Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 22:14 - ಪರಿಶುದ್ದ ಬೈಬಲ್‌

14 ಅಹೀಮೆಲೆಕನು, “ದಾವೀದನು ನಿನಗೆ ಬಹಳ ನಂಬಿಗಸ್ತನಾಗಿದ್ದಾನೆ. ದಾವೀದನಷ್ಟು ನಂಬಿಗಸ್ತನು ನಿನ್ನ ಇತರ ಅಧಿಕಾರಿಗಳಲ್ಲಿ ಇಲ್ಲವೇ ಇಲ್ಲ. ದಾವೀದನು ನಿನ್ನ ಸ್ವಂತ ಅಳಿಯ. ದಾವೀದನು ನಿನ್ನ ಅಂಗರಕ್ಷಕ ದಳಪತಿ. ದಾವೀದನನ್ನು ನಿನ್ನ ಸ್ವಂತ ಕುಟುಂಬವೆಲ್ಲ ಗೌರವಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವನು, “ನಿನ್ನ ಎಲ್ಲಾ ಸೇವಕರಲ್ಲಿ ಅರಸನ ಅಳಿಯನಾಗಿರುವ ದಾವೀದನಂತೆ ನಂಬಿಗಸ್ತನಾದವನು ಯಾವನಿದ್ದಾನೆ? ಅವನು ನಿನ್ನ ಆಲೋಚಕರಲ್ಲೊಬ್ಬನು, ನಿನ್ನ ಮನೆಯಲ್ಲಿ ಗೌರವಸ್ಥನೂ ಆಗಿದ್ದನಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅಹೀಮೆಲೆಕನು, “ನಿಮ್ಮ ಎಲ್ಲಾ ಸೇವಕರಲ್ಲಿ, ಅರಸನ ಅಳಿಯನಾಗಿರುವ ದಾವೀದನಂತೆ ನಂಬಿಗಸ್ತನಾದವನು ಯಾರಿದ್ದಾನೆ? ದಾವೀದನು ನಿಮ್ಮ ಆಲೋಚಕರಲ್ಲೊಬ್ಬನೂ ತಮ್ಮ ಮನೆಯವರಲ್ಲಿ ಗೌರವಾನ್ವಿತನೂ ಆಗಿದ್ದಾನಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಿನ್ನ ಎಲ್ಲಾ ಸೇವಕರಲ್ಲಿ ಅರಸನ ಅಳಿಯನಾಗಿರುವ ದಾವೀದನಂತೆ ನಂಬಿಗಸ್ತನಾದವನು ಯಾವನಿದ್ದಾನೆ? ಅವನು ನಿನ್ನ ಮಂತ್ರಾಲೋಚಕರಲ್ಲೊಬ್ಬನೂ ನಿನ್ನ ಮನೆಯಲ್ಲಿ ಘನವಂತನೂ ಆಗಿದ್ದಾನಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅಹೀಮೆಲೆಕನು ಅರಸನಿಗೆ ಉತ್ತರವಾಗಿ, “ನಿನ್ನ ಸಮಸ್ತ ಸೇವಕರಲ್ಲಿ ದಾವೀದನ ಹಾಗೆ ನಂಬಿಗಸ್ತನಾದವನು ಯಾರಿದ್ದಾರೆ? ಅವನು ಅರಸನಿಗೆ ಅಳಿಯನೂ ನಿಮ್ಮ ಅಂಗರಕ್ಷಕರ ನಾಯಕನೂ ನಿನ್ನ ಮನೆಯಲ್ಲಿ ಘನವುಳ್ಳವನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 22:14
13 ತಿಳಿವುಗಳ ಹೋಲಿಕೆ  

ಯೋನಾತಾನನು ತನ್ನ ತಂದೆಗೆ, “ದಾವೀದನನ್ನು ಏಕೆ ಕೊಲ್ಲಬೇಕು? ಅವನು ಮಾಡಿದ ತಪ್ಪಾದರೂ ಏನು?” ಎಂದು ಕೇಳಿದನು.


ಪ್ರತಿಯೊಬ್ಬನಿಗೂ ಅವನ ಕಾರ್ಯಗಳಿಗೆ ಮತ್ತು ನಂಬಿಗಸ್ತಿಕೆಗೆ ತಕ್ಕಂತೆ ಯೆಹೋವನು ಪ್ರತಿಫಲ ಕೊಡುವನು. ಇಂದು ಯೆಹೋವನು ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದರೂ ಯೆಹೋವನಿಂದ ಅಭಿಷೇಕಿಸಲ್ಪಟ್ಟ ರಾಜನಾಗಿರುವ ನಿನಗೆ ನಾನು ಕೇಡನ್ನು ಮಾಡುವುದಿಲ್ಲ!


ನನ್ನ ತಂದೆಯೇ, ನನ್ನ ಕೈಯಲ್ಲಿರುವ ಚೂರು ಬಟ್ಟೆಯನ್ನು ನೋಡು. ನಾನು ನಿನ್ನ ಅಂಗಿಯ ಮೂಲೆಯನ್ನು ಕತ್ತರಿಸಿಹಾಕಿದೆ. ನಾನು ನಿನ್ನನ್ನು ಕೊಲ್ಲಬಹುದಿತ್ತು, ಆದರೆ ಕೊಲ್ಲಲಿಲ್ಲ! ನೀನು ಇದನ್ನು ಅರ್ಥಮಾಡಿಕೊಳ್ಳಬೇಕೆಂದು ನಾನು ಬಯಸಿದ್ದೇನೆ. ನಾನು ನಿನ್ನ ವಿರುದ್ಧವಾಗಿ ಯಾವ ಸಂಚನ್ನೂ ಮಾಡುತ್ತಿಲ್ಲವೆಂದು ನೀನು ತಿಳಿದುಕೊಳ್ಳಬೇಕಾಗಿದೆ! ನಾನು ನಿನಗೆ ಯಾವ ತಪ್ಪನ್ನೂ ಮಾಡಿಲ್ಲ! ಆದರೆ ನೀನು ನನ್ನನ್ನು ಹುಡುಕುತ್ತಿರುವೆ; ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿರುವೆ.


ಸೌಲನು ಅಹೀಮೆಲೆಕನಿಗೆ, “ನೀನು ಮತ್ತು ಇಷಯನ ಮಗ ನನ್ನ ವಿರುದ್ಧ ರಹಸ್ಯಯೋಜನಗೆಳನ್ನು ಏಕೆ ಮಾಡಿದಿರಿ? ನೀನು ದಾವೀದನಿಗೆ ರೊಟ್ಟಿಯನ್ನೂ ಖಡ್ಗವನ್ನೂ ಕೊಟ್ಟೆ! ನೀನು ಅವನಿಗಾಗಿ ದೇವರಲ್ಲಿ ಪ್ರಾರ್ಥಿಸಿದೆ. ಈಗ ದಾವೀದನು ನನ್ನ ಮೇಲೆ ಆಕ್ರಮಣಮಾಡಲು ಕಾಯುತ್ತಿದ್ದಾನೆ!” ಎಂದು ಹೇಳಿದನು.


ದಾವೀದನು ಅಹೀಮೆಲೆಕನಿಗೆ, “ರಾಜನು ನನಗೆ ಒಂದು ವಿಶೇಷ ಆಜ್ಞೆಯನ್ನು ಕೊಟ್ಟಿರುವನು. ಅವನು ನನಗೆ, ‘ಈ ಕೆಲಸದ ಬಗ್ಗೆ ಬೇರೆ ಯಾರಿಗೂ ತಿಳಿಸಬೇಡ. ನಾನು ನಿನಗೆ ಮಾಡಲು ಹೇಳಿದ ಕೆಲಸವು ಯಾರಿಗೂ ತಿಳಿಯಕೂಡದು’ ಎಂದು ಹೇಳಿದ್ದಾನೆ. ನಾನು ನನ್ನ ಜನರಿಗೆ ನನ್ನನ್ನು ಎಲ್ಲಿ ಭೇಟಿಯಾಗಬೇಕೆಂದು ತಿಳಿಸಿದ್ದೇನೆ.


ದಾವೀದನು ಮತ್ತು ಅವನ ಜನರು ಫಿಲಿಷ್ಟಿಯರೊಂದಿಗೆ ಹೋರಾಡಲು ಹೋದರು. ಅವರು ಇನ್ನೂರು ಜನ ಫಿಲಿಷ್ಟಿಯರನ್ನು ಕೊಂದು ಅವರ ಮುಂದೊಗಲುಗಳನ್ನು ತೆಗೆದುಕೊಂಡು ಬಂದು ರಾಜನ ಅಳಿಯನಾಗುವುದಕ್ಕೋಸ್ಕರ ಅವುಗಳನ್ನು ಸಂಪೂರ್ಣವಾಗಿ ಸೌಲನಿಗೆ ಒಪ್ಪಿಸಿದರು. ಆಗ ಸೌಲನು ತನ್ನ ಮಗಳಾದ ಮೀಕಲಳನ್ನು ದಾವೀದನಿಗೆ ಮದುವೆ ಮಾಡಿಕೊಟ್ಟನು.


ಸೌಲನು ದಾವೀದನನ್ನು ತನ್ನಿಂದ ದೂರಕಳುಹಿಸಿದನು. ಸೌಲನು ದಾವೀದನನ್ನು ಒಂದು ಸಾವಿರ ಸೈನಿಕರಿಗೆ ಸೇನಾಪತಿಯನ್ನಾಗಿ ಮಾಡಿದನು. ದಾವೀದನು ಯುದ್ಧದಲ್ಲಿ ಸೈನಿಕರನ್ನು ಮುನ್ನಡೆಸಿದನು.


ಇಸ್ರೇಲರಲ್ಲಿನ ಒಬ್ಬನು, “ನೀವು ಅವನನ್ನು ನೋಡಿದಿರಾ! ಅವನನ್ನು ನೋಡಿ! ಆ ಗೊಲ್ಯಾತನು ಪ್ರತಿನಿತ್ಯ ಹೊರಗೆ ಬಂದು ಇಸ್ರೇಲರನ್ನು ಮತ್ತೆಮತ್ತೆ ಹಾಸ್ಯಮಾಡುತ್ತಿದ್ದಾನೆ. ಅವನನ್ನು ಕೊಂದವನಿಗೆ ಸೌಲನು ಅಪಾರ ಐಶ್ವರ್ಯವನ್ನು ಕೊಡುವುದಲ್ಲದೆ ತನ್ನ ಮಗಳನ್ನೂ ಅವನಿಗೆ ಕೊಟ್ಟು ಮದುವೆ ಮಾಡುತ್ತಾನೆ; ಅಲ್ಲದೆ ಅವನ ವಂಶವನ್ನು ಇಸ್ರೇಲಿನಲ್ಲಿ ಸ್ವತಂತ್ರಗೊಳಿಸುತ್ತಾನೆ” ಎಂದು ಹೇಳಿದನು.


ನಾನು ಮಾಡಿದ ತಪ್ಪನ್ನು ದಯವಿಟ್ಟು ಕ್ಷಮಿಸು. ಯೆಹೋವನು ನಿನ್ನ ಕುಟುಂಬವನ್ನು ಪ್ರಬಲಗೊಳಿಸುತ್ತಾನೆಂದೂ ನಿನ್ನ ಕುಟುಂಬದಿಂದ ಅನೇಕ ರಾಜರು ಬರುತ್ತಾರೆಂದೂ ನನಗೆ ತಿಳಿದಿದೆ! ನೀನು ಯೆಹೋವನ ಯುದ್ಧಗಳಲ್ಲಿ ಹೋರಾಡುವುದರಿಂದ ಯೆಹೋವನು ಇದನ್ನು ನೆರವೇರಿಸುತ್ತಾನೆ. ನೀನು ಜೀವಿಸಿರುವ ತನಕ ಜನರು ನಿನ್ನಲ್ಲಿ ಯಾವುದೇ ಬಗೆಯ ಕೆಟ್ಟದನ್ನು ಕಂಡುಹಿಡಿಯುವುದಿಲ್ಲ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು