1 ಸಮುಯೇಲ 20:34 - ಪರಿಶುದ್ದ ಬೈಬಲ್34 ಯೋನಾತಾನನು ಬಹಳ ಕೋಪಗೊಂಡು ಊಟದ ಮೇಜನ್ನು ಬಿಟ್ಟುಹೋದನು. ಯೋನಾತಾನನು ತನ್ನ ತಂದೆಯ ಮೇಲೆ ಬಹಳವಾಗಿ ಬೇಸರಗೊಂಡಿದ್ದರಿಂದ ಮತ್ತು ಕೋಪವುಳ್ಳವನಾಗಿದ್ದರಿಂದ ಎರಡನೆ ದಿನ ಔತಣದಲ್ಲಿ ಅವನು ಏನನ್ನೂ ತಿನ್ನಲಿಲ್ಲ. ಸೌಲನು ದಾವೀದನಿಗೆ ಅವಮಾನ ಮಾಡಿದ್ದರಿಂದ ಯೋನಾತಾನನು ಕೋಪಗೊಂಡಿದ್ದನು. ಸೌಲನು ದಾವೀದನನ್ನು ಕೊಲ್ಲಬೇಕೆಂದಿದ್ದುದರಿಂದ ಯೋನಾತಾನನು ದುಃಖಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಅವನು ಬಲು ಸಿಟ್ಟುಗೊಂಡು ಪಂಕ್ತಿಯಿಂದೆದ್ದು ಹೋದನು. ತನ್ನ ತಂದೆಯು ದಾವೀದನನ್ನು ಅಪಮಾನಪಡಿಸಿದ್ದರಿಂದ ಯೋನಾತಾನನಿಗೆ ಬಹಳ ದುಃಖವುಂಟಾಗಿ ಅವನು ಆ ದಿನ ಊಟಮಾಡಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಅವನು ಬಲುಸಿಟ್ಟುಗೊಂಡು ಪಂಕ್ತಿಯಿಂದೆದ್ದು ಹೋದನು. ತನ್ನ ತಂದೆ, ದಾವೀದನನ್ನು ಅಪಮಾನಪಡಿಸಿದ್ದರಿಂದ ಯೋನಾತಾನನಿಗೆ ಬಹಳ ದುಃಖವುಂಟಾಗಿ ಅವನು ಆ ದಿವಸ ಊಟಮಾಡಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಅವನು ಬಲು ಸಿಟ್ಟುಗೊಂಡು ಪಂಕ್ತಿಯಿಂದೆದ್ದು ಹೋದನು; ತನ್ನ ತಂದೆಯು ದಾವೀದನನ್ನು ಅಪಮಾನಪಡಿಸಿದದರಿಂದ ಯೋನಾತಾನನಿಗೆ ಬಹಳ ದುಃಖವುಂಟಾಗಿ ಅವನು ಆ ದಿವಸ ಊಟ ಮಾಡಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಯೋನಾತಾನನು ಕೋಪದಿಂದ ಉರಿಗೊಂಡು ಮೇಜಿನಿಂದ ಎದ್ದು ಹೋದನು. ಹಬ್ಬದ ಎರಡನೆಯ ದಿನವಾಗಿದ್ದ ಅಂದು ಅವನು ಊಟ ಮಾಡಲಿಲ್ಲ. ಏಕೆಂದರೆ ತನ್ನ ತಂದೆಯು ದಾವೀದನಿಗೆ ಅವಮಾನ ಮಾಡಿದ್ದರಿಂದ, ಅವನಿಗೋಸ್ಕರ ವ್ಯಥೆಪಟ್ಟನು. ಅಧ್ಯಾಯವನ್ನು ನೋಡಿ |