1 ಸಮುಯೇಲ 20:41 - ಪರಿಶುದ್ದ ಬೈಬಲ್41 ಬಾಲಕನು ಹೊರಟುಹೋದನು. ದಾವೀದನು ತಾನು ಅಡಗಿದ್ದ ಬೆಟ್ಟದ ಮತ್ತೊಂದು ಕಡೆಯ ಸ್ಥಳದಿಂದ ಹೊರಬಂದನು. ದಾವೀದನು ಯೋನಾತಾನನ ಮುಂದೆ ಬಂದು ಮೂರು ಸಲ ತನ್ನ ಮುಖವನ್ನು ನೆಲದವರೆಗೂ ಬಗ್ಗಿಸಿ ನಮಸ್ಕರಿಸಿದನು. ನಂತರ ದಾವೀದ ಮತ್ತು ಯೋನಾತಾನರು ಪರಸ್ಪರ ಮುದ್ದಿಟ್ಟರು, ಅವರಿಬ್ಬರೂ ಒಟ್ಟಾಗಿ ಅತ್ತರು. ದಾವೀದನು ಯೋನಾತಾನನಿಗಿಂತ ಹೆಚ್ಚು ಅತ್ತನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಹುಡುಗನು ಹೋಗುತ್ತಲೇ ದಾವೀದನು ಕಲ್ಲುಕುಪ್ಪೆಯ ಬಳಿಯಿಂದ ಎದ್ದುಬಂದು ಮೂರು ಸಾರಿ ಸಾಷ್ಟಾಂಗವಾಗಿ ಯೋನಾತಾನನನ್ನು ವಂದಿಸಿದನು. ಅವರು ಒಬ್ಬರಿಗೊಬ್ಬರು ಮುದ್ದಿಟ್ಟುಕೊಂಡು ಅತ್ತರು. ದಾವೀದನು ಬಹಳವಾಗಿ ಅತ್ತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಹುಡುಗನು ಹೋಗುತ್ತಲೇ ದಾವೀದನು ಕಲ್ಲುಕುಪ್ಪೆಯ ಬಳಿಯಿಂದೆದ್ದು ಬಂದು ಮೂರು ಸಾರಿ ಸಾಷ್ಟಾಂಗವಾಗಿ ಯೋನಾತಾನನನ್ನು ವಂದಿಸಿದನು. ಅವರು ಒಬ್ಬರನ್ನೊಬ್ಬರು ಅಪ್ಪಿಕೊಂಡು ಅತ್ತರು. ದಾವೀದನು ಬಹಳವಾಗಿ ಅತ್ತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಹುಡುಗನು ಹೋಗುತ್ತಲೆ ದಾವೀದನು ಕಲ್ಲುಕುಪ್ಪೆಯ ಬಳಿಯಿಂದೆದ್ದು ಬಂದು ಮೂರು ಸಾರಿ ಸಾಷ್ಟಾಂಗವಾಗಿ ಯೋನಾತಾನನನ್ನು ವಂದಿಸಿದನು. ಅವರು ಒಬ್ಬರಿಗೊಬ್ಬರು ಮುದ್ದಿಟ್ಟುಕೊಂಡು ಅತ್ತರು; ದಾವೀದನು ಬಹಳವಾಗಿ ಅತ್ತನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಹುಡುಗನು ಹೋಗುತ್ತಲೇ ದಾವೀದನು ದಕ್ಷಿಣ ಕಡೆಯಿಂದ ಎದ್ದು ಬಂದು ಯೋನಾತಾನನ ಮುಂದೆ ಬೋರಲು ಬಿದ್ದು ಮೂರು ಸಾರಿ ವಂದಿಸಿದನು. ಅವರು ಒಬ್ಬರಿಗೊಬ್ಬರು ಮುದ್ದಿಟ್ಟುಕೊಂಡು, ಒಬ್ಬರನ್ನೊಬ್ಬರು ನೋಡಿ ಅತ್ತರು. ದಾವೀದನು ಬಹಳವಾಗಿ ಅತ್ತನು. ಅಧ್ಯಾಯವನ್ನು ನೋಡಿ |
ಸಮುವೇಲನು ವಿಶೇಷವಾದ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ಸೌಲನ ತಲೆಯ ಮೇಲೆ ಆ ಎಣ್ಣೆಯನ್ನು ಸುರಿದನು. ಸಮುವೇಲನು ಸೌಲನಿಗೆ ಮುದ್ದಿಟ್ಟು, “ಯೆಹೋವನು ತನ್ನ ಜನರನ್ನು ಮುಂದೆ ನಡೆಸಲು ನಿನ್ನನ್ನು ಅವರಿಗೆ ನಾಯಕನನ್ನಾಗಿ ಅಭಿಷೇಕಿಸಿದ್ದಾನೆ. ನೀನು ಯೆಹೋವನ ಜನರನ್ನು ಆಳುವೆ; ಅವರನ್ನು ಸುತ್ತುವರೆದಿರುವ ಶತ್ರುಗಳಿಂದ ರಕ್ಷಿಸುವೆ. ಯೆಹೋವನು ತನ್ನ ಜನರನ್ನು ಆಳುವುದಕ್ಕಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ. ಇದು ನಿಜವೆಂಬುದಕ್ಕೆ ಸಾಕ್ಷಿಯೇನೆಂದರೆ: