Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 20:7 - ಪರಿಶುದ್ದ ಬೈಬಲ್‌

7 ನಿನ್ನ ತಂದೆಯು, ‘ಒಳ್ಳೆಯದಾಯಿತು’ ಎಂದರೆ ನಾನು ಬದುಕಿದೆ. ಆದರೆ ನಿನ್ನ ತಂದೆಯು ಕೋಪಗೊಂಡರೆ ಅವನು ನನಗೆ ಕೇಡುಮಾಡಲು ಬಯಸಿದ್ದಾನೆಂದು ತಿಳಿದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವನು ಆಗಲಿ ಅಂದರೆ ನಿನ್ನ ಸೇವಕನಾದ ನಾನು ಸುರಕ್ಷಿತನಾಗಿರುವೆನು. ಸಿಟ್ಟುಮಾಡಿದರೆ ಅವನಿಂದ ನನಗೆ ಕೇಡು ಸಿದ್ಧವಾಗಿದೆ ಎಂದು ತಿಳಿದುಕೋ, ಸೇವಕನ ಮೇಲೆ ದಯೆಯಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅವರು ‘ಹಾಗೆಯೇ ಆಗಲಿ’ ಎಂದರೆ ನಿನ್ನ ಸೇವಕನಾದ ನಾನು ಸುರಕ್ಷಿತನಾಗಿರುವೆನು; ಸಿಟ್ಟುಮಾಡಿದರೆ ಅವರಿಂದ ನನಗೆ ಕೇಡು ಸಿದ್ಧವಾಗಿದೆ ಎಂದು ತಿಳಿದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವನು ಆಗಲಿ ಎಂದರೆ ನಿನ್ನ ಸೇವಕನಾದ ನಾನು ಸುರಕ್ಷಿತನಾಗಿರುವೆನು; ಸಿಟ್ಟುಮಾಡಿದರೆ ಅವನಿಂದ ನನಗೆ ಕೇಡು ಸಿದ್ಧವಾಗಿದೆಂದು ತಿಳಿದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅದಕ್ಕೆ ಅವನು, ‘ಒಳ್ಳೆಯದು,’ ಎಂದು ಹೇಳಿದರೆ, ನಿನ್ನ ಸೇವಕನಿಗೆ ಸಮಾಧಾನವಾಗಿರುವುದು. ಅವನು ಬಹಳ ಕೋಪ ಮಾಡಿದರೆ, ಅವನಿಂದ ಕೇಡು ಸಿದ್ಧವಾಗಿದೆ ಎಂದು ತಿಳಿದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 20:7
6 ತಿಳಿವುಗಳ ಹೋಲಿಕೆ  

ಈಗ ಅದರ ಬಗ್ಗೆ ಯೋಚಿಸಿ ನೀನು ಮಾಡಬೇಕಾದದ್ದನ್ನು ತೀರ್ಮಾನಿಸು. ಮೂರ್ಖನಾದ ನಾಬಾಲನೊಂದಿಗೆ ಮಾತಾಡಿ ಅವನ ಮನಸ್ಸನ್ನು ಬದಲಾಯಿಸುವುದು ಅಸಾಧ್ಯ. ನಮ್ಮ ಒಡೆಯನಿಗೂ ಅವನ ಕುಟುಂಬಕ್ಕೂ ಭೀಕರವಾದ ಕೇಡು ಬರಲಿದೆ” ಎಂದು ಹೇಳಿದನು.


ಅರಸನು ಕೋಪೋದ್ರಿಕ್ತನಾಗಿ, ಪಾನಪಾತ್ರೆಯನ್ನು ಅಲ್ಲಿಯೇ ಬಿಟ್ಟು ಎದ್ದು ಹೂತೋಟಕ್ಕೆ ಹೋದನು. ಹಾಮಾನನು ಕೋಣೆಯಲ್ಲಿಯೇ ಉಳಿದು ತನ್ನ ಪ್ರಾಣವನ್ನು ಉಳಿಸಬೇಕೆಂದು ಎಸ್ತೇರ್ ರಾಣಿಯನ್ನು ಬೇಡುತ್ತಿದ್ದನು. ಯಾಕೆಂದರೆ ರಾಜನು ತನ್ನನ್ನು ಕೊಲ್ಲಲು ತೀರ್ಮಾನಿಸಿರುವುದು ಅವನಿಗೆ ಅರಿವಾಯಿತು.


ಈ ಉಪಾಯವು ಅಬ್ಷಾಲೋಮನಿಗೆ ಮತ್ತು ಇಸ್ರೇಲಿನ ನಾಯಕರಿಗೆಲ್ಲ ಸರಿಯೆಂದು ಕಂಡಿತು.


ಯೋನಾತಾನನು, “ಇಲ್ಲ, ಎಂದೆಂದಿಗೂ ಇಲ್ಲ! ನನ್ನ ತಂದೆಯು ನಿನಗೆ ಕೇಡು ಮಾಡುವುದಕ್ಕಾಗಿ ಉಪಾಯ ಮಾಡುತ್ತಿರುವುದು ನನಗೆ ತಿಳಿದುಬಂದರೆ ನಾನು ನಿನ್ನನ್ನು ಎಚ್ಚರಿಸುತ್ತೇನೆ” ಎಂದು ಉತ್ತರಿಸಿದನು.


“ಇದು ಒಂದು ಒಳ್ಳೆಯ ಆಲೋಚನೆ ಎಂದುಕೊಂಡು ನಿಮ್ಮ ಕುಲಗಳಿಂದ ಹನ್ನೆರಡು ಮಂದಿಯನ್ನು ಆರಿಸಿಕೊಂಡೆನು.


ಆದರೆ ಸೌಲನು ಯೋನಾತಾನನನ್ನು ಕೊಲ್ಲುವುದಕ್ಕಾಗಿ ಈಟಿಯನ್ನು ಅವನ ಕಡೆಗೆ ಎಸೆದನು. ದಾವೀದನನ್ನು ಕೊಲ್ಲಲು ತನ್ನ ತಂದೆಯು ದೃಢನಿರ್ಧಾರ ಮಾಡಿದ್ದಾನೆಂದು ಯೋನಾತಾನನು ತಿಳಿದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು