1 ಸಮುಯೇಲ 21:5 - ಪರಿಶುದ್ದ ಬೈಬಲ್5 ದಾವೀದನು ಯಾಜಕನಿಗೆ, “ನಾವು ಯಾವ ಹೆಂಗಸಿನೊಂದಿಗೂ ಲೈಂಗಿಕ ಸಂಬಂಧ ಹೊಂದಿಲ್ಲ. ನನ್ನ ಜನರು ಯುದ್ಧಕ್ಕೆ ಹೋಗುವಾಗಲೂ ಸಾಧಾರಣಕಾರ್ಯಕ್ಕೆ ಹೋಗುವಾಗಲೂ ತಮ್ಮ ದೇಹಗಳನ್ನು ಶುಚಿಯಾಗಿಟ್ಟುಕೊಳ್ಳುತ್ತಾರೆ. ನಮ್ಮ ಇಂದಿನ ಕಾರ್ಯವು ವಿಶೇಷವಾದ್ದರಿಂದ ನಾವು ಖಂಡಿತವಾಗಿ ಪವಿತ್ರರಾಗಿದ್ದೇವೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ದಾವೀದನು, “ನಮ್ಮ ಎಲ್ಲಾ ಯುದ್ಧ ಪ್ರಯಾಣಗಳಲ್ಲಿ ಸ್ತ್ರೀಸಂಗವನ್ನು ನಿಷೇಧಮಾಡುವಂತೆ ಈಗಲೂ ಮಾಡಿದ್ದೇವೆ. ನಾವು ಸಾಧಾರಣ ಕಾರ್ಯಕ್ಕೆ ಹೊರಟಾಗಲೂ ಆಳುಗಳು, ಸಾಮಾನುಗಳು ಪರಿಶುದ್ಧವಾಗಿರುತ್ತವೆ. ಈ ದಿನದಲ್ಲಿ ಅವು ಎಷ್ಟೋ ಹೆಚ್ಚಾಗಿ ಪರಿಶುದ್ಧವಾಗಿರುತ್ತದಲ್ಲವೇ” ಎಂದು ಉತ್ತರ ಕೊಟ್ಟನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ದಾವೀದನು, “ನಮ್ಮ ಎಲ್ಲಾ ಯುದ್ಧ ಪ್ರಯಾಣಗಳಲ್ಲಿ ಸ್ತ್ರೀಸಂಗ ನಿಷೇಧಮಾಡುವಂತೆ ಈಗಲೂ ಮಾಡಿದ್ದೇವೆ. ನಾವು ಸಾಧಾರಣ ಕಾರ್ಯಕ್ಕೆ ಹೊರಟಾಗಲೂ ಆಳುಗಳ ಸಾಮಾಗ್ರಿಗಳು ಪರಿಶುದ್ಧವಾಗಿರುತ್ತಿದ್ದವು. ಈ ದಿನವಂತು ಅವು ಮತ್ತಷ್ಟು ಪರಿಶುದ್ಧವಾಗಿ ಇರುತ್ತವಲ್ಲವೇ?’ ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಮ್ಮ ಎಲ್ಲಾ ಯುದ್ಧಪ್ರಯಾಣಗಳಲ್ಲಿ ಸ್ತ್ರೀನಿಷೇಧ ಮಾಡುವಂತೆ ಈಗಲೂ ಮಾಡಿದ್ದೇವೆ. ನಾವು ಸಾಧಾರಣಕಾರ್ಯಕ್ಕೆ ಹೊರಟಾಗಲೂ ಆಳುಗಳ ಸಾಮಾನುಗಳು ಪರಿಶುದ್ಧವಾಗಿರುತ್ತಿದ್ದವು. ಈ ದಿನದಲ್ಲಿ ಅವು ಎಷ್ಟೋ ಹೆಚ್ಚಾಗಿ ಪರಿಶುದ್ಧವಾಗಿರುವವಲ್ಲವೇ ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ದಾವೀದನು ಯಾಜಕನಿಗೆ ಉತ್ತರವಾಗಿ, “ನಾನು ಹೊರಡುವುದಕ್ಕಿಂತ ಮುಂಚೆ ನಿನ್ನೆಯೂ, ಮೊನ್ನೆಯೂ ಸ್ತ್ರೀಯರು ನಮಗೆ ದೂರವಾಗಿದ್ದರು. ಅಪವಿತ್ರವಾದ ಕಾರ್ಯಗಳಿಗೆ ಹೋಗುವಾಗಲೂ ಪುರುಷರು ಶುದ್ಧರಾಗಿರುತ್ತಾರೆ. ಇಂದು ಅದಕ್ಕಿಂತಲೂ ಹೆಚ್ಚಾಗಿರುವರಲ್ಲವೇ?” ಎಂದನು. ಅಧ್ಯಾಯವನ್ನು ನೋಡಿ |
ಆದ್ದರಿಂದ ಗಂಡ ಮತ್ತು ಹೆಂಡತಿ ಒಬ್ಬರಿಗೊಬ್ಬರು ದಾಂಪತ್ಯ ಕರ್ತವ್ಯಗಳನ್ನು ನೆರವೇರಿಸಲು ನಿರಾಕರಿಸಬಾರದು. ಅವರು ತಮ್ಮ ಸಮಯವನ್ನು ಪ್ರಾರ್ಥನೆಯಲ್ಲಿ ವಿನಿಯೋಗಿಸುವುದಕ್ಕಾಗಿ ಸ್ವಲ್ಪಕಾಲ ಲೈಂಗಿಕ ಸಂಬಂಧದಿಂದ ದೂರವಿರಬಹುದು. ಆದರೆ ಅದಕ್ಕೆ ಪರಸ್ಪರ ಸಮ್ಮತಿಯಿರಬೇಕು. ಬಳಿಕ ಮತ್ತೆ ಒಂದಾಗಬೇಕು, ಇಲ್ಲವಾದರೆ ನಿಮ್ಮ ಬಲಹೀನತೆಯನ್ನು ಕಂಡು ಸೈತಾನನು ಪಾಪಕ್ಕೆ ಪ್ರಚೋಧಿಸಬಹುದು.