1 ಸಮುಯೇಲ 21:7 - ಪರಿಶುದ್ದ ಬೈಬಲ್7 ಸೌಲನ ಅಧಿಕಾರಿಗಳಲ್ಲಿ ಒಬ್ಬನು ಆ ದಿನ ಅಲ್ಲಿದ್ದನು. ಅವನು ದೋಯೇಗನೆಂಬ ಎದೋಮ್ಯನು. ದೋಯೇಗನನ್ನು ಯೆಹೋವನ ಸನ್ನಿಧಿಯಲ್ಲಿ ಇಟ್ಟಿದ್ದರು. ಸೌಲನ ಕುರಿಗಳನ್ನು ಕಾಯುವವರಿಗೆ ದೋಯೇಗನು ನಾಯಕನಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅದೇ ದಿನ ಸೌಲನ ಪಶುಪಾಲರಲ್ಲಿ ಪ್ರಧಾನನಾದ ದೋಯೇಗನೆಂಬ ಎದೋಮ್ಯನು ಯೆಹೋವನ ಆಲಯದಲ್ಲಿ ಉಳಿದುಕೊಂಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅದೇ ದಿನ ಸೌಲನ ಪಶುಪಾಲರಲ್ಲಿ ಮುಖ್ಯಸ್ಥನಾದ ದೋಯೇಗನೆಂಬ ಎದೋಮ್ಯನು ಸರ್ವೇಶ್ವರನ ಆಲಯದಲ್ಲಿ ತಂಗಬೇಕಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅದೇ ದಿವಸ ಸೌಲನ ಪಶುಪಾಲರಲ್ಲಿ ಪ್ರಧಾನನಾದ ದೋಯೇಗನೆಂಬ ಎದೋಮ್ಯನು ಯೆಹೋವನ ಆಲಯದಲ್ಲಿ ತಡೆಯಲ್ಪಟ್ಟಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಸೌಲನ ಸೇವಕರಲ್ಲಿ ಎದೋಮ್ಯನಾದ ದೋಯೇಗನೆಂಬ ಹೆಸರುಳ್ಳ ಒಬ್ಬನು ಆ ದಿವಸ ಅಲ್ಲಿ ಯೆಹೋವ ದೇವರ ಆಲಯದ ಮುಂದೆ ಉಳಿದುಕೊಂಡಿದ್ದನು. ಅವನು ಸೌಲನ ಹಿಂಡು ಕಾಯುವವರಲ್ಲಿ ಮುಖ್ಯಸ್ಥನಾಗಿದ್ದನು. ಅಧ್ಯಾಯವನ್ನು ನೋಡಿ |
ಮರುಭೂಮಿಯಲ್ಲಿಯೂ ಬುರುಜುಗಳನ್ನು ಕಟ್ಟಿಸಿದನು; ಅನೇಕ ಬಾವಿಗಳನ್ನು ತೋಡಿಸಿದನು. ಅವನಿಗೆ ಬಯಲಿನಲ್ಲಿಯೂ ಬೆಟ್ಟಪ್ರದೇಶಗಳಲ್ಲಿಯೂ ಅಸಂಖ್ಯಾತ ಪಶುಗಳಿದ್ದವು. ಪರ್ವತ ಪ್ರಾಂತ್ಯಗಳಲ್ಲಿ ಮತ್ತು ಬೇರೆ ಸ್ಥಳಗಳಲ್ಲಿ ಹುಲುಸಾದ ಬೆಳೆಯನ್ನು ಬೆಳೆಯಿಸಿದನು. ಬಯಲುಗಳಲ್ಲಿ ಕೆಲಸಮಾಡಲು ಅವನು ರೈತರನ್ನು ಕೂಲಿಗೆ ನೇಮಿಸಿಕೊಂಡನು; ಬೆಟ್ಟಗಳಲ್ಲಿಯೂ ಕಾರ್ಮೆಲಿನಲ್ಲಿಯೂ ಇದ್ದ ತನ್ನ ದ್ರಾಕ್ಷಿತೋಟಗಳನ್ನು ನೋಡಿಕೊಳ್ಳಲು ಕೆಲಸಗಾರರನ್ನು ಕೂಲಿಗೆ ತೆಗೆದುಕೊಂಡನು.