆ, “ಯೆಹೋವನಾಣೆ ಮತ್ತು ನಿನ್ನಾಣೆ, ನಾನಂತೂ ನಿನ್ನೊಂದಿಗೆ ಇರುತ್ತೇನೆ. ನನಗೆ ಜೀವ ಹೋದರೂ ಉಳಿದರೂ ನಿನ್ನೊಂದಿಗೆ ಇರುತ್ತೇನೆ” ಎಂದು ಹೇಳಿದನು.


ದಾವೀದನು ಗೊಲ್ಯಾತನೊಂದಿಗೆ ಯುದ್ಧಕ್ಕೆ ಹೊರಟಿದ್ದನ್ನು ಸೌಲನು ಗಮನಿಸುತ್ತಿದ್ದನು. ಸೌಲನು ತನ್ನ ಸೇನಾಧಿಪತಿಯಾದ ಅಬ್ನೇರನನ್ನು, “ಆ ಯುವಕನ ತಂದೆ ಯಾರು?” ಎಂದು ಪ್ರಶ್ನಿಸಿದನು. ಅಬ್ನೇರನು, “ಅರಸನೇ, ನಿನ್ನ ಜೀವದಾಣೆ, ಅವನು ಯಾರೋ ನನಗೆ ಗೊತ್ತಿಲ್ಲ” ಎಂದು ಉತ್ತರಕೊಟ್ಟನು.


ನೀವು ಹಗಲಿರುಳು ಭಯದಿಂದಿರುವಿರಿ ಮತ್ತು ಅಪಾಯದಲ್ಲಿ ಜೀವಿಸುವಿರಿ. ನಿಮ್ಮ ಜೀವಿತದ ಬಗ್ಗೆ ನಿಮಗೆಂದಿಗೂ ನಿಶ್ಚಯತ್ವವಿರುವುದಿಲ್ಲ.


ಯೋನಾತಾನನು, “ಎಂದಿಗೂ ಇಲ್ಲ. ನನ್ನ ತಂದೆಯು ನಿನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿಲ್ಲ! ನನ್ನ ತಂದೆಯು ನನಗೆ ತಿಳಿಸದೆ ಏನನ್ನೂ ಮಾಡುವುದಿಲ್ಲ. ಅದು ಬಹು ಮುಖ್ಯವಾದದ್ದೇ ಆಗಿರಲಿ ಇಲ್ಲವೆ ಮುಖ್ಯವಾಗಿಲ್ಲದ್ದೇ ಆಗಿರಲಿ, ನನ್ನ ತಂದೆಯು ನನಗೆ ತಿಳಿಸೇ ತಿಳಿಸುತ್ತಾನೆ. ನನ್ನ ತಂದೆಯು ನಿನ್ನನ್ನು ಕೊಲ್ಲಬೇಕೆಂದಿದ್ದರೆ ನಾನು ನಿನಗೆ ತಿಳಿಸುತ್ತಿರಲಿಲ್ಲವೇ?” ಎಂದು ಹೇಳಿದನು.


ಯೋನಾತಾನನು, “ನೀನು ಬಯಸುವ ಏನನ್ನಾದರೂ ಮಾಡಲು ನಾನು ಸಿದ್ಧನಿದ್ದೇನೆ” ಎಂದು ದಾವೀದನಿಗೆ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು