2 ದಾವೀದನು ಅಹೀಮೆಲೆಕನಿಗೆ, “ರಾಜನು ನನಗೆ ಒಂದು ವಿಶೇಷ ಆಜ್ಞೆಯನ್ನು ಕೊಟ್ಟಿರುವನು. ಅವನು ನನಗೆ, ‘ಈ ಕೆಲಸದ ಬಗ್ಗೆ ಬೇರೆ ಯಾರಿಗೂ ತಿಳಿಸಬೇಡ. ನಾನು ನಿನಗೆ ಮಾಡಲು ಹೇಳಿದ ಕೆಲಸವು ಯಾರಿಗೂ ತಿಳಿಯಕೂಡದು’ ಎಂದು ಹೇಳಿದ್ದಾನೆ. ನಾನು ನನ್ನ ಜನರಿಗೆ ನನ್ನನ್ನು ಎಲ್ಲಿ ಭೇಟಿಯಾಗಬೇಕೆಂದು ತಿಳಿಸಿದ್ದೇನೆ.
2 ಅವನು, “ಅರಸನು ಒಂದು ಕೆಲಸವನ್ನು ಆಜ್ಞಾಪಿಸಿ, ಇದನ್ನು ಯಾರಿಗೂ ತಿಳಿಸಬಾರದೆಂದು ನನ್ನನ್ನು ಕಳುಹಿಸಿದ್ದಾನೆ. ನನ್ನ ಆಳುಗಳು ಇಂಥಿಂಥ ಸ್ಥಳದಲ್ಲಿ ನನ್ನನ್ನು ಸಂಧಿಸಬೇಕೆಂದು ಗೊತ್ತುಮಾಡಿದ್ದಾನೆ.
2 ಅವನು, “ಅರಸರು ಒಂದು ಕೆಲಸವನ್ನು ಆಜ್ಞಾಪಿಸಿ ಇದನ್ನು ಯಾರಿಗೂ ತಿಳಿಸಬಾರದೆಂದು ಕಟ್ಟಪ್ಪಣೆಮಾಡಿ ನನ್ನನ್ನು ಕಳುಹಿಸಿದ್ದಾರೆ. ನನ್ನ ಆಳುಗಳು ಇಂಥಿಂಥ ಸ್ಥಳದಲ್ಲಿ ನನ್ನನ್ನು ಸಂಧಿಸಬೇಕೆಂದು ಗೊತ್ತುಮಾಡಿದ್ದೇನೆ.
2 ಅರಸನು ಒಂದು ಕೆಲಸವನ್ನು ಆಜ್ಞಾಪಿಸಿ ಇದನ್ನು ಯಾರಿಗೂ ತಿಳಿಸಬಾರದೆಂದು ಕಟ್ಟುಮಾಡಿ ನನ್ನನ್ನು ಕಳುಹಿಸಿದ್ದಾನೆ. ನನ್ನ ಆಳುಗಳು ಇಂಥಿಂಥ ಸ್ಥಳದಲ್ಲಿ ನನ್ನನ್ನು ಸಂಧಿಸಬೇಕೆಂದು ಗೊತ್ತುಮಾಡಿದ್ದೇನೆ.
2 ದಾವೀದನು ಯಾಜಕನಾದ ಅಹೀಮೆಲೆಕನಿಗೆ, “ಅರಸನು ನನಗೆ ಒಂದು ಕಾರ್ಯವನ್ನು ಆಜ್ಞಾಪಿಸಿದ್ದು, ಇಂಥದ್ದೆಂದು ಒಬ್ಬರಿಗೂ ತಿಳಿಯಬಾರದೆಂದು ನನಗೆ ಹೇಳಿದನು. ಇಂಥಿಂಥ ಸ್ಥಳಗಳಿಗೆ ಹೋಗಬೇಕೆಂದು ನಾನು ನನ್ನ ಕೆಲಸದವರಿಗೆ ನೇಮಿಸಿದ್ದೇನೆ.
ನಡೆದ ಸಂಗತಿ ಏನೆಂದರೆ: ಪೇತ್ರನು ಮೊದಲು ಅಂತಿಯೋಕ್ಯಕ್ಕೆ ಬಂದಾಗ ಅವನು ಯೆಹೂದ್ಯರಲ್ಲದವರೊಂದಿಗೆ ಊಟಮಾಡಿದನು ಮತ್ತು ಅನ್ಯೋನ್ಯತೆಯಿಂದಿದ್ದನು. ಆ ಬಳಿಕ ಯಾಕೋಬನಿಂದ ಕಳುಹಿಸಲ್ಪಟ್ಟಿದ್ದ ಕೆಲವು ಯೆಹೂದ್ಯರು ಬಂದರು. ಆಗ, ಪೇತ್ರನು ಯೆಹೂದ್ಯರಲ್ಲದವರೊಂದಿಗೆ ಊಟಮಾಡುವುದನ್ನು ನಿಲ್ಲಿಸಿದನು. ಪೇತ್ರನು ತನ್ನನ್ನು ಯೆಹೂದ್ಯರಲ್ಲದವರಿಂದ ಬೇರ್ಪಡಿಸಿಕೊಂಡನು. ಯೆಹೂದ್ಯರಲ್ಲದವರೆಲ್ಲರೂ ಸುನ್ನತಿ ಮಾಡಿಸಿಕೊಳ್ಳಬೇಕೆಂದು ನಂಬಿಕೊಂಡಿದ್ದ ಯೆಹೂದ್ಯರಿಗೆ ಅವನು ಹೆದರಿಕೊಂಡನು.
ಆಗ ಆ ಪ್ರವಾದಿಯು, “ಆದರೆ ನಾನೂ ನಿನ್ನಂತೆಯೇ ಒಬ್ಬ ಪ್ರವಾದಿ” ಎಂದು ಹೇಳಿದನು. ನಂತರ ವಯಸ್ಸಾದ ಪ್ರವಾದಿಯು ಅವನಿಗೆ “ಯೆಹೋವನಿಂದ ಒಬ್ಬ ದೇವದೂತನು ನನ್ನ ಬಳಿಗೆ ಬಂದಿದ್ದನು. ಆ ದೂತನು ನಿನ್ನನ್ನು ನನ್ನ ಮನೆಗೆ ಕರೆತರಲು ನಿನ್ನೊಂದಿಗೆ ಅನ್ನಪಾನಗಳನ್ನು ತೆಗೆದುಕೊಳ್ಳಲು ನನಗೆ ತಿಳಿಸಿದನು” ಎಂದು ಸುಳ್ಳು ಹೇಳಿದನು.
ಆಗ ದಾವೀದನು ಎಬ್ಯಾತಾರನಿಗೆ, “ನಾನು ಎದೋಮ್ಯನಾದ ದೋಯೇಗನನ್ನು ಆ ದಿನ ನೋಬ್ ಪಟ್ಟಣದಲ್ಲಿ ನೋಡಿದೆ. ಅವನು ಸೌಲನಿಗೆ ತಿಳಿಸುತ್ತಾನೆಂದು ನನಗೆ ಗೊತ್ತಿತ್ತು! ನಿನ್ನ ತಂದೆಯ ಕುಟುಂಬದ ಮರಣಕ್ಕೆ ನಾನೇ ಕಾರಣ.
ಸೌಲನು ಮೀಕಲಳಿಗೆ, “ನೀನು ಈ ರೀತಿ ನನಗೆ ಮೋಸ ಮಾಡಿದ್ದೇಕೆ? ನನ್ನ ಶತ್ರುವು ತಪ್ಪಿಸಿಕೊಳ್ಳಲು ನೀನು ಅವಕಾಶ ಮಾಡಿಕೊಟ್ಟೆ! ದಾವೀದನು ಓಡಿಹೋದನಲ್ಲಾ!” ಎಂದು ಹೇಳಿದನು. ಮೀಕಲಳು ಸೌಲನಿಗೆ, “ತಪ್ಪಿಸಿಕೊಳ್ಳಲು ತನಗೆ ಸಹಾಯ ಮಾಡದಿದ್ದರೆ ನನ್ನನ್ನು ಕೊಲ್ಲುವುದಾಗಿ ದಾವೀದನು ತಿಳಿಸಿದ!” ಎಂದು ಹೇಳಿದಳು.
ಆದರೆ ಇಸಾಕನು ತನ್ನ ಮಗನಿಗೆ, “ನೀನು ಇಷ್ಟು ಬೇಗನೆ ಬೇಟೆಯಾಡಿಕೊಂಡು ಬಂದೆಯಾ?” ಎಂದು ಕೇಳಿದನು. ಅದಕ್ಕೆ ಯಾಕೋಬನು, “ನಾನು ಬಹುಬೇಗನೆ ಪ್ರಾಣಿಗಳನ್ನು ಕಂಡುಕೊಳ್ಳುವಂತೆ ನಿನ್ನ ದೇವರಾದ ಯೆಹೋವನು ಸಹಾಯ ಮಾಡಿದನು” ಎಂದು ಉತ್ತರಿಸಿದನು.