1 ಸಮುಯೇಲ 20:31 - ಪರಿಶುದ್ದ ಬೈಬಲ್31 ಇಷಯನ ಮಗ ಬದುಕಿರುವವರೆಗೆ ನೀನು ರಾಜನಾಗುವುದೇ ಇಲ್ಲ; ನಿನಗೆ ರಾಜ್ಯಾಧಿಕಾರವೂ ಸಿಗುವುದಿಲ್ಲ. ಈಗ ದಾವೀದನನ್ನು ಕರೆದುಕೊಂಡು ಬಾ! ಅವನೊಬ್ಬ ಸತ್ತಮನುಷ್ಯ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಆ ಇಷಯನ ಮಗನು ಭೂಲೋಕದಲ್ಲಿರುವವರೆಗೆ ನಿನಗಾದರೂ, ನಿನ್ನ ರಾಜ್ಯಕ್ಕಾದರೂ ನೆಲೆಯಿಲ್ಲ. ಆದುದರಿಂದ ಅವನನ್ನು ಕರಿಸಿ ನನ್ನ ಬಳಿಗೆ ತೆಗೆದುಕೊಂಡು ಬಾ. ಅವನು ಸಾಯಬೇಕು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಆ ಜೆಸ್ಸೆಯನ ಮಗ ಭೂಲೋಕದಲ್ಲಿ ಇರುವವರೆಗೆ ನಿನಗಾಗಲಿ, ರಾಜನಾಗುವ ಹಕ್ಕುಬಾಧ್ಯತೆಗಳಿಗಾಗಲಿ ಉಳಿವಿಲ್ಲ. ಆದುದರಿಂದ ಹೋಗು, ಅವನನ್ನು ಕರೆಯಿಸಿ ನನ್ನ ಬಳಿಗೆ ತೆಗೆದುಕೊಂಡು ಬಾ; ಅವನು ಸಾಯಬೇಕು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಆ ಇಷಯನ ಮಗನು ಭೂಲೋಕದಲ್ಲಿರುವವರೆಗೆ ನಿನಗಾದರೂ ನಿನ್ನ ರಾಜ್ಯಕ್ಕಾದರೂ ನೆಲೆಯಿಲ್ಲ; ಆದದರಿಂದ ಅವನನ್ನು ಕರಿಸಿ ನನ್ನ ಬಳಿಗೆ ತೆಗೆದುಕೊಂಡು ಬಾ; ಅವನು ಸಾಯಬೇಕು ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಏಕೆಂದರೆ ಇಷಯನ ಮಗನು ಭೂಮಿಯ ಮೇಲೆ ಬದುಕುವ ದಿವಸಗಳವರೆಗೂ ನೀನಾದರೂ, ನಿನ್ನ ರಾಜ್ಯವಾದರೂ ಸ್ಥಿರವಾಗುವುದಿಲ್ಲ. ಆದ್ದರಿಂದ ಈಗ ನೀನು ಅವನನ್ನು ಕರೆಕಳುಹಿಸಿ, ನನ್ನ ಬಳಿಗೆ ತೆಗೆದುಕೊಂಡು ಬಾ. ಏಕೆಂದರೆ ಅವನು ನಿಜವಾಗಿ ಸಾಯಲೇಬೇಕು,” ಎಂದನು. ಅಧ್ಯಾಯವನ್ನು ನೋಡಿ |