Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 21:9 - ಪರಿಶುದ್ದ ಬೈಬಲ್‌

9 ಯಾಜಕನು, “ಇಲ್ಲಿರುವುದು ಫಿಲಿಷ್ಟಿಯನಾದ ಗೊಲ್ಯಾತನ ಖಡ್ಗವೊಂದೇ. ಏಲಾ ಕಣಿವೆಯಲ್ಲಿ ನೀನು ಅವನನ್ನು ಕೊಂದು ಅವನಿಂದ ನೀನು ಕಿತ್ತುಕೊಂಡ ಖಡ್ಗವೇ ಅದು. ಆ ಖಡ್ಗವನ್ನು ಬಟ್ಟೆಯಲ್ಲಿ ಸುತ್ತಿ ಎಫೋದಿನ ಹಿಂಭಾಗದಲ್ಲಿ ಇಟ್ಟಿದೆ. ನಿನಗೆ ಬೇಕಿದ್ದರೆ ಅದನ್ನು ತೆಗೆದುಕೋ” ಎಂದು ಉತ್ತರಿಸಿದನು. ದಾವೀದನು, “ಅದನ್ನು ನನಗೆ ಕೊಡು. ಗೊಲ್ಯಾತನ ಖಡ್ಗಕ್ಕೆ ಸಮನಾದ ಬೇರೊಂದು ಖಡ್ಗವಿಲ್ಲ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವನು, “ನೀನು ಏಲಾ ತಗ್ಗಿನಲ್ಲಿ ಕೊಂದು ಹಾಕಿದ ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯು ಒಂದು ಬಟ್ಟೆಯಲ್ಲಿ ಸುತ್ತಲ್ಪಟ್ಟು, ಏಫೋದಿನ ಹಿಂದೆ ಇಡಲ್ಪಟ್ಟಿದೆ. ಬೇಕಾದರೆ ಅದನ್ನು ತೆಗೆದುಕೊ. ಅದರ ಹೊರತು ನನ್ನ ಬಳಿಯಲ್ಲಿ ಬೇರೊಂದಿಲ್ಲ” ಎಂದು ಉತ್ತರಕೊಟ್ಟನು. ದಾವೀದನು, “ಅದಕ್ಕೆ ಸಮಾನವಾದದ್ದು ಮತ್ತೊಂದಿಲ್ಲ. ಅದನ್ನೇ ಕೊಡು” ಎಂದು ಹೇಳಿ ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವನು, “ನೀವು ಏಲಾ ತಗ್ಗಿನಲ್ಲಿ ಕೊಂದುಹಾಕಿದ ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯನ್ನು ಬಟ್ಟೆಯಲ್ಲಿ ಸುತ್ತಿ ಏಫೋದಿನ ಹಿಂದೆ ಇಡಲಾಗಿದೆ; ಬೇಕಾದರೆ ಅದನ್ನು ತೆಗೆದುಕೊಳ್ಳಿ. ಅದರ ಹೊರತು ನನ್ನ ಬಳಿ ಬೇರೊಂದಿಲ್ಲ,” ಎಂದು ಉತ್ತರಕೊಟ್ಟನು. ದಾವೀದನು, “ಅದಕ್ಕೆ ಸಮಾನವಾದದ್ದು ಮತ್ತೊಂದಿಲ್ಲ, ಅದನ್ನೇ ಕೊಡು,” ಎಂದು ಹೇಳಿ ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀನು ಏಲಾ ತಗ್ಗಿನಲ್ಲಿ ಕೊಂದುಹಾಕಿದ ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯು ಒಂದು ಬಟ್ಟೆಯಲ್ಲಿ ಸುತ್ತಲ್ಪಟ್ಟು ಏಫೋದಿನ ಹಿಂದೆ ಇಡಲ್ಪಟ್ಟಿದೆ; ಬೇಕಾದರೆ ಅದನ್ನು ತೆಗೆದುಕೋ. ಅದರ ಹೊರತು ನನ್ನ ಬಳಿಯಲ್ಲಿ ಬೇರೊಂದಿಲ್ಲ ಎಂದು ಉತ್ತರಕೊಟ್ಟನು. ದಾವೀದನು - ಅದಕ್ಕೆ ಸಮಾನವಾದದ್ದು ಮತ್ತೊಂದಿಲ್ಲ, ಅದನ್ನೇ ಕೊಡು ಎಂದು ಹೇಳಿ ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅದಕ್ಕೆ ಯಾಜಕನು, “ನೀನು ಏಲಾ ತಗ್ಗಿನಲ್ಲಿ ಸಂಹರಿಸಿದ ಫಿಲಿಷ್ಟಿಯನಾದ ಗೊಲ್ಯಾತನ ಖಡ್ಗವನ್ನು ಏಫೋದಿನ ಹಿಂದೆ ಒಂದು ಬಟ್ಟೆಯಲ್ಲಿ ಸುತ್ತಿ ಇಟ್ಟಿದೆ. ಅದನ್ನು ನೀನು ತೆಗೆದುಕೋ. ಏಕೆಂದರೆ ಅದು ಒಂದೇ ಅಲ್ಲದೆ ಇಲ್ಲಿ ಬೇರೊಂದು ಇಲ್ಲ,” ಎಂದನು. ಅದಕ್ಕೆ ದಾವೀದನು, “ಅದರಂಥದ್ದು ಮತ್ತೊಂದಿಲ್ಲ, ಅದನ್ನೇ ಕೊಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 21:9
6 ತಿಳಿವುಗಳ ಹೋಲಿಕೆ  

ಸೌಲನು ಮತ್ತು ಇಸ್ರೇಲಿನ ಸೈನಿಕರು ಒಟ್ಟಾಗಿ ಸೇರಿ ಏಲಾ ಕಣಿವೆಯಲ್ಲಿ ಪಾಳೆಯಮಾಡಿಕೊಂಡರು. ಸೌಲನ ಸೈನಿಕರು ಸಾಲಾಗಿನಿಂತು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಸಿದ್ಧರಾದರು.


ಅಷ್ಟೋರೆತಳ ದೇವಾಲಯದಲ್ಲಿ ಅವರು ಸೌಲನ ಆಯುಧಗಳನ್ನು ಇಟ್ಟರು. ಫಿಲಿಷ್ಟಿಯರು ಸೌಲನ ದೇಹವನ್ನು ಬೇತ್‌ಷೆಯಾನಿನ ಗೋಡೆಗೆ ನೇತುಹಾಕಿದರು.


ದಾವೀದನು ಅಹೀಮೆಲೆಕನಿಗೆ, “ನಿನ್ನ ಹತ್ತಿರ ಖಡ್ಗವಾಗಲಿ ಭರ್ಜಿಯಾಗಲಿ ಇದೆಯೇ? ರಾಜನ ಕಾರ್ಯಭಾರವು ಬಹುಮುಖ್ಯವಾದುದು. ನಾನು ಬೇಗ ಹೋಗಬೇಕಾಗಿದೆ. ನಾನು ಕತ್ತಿಯನ್ನಾಗಲೀ ಇತರ ಆಯುಧವನ್ನಾಗಲೀ ತರಲಿಲ್ಲ” ಎಂದು ಕೇಳಿದನು.


ಅಹೀಮೆಲೆಕನು ದಾವೀದನಿಗಾಗಿ ಯೆಹೋವನಲ್ಲಿ ಪ್ರಾರ್ಥಿಸಿದನು. ಅಹೀಮೆಲೆಕನು ದಾವೀದನಿಗೆ ಆಹಾರವನ್ನೂ ಫಿಲಿಷ್ಟಿಯನಾದ ಗೊಲ್ಯಾತನ ಖಡ್ಗವನ್ನೂ ಕೊಟ್ಟನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು