13 ಸೌಲನು ಅಹೀಮೆಲೆಕನಿಗೆ, “ನೀನು ಮತ್ತು ಇಷಯನ ಮಗ ನನ್ನ ವಿರುದ್ಧ ರಹಸ್ಯಯೋಜನಗೆಳನ್ನು ಏಕೆ ಮಾಡಿದಿರಿ? ನೀನು ದಾವೀದನಿಗೆ ರೊಟ್ಟಿಯನ್ನೂ ಖಡ್ಗವನ್ನೂ ಕೊಟ್ಟೆ! ನೀನು ಅವನಿಗಾಗಿ ದೇವರಲ್ಲಿ ಪ್ರಾರ್ಥಿಸಿದೆ. ಈಗ ದಾವೀದನು ನನ್ನ ಮೇಲೆ ಆಕ್ರಮಣಮಾಡಲು ಕಾಯುತ್ತಿದ್ದಾನೆ!” ಎಂದು ಹೇಳಿದನು.
13 ಆಗ ಸೌಲನು ಅವನಿಗೆ, “ನೀನು ನನಗೆ ವಿರೋಧವಾಗಿ ಇಷಯನ ಮಗನೊಡನೆ ಒಳಸಂಚುಮಾಡಿದ್ದೇಕೆ? ಅವನು ನನಗೆ ವಿರೋಧವಾಗಿ ಎದ್ದು ನನ್ನ ಜೀವಕ್ಕಾಗಿ ಹೊಂಚುಹಾಕುವಂತೆ ನೀನು ಅವನಿಗೆ ರೊಟ್ಟಿಕತ್ತಿಗಳನ್ನು ಕೊಟ್ಟು, ದೈವೋತ್ತರವನ್ನು ತಿಳಿಸಿದ್ದೇಕೆ?” ಎಂದು ಕೇಳಿದನು
13 ಆಗ ಸೌಲನು, “ನೀನು ನನಗೆ ವಿರೋಧವಾಗಿ ಜೆಸ್ಸೆಯನ ಮಗನೊಡನೆ ಒಳಸಂಚುಮಾಡಿದ್ದೇಕೆ? ಅವನು ನನಗೆ ವಿರೋಧವಾಗಿ ಎದ್ದು ನನ್ನ ಜೀವಕ್ಕಾಗಿ ಹೊಂಚುಹಾಕುವಂತೆ ನೀನು ಅವನಿಗೆ ರೊಟ್ಟಿ ಹಾಗು ಕತ್ತಿಯನ್ನು ಕೊಟ್ಟು ದೈವೋತ್ತರವನ್ನು ತಿಳಿಸಿದ್ದೇಕೆ?” ಎಂದು ಕೇಳಿದನು.
13 ಆಗ ಸೌಲನು ಅವನಿಗೆ - ನೀನು ನನಗೆ ವಿರೋಧವಾಗಿ ಇಷಯನ ಮಗನೊಡನೆ ಒಳಸಂಚುಮಾಡಿದ್ದೇಕೆ? ಅವನು ನನಗೆ ವಿರೋಧವಾಗಿ ಎದ್ದು ನನ್ನ ಜೀವಕ್ಕಾಗಿ ಹೊಂಚುಹಾಕುವಂತೆ ನೀನು ಅವನಿಗೆ ರೊಟ್ಟಿಕತ್ತಿಗಳನ್ನು ಕೊಟ್ಟು ದೈವೋತ್ತರವನ್ನು ತಿಳಿಸಿದ್ದೇಕೆ ಎಂದು ಕೇಳಲು ಅವನು -
13 ಸೌಲನು ಅವನಿಗೆ, “ನೀನೂ, ಇಷಯನ ಮಗನೂ ನನಗೆ ವಿರೋಧವಾಗಿ ಒಳಸಂಚು ಮಾಡಿದ್ದೇನು? ಅವನು ಅಡಗಿಕೊಂಡು ನನಗೆ ವಿರೋಧವಾಗಿ ಹೊಂಚುಹಾಕುವಂತೆ ನೀನು ಅವನಿಗೆ ರೊಟ್ಟಿಯನ್ನೂ, ಖಡ್ಗವನ್ನೂ ಕೊಟ್ಟು ದೇವರನ್ನು ಅವನಿಗೋಸ್ಕರ ವಿಚಾರಿಸಿದ್ದೇನು? ಅವನು ಇಂದಿನವರೆಗೂ ನನ್ನನ್ನು ಕೊಲ್ಲುವುದಕ್ಕೆ ಕಾಯುತ್ತಿದ್ದಾನೆ?” ಎಂದು ಕೇಳಿದನು.
ನೀವು ನನ್ನ ವಿರುದ್ಧವಾಗಿ ಸಂಚುನಡೆಸುತ್ತಿರುವಿರಿ! ನೀವು ರಹಸ್ಯಯೋಜನೆಗಳನ್ನು ಮಾಡಿದ್ದೀರಿ. ನನ್ನ ಮಗ ಯೋನಾತಾನನ ಬಗ್ಗೆ ನಿಮ್ಮಲ್ಲಿ ಒಬ್ಬರೂ ನನಗೆ ತಿಳಿಸಲಿಲ್ಲ! ಅವನು ಇಷಯನ ಮಗನ ಜೊತೆ ಒಪ್ಪಂದ ಮಾಡಿಕೊಂಡಿದ್ದಾನೆಂದು ನಿಮ್ಮಲ್ಲಿ ಒಬ್ಬರೂ ನನಗೆ ತಿಳಿಸಲಿಲ್ಲ! ನಿಮ್ಮಲ್ಲಿ ಒಬ್ಬರೂ ನನ್ನ ಬಗ್ಗೆ ಚಿಂತಿಸುವುದಿಲ್ಲ! ನನ್ನ ಮಗ ಯೋನಾತಾನನು ದಾವೀದನನ್ನು ಪ್ರೋತ್ಸಾಹಿಸಿದ್ದಾನೆಂದು ನಿಮ್ಮಲ್ಲಿ ಒಬ್ಬರೂ ನನಗೆ ತಿಳಿಸಲಿಲ್ಲ. ಅಡಗಿಕೊಂಡು ನನ್ನ ಮೇಲೆ ಆಕ್ರಮಣ ಮಾಡುವಂತೆ ನನ್ನ ಸೇವಕನಾದ ದಾವೀದನಿಗೆ ಯೋನಾತಾನನು ಹೇಳಿಕೊಟ್ಟಿದ್ದಾನೆ! ಈಗ ದಾವೀದನು ಮಾಡುತ್ತಿರುವುದು ಅದನ್ನೇ!” ಎಂದು ಹೇಳಿದನು.
ಬೇತೇಲಿನ ಯಾಜಕನಾದ ಅಮಚ್ಯನು ಇಸ್ರೇಲಿನ ಅರಸನಾದ ಯಾರೊಬ್ಬಾಮನಿಗೆ ಈ ಪತ್ರವನ್ನು ಕಳುಹಿಸಿದನು. “ನಿನಗೆ ವಿರುದ್ಧವಾಗಿ ಆಮೋಸನು ಯೋಜನೆಗಳನ್ನು ಮಾಡುತ್ತಿದ್ದಾನೆ. ಇಸ್ರೇಲಿನ ಜನರು ನಿನಗೆ ವಿರುದ್ಧವಾಗಿ ಯುದ್ಧಮಾಡುವಂತೆ ಪ್ರಯತ್ನಿಸುತ್ತಾನೆ. ಅವನು ಎಷ್ಟೆಲ್ಲಾ ಮಾತಾಡುತ್ತಾನೆಂದರೆ, ಈ ದೇಶವು ಅವನ ಮಾತುಗಳನ್ನು ತುಂಬಲು ಸಾಧ್ಯವಿಲ್ಲ.