1 ಸಮುಯೇಲ 22:17 - ಪರಿಶುದ್ದ ಬೈಬಲ್17 ನಂತರ ರಾಜನು ತನ್ನ ಸಿಪಾಯಿಗಳಿಗೆ, “ನೀವು ಹೋಗಿ ಯೆಹೋವನ ಯಾಜಕರನ್ನು ಕೊಂದುಹಾಕಿ. ಅವರು ದಾವೀದನ ಪಕ್ಷ ವಹಿಸಿದ್ದಾರೆ. ದಾವೀದನು ಓಡಿಹೋಗುತ್ತಿರುವುದು ತಿಳಿದಿದ್ದರೂ ಅವರು ನನಗೆ ತಿಳಿಸಲಿಲ್ಲ!” ಎಂದನು. ಆದರೆ ಯೆಹೋವನ ಯಾಜಕರನ್ನು ಕೊಲ್ಲಲು ಸೈನಿಕರು ನಿರಾಕರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಸಿಪಾಯಿಗಳಿಗೆ, “ನೀವು ಯೆಹೋವನ ಈ ಯಾಜಕರನ್ನು ಕೊಲ್ಲಿರಿ. ದಾವೀದನು ಓಡಿಹೋದದ್ದು ಗೊತ್ತಿದ್ದರೂ ನನಗೆ ತಿಳಿಸದೇ ಅವನಿಗೆ ಸಹಾಯ ಮಾಡಿದ್ದಾರೆ” ಎಂದು ಹೇಳಿ ಅವರನ್ನು ಕೊಲ್ಲಲು ಆಜ್ಞಾಪಿಸಿದನು. ಆದರೆ ಅರಸನ ಸಿಪಾಯಿಗಳು ಯಾಜಕರ ಮೇಲೆ ಕೈಹಾಕುವುದಕ್ಕೆ ಮನಸ್ಸು ಮಾಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ತನ್ನ ಬಳಿಯಲ್ಲಿದ್ದ ಸಿಪಾಯಿಗಳಿಗೆ, “ನೀವು ಹಿಂದಿರುಗಿ ಸರ್ವೇಶ್ವರನ ಈ ಯಾಜಕರನ್ನು ಕೊಲ್ಲಿರಿ; ದಾವೀದನು ಪಲಾಯನ ಆದದ್ದು ಗೊತ್ತಿದ್ದರೂ ನನಗೆ ತಿಳಿಸದೆ ಅವನಿಗೆ ಸಹಾಯಮಾಡಿದ್ದಾರೆ,” ಎಂದು ಆಜ್ಞಾಪಿಸಿದನು. ಆದರೆ ಅರಸನ ಸಿಪಾಯಿಗಳು ಸರ್ವೇಶ್ವರನ ಯಾಜಕರ ಮೇಲೆ ಕೈಹಾಕುವುದಕ್ಕೆ ಮನಸ್ಸುಮಾಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನೀವು ತಿರುಗಿಕೊಂಡು ಯೆಹೋವನ ಈ ಯಾಜಕರನ್ನು ಕೊಲ್ಲಿರಿ; ದಾವೀದನು ಓಡಿಹೋದದ್ದು ಗೊತ್ತಿದ್ದರೂ ನನಗೆ ತಿಳಿಸದೆ ಅವನಿಗೆ ಸಹಾಯಮಾಡಿದ್ದಾರೆ ಎಂದು ಹೇಳಿ ಆಜ್ಞಾಪಿಸಿದನು. ಆದರೆ ಅರಸನ ಸಿಪಾಯಿಗಳು ಯೆಹೋವನ ಯಾಜಕರ ಮೇಲೆ ಕೈಹಾಕುವದಕ್ಕೆ ಮನಸ್ಸುಮಾಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅರಸನು ತನ್ನ ಬಳಿಯಲ್ಲಿ ನಿಂತಿರುವ ಕಾಲಾಳಿಗೆ, “ನೀವು ತಿರುಗಿಕೊಂಡು ಯೆಹೋವ ದೇವರ ಯಾಜಕರನ್ನು ಕೊಂದುಹಾಕಿರಿ. ಏಕೆಂದರೆ ಅವರ ಕೈ ದಾವೀದನಿಗೆ ಸಹಾಯಕವಾಗಿದೆ. ಅವನು ಓಡಿ ಹೋಗುವುದನ್ನು ಅವರು ತಿಳಿದಿದ್ದು, ಅದನ್ನು ನನಗೆ ತಿಳಿಸದೆ ಹೋದರು,” ಎಂದನು. ಆದರೆ ಅರಸನ ಸೇವಕರು ಯೆಹೋವ ದೇವರ ಯಾಜಕರ ಮೇಲೆ ತಮ್ಮ ಕೈಯನ್ನು ಚಾಚಲೊಲ್ಲದೆ ಹೋದರು. ಅಧ್ಯಾಯವನ್ನು ನೋಡಿ |
ಆದರೆ ಸೈನಿಕರು ಸೌಲನಿಗೆ, “ಈ ದಿನ ಇಸ್ರೇಲರನ್ನು ಮುನ್ನಡೆಸಿ ಮಹಾವಿಜಯವನ್ನು ಉಂಟುಮಾಡಿದ ಯೋನಾತಾನನು ಸಾಯಬೇಕೋ? ಇಲ್ಲ! ಜೀವಸ್ವರೂಪನಾದ ಯೆಹೋವನಾಣೆ, ಯೋನಾತಾನನ ತಲೆಕೂದಲುಗಳಲ್ಲಿ ಒಂದಾದರೂ ನೆಲಕ್ಕೆ ಬೀಳಲು ನಾವು ಬಿಡುವುದಿಲ್ಲ. ಇಂದು ಫಿಲಿಷ್ಟಿಯರ ವಿರುದ್ಧ ಹೋರಾಡಲು ದೇವರು ಯೋನಾತಾನನಿಗೆ ಸಹಾಯಮಾಡಿದ್ದಾನೆ” ಎಂದು ಹೇಳಿದರು. ಹೀಗೆ ಜನರು ಯೋನಾತಾನನನ್ನು ರಕ್ಷಿಸಿದರು. ಅವನನ್ನು ಸಾಯಿಸಲಿಲ್ಲ.
ಯೇಹುವು ಸರ್ವಾಂಗಹೋಮಗಳನ್ನು ಅರ್ಪಿಸಿದ ತಕ್ಷಣ, ಕಾವಲುಗಾರರಿಗೂ ಸೇನಾಧಿಪತಿಗಳಿಗೂ, “ಒಳಕೋಣೆಗೆ ಹೋಗಿ ಬಾಳನ ಆರಾಧಕರನ್ನೆಲ್ಲ ಕೊಂದುಹಾಕಿ! ಜೀವಸಹಿತ ಯಾರೂ ಆಲಯದಿಂದ ಹೊರಕ್ಕೆ ಬರಲು ಬಿಡಬೇಡಿ!” ಎಂದು ಹೇಳಿದನು. ಸೇನಾಧಿಪತಿಗಳು ಚೂಪಾದ ಖಡ್ಗದಿಂದ ಬಾಳನ ಭಕ್ತರನ್ನೆಲ್ಲ ಕೊಂದುಹಾಕಿದರು. ಬಾಳನ ಭಕ್ತರ ದೇಹಗಳನ್ನು ಕಾವಲುಗಾರರು ಮತ್ತು ಸೇನಾಧಿಪತಿಗಳು ಹೊರಕ್ಕೆ ಎಸೆದರು. ನಂತರ ಆ ಕಾವಲುಗಾರರು ಮತ್ತು ಸೇನಾಧಿಪತಿಗಳು ಬಾಳನ ಆಲಯದ ಒಳಕೋಣೆಯನ್ನು ಪ್ರವೇಶಿಸಿದರು.
ಒಂದು ಕಾಲದಲ್ಲಿ ಈಜೆಬೆಲಳು ಯೆಹೋವನ ಪ್ರವಾದಿಗಳನ್ನೆಲ್ಲ ಕೊಲ್ಲುತ್ತಿದ್ದಳು. ಓಬದ್ಯನು ನೂರು ಮಂದಿ ಪ್ರವಾದಿಗಳನ್ನು ಕರೆದೊಯ್ದು, ಅವರನ್ನು ಗುಹೆಗಳಲ್ಲಿ ಅಡಗಿಸಿಟ್ಟನು. ಓಬದ್ಯನು ಐವತ್ತು ಮಂದಿ ಪ್ರವಾದಿಗಳನ್ನು ಒಂದು ಗುಹೆಯಲ್ಲಿಯೂ ಉಳಿದ ಐವತ್ತು ಮಂದಿ ಪ್ರವಾದಿಗಳನ್ನು ಮತ್ತೊಂದು ಗುಹೆಯಲ್ಲಿಯೂ ಇಟ್ಟನು. ಓಬದ್ಯನು ಅವರಿಗೆ ಆಹಾರವನ್ನೂ ನೀರನ್ನೂ ಒದಗಿಸುತ್ತಿದ್ದನು.)