1 ಸಮುಯೇಲ 22:1 - ಪರಿಶುದ್ದ ಬೈಬಲ್1 ದಾವೀದನು ಗತ್ ಊರನ್ನು ಬಿಟ್ಟು ಅದುಲ್ಲಾಮ್ ಗವಿಗೆ ಓಡಿಹೋದನು. ದಾವೀದನು ಅದುಲ್ಲಾಮಿನಲ್ಲಿರುವುದು ಅವನ ಅಣ್ಣಂದಿರಿಗೂ ಬಂಧುಗಳಿಗೂ ತಿಳಿಯಿತು. ಅವರು ದಾವೀದನನ್ನು ನೋಡಲು ಅಲ್ಲಿಗೆ ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದಾವೀದನು ಅಕೀಷ ರಾಜನಿಂದ ತಪ್ಪಿಸಿಕೊಂಡು ಅದುಲ್ಲಾಮ್ ಎಂಬ ಗವಿಗೆ ಹೋದನು. ಈ ವರ್ತಮಾನವು ಅವನ ಅಣ್ಣಂದಿರಿಗೂ, ಬೇರೆ ಎಲ್ಲಾ ಸಂಬಂಧಿಕರಿಗೂ ಮುಟ್ಟಲಾಗಿ, ಅವರೂ ಬಂದು ಅವನನ್ನು ಸೇರಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ದಾವೀದನು ಅಲ್ಲಿಂದ ತಪ್ಪಿಸಿಕೊಂಡು ಅದುಲ್ಲಾಮ್ ಎಂಬ ಗವಿಗೆ ಹೋದನು. ಈ ಸಮಾಚಾರ, ಅವನ ಅಣ್ಣಂದಿರಿಗೂ ಬೇರೆ ಎಲ್ಲಾ ಸಂಬಂಧಿಕರಿಗೂ ಮುಟ್ಟಿತು. ಅವರೂ ಬಂದು ಅವನನ್ನು ಸೇರಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ದಾವೀದನು ಅಲ್ಲಿಂದ ತಪ್ಪಿಸಿಕೊಂಡು ಅದುಲ್ಲಾಮೆಂಬ ಗವಿಗೆ ಹೋದನು. ಈ ವರ್ತಮಾನವು ಅವನ ಅಣ್ಣಂದಿರಿಗೂ ಬೇರೆ ಎಲ್ಲಾ ಸಂಬಂಧಿಕರಿಗೂ ಮುಟ್ಟಲಾಗಿ ಅವರೂ ಬಂದು ಅವನನ್ನು ಸೇರಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ದಾವೀದನು ಆ ಸ್ಥಳದಿಂದ ತಪ್ಪಿಸಿಕೊಂಡು ಅದುಲ್ಲಾಮ್ ಎಂಬ ಗವಿಗೆ ಬಂದನು. ಆ ವರ್ತಮಾನವನ್ನು ಅವನ ಸಹೋದರರೂ, ಅವನ ತಂದೆಯ ಮನೆಯವರೆಲ್ಲರೂ ಕೇಳಿ, ಅವನ ಬಳಿಗೆ ಅಲ್ಲಿಗೆ ಬಂದರು. ಅಧ್ಯಾಯವನ್ನು ನೋಡಿ |