1 ಸಮುಯೇಲ 22:18 - ಪರಿಶುದ್ದ ಬೈಬಲ್18 ಆದ್ದರಿಂದ ರಾಜನು ದೋಯೇಗನಿಗೆ, “ನೀನು ಹೋಗಿ ಯಾಜಕರನ್ನು ಕೊಂದುಹಾಕು” ಎಂದು ಹೇಳಿದನು. ಆದ್ದರಿಂದ ಎದೋಮ್ಯನಾದ ದೋಯೇಗನು ಹೋಗಿ ಆ ದಿನ ಎಂಭತ್ತೈದು ಮಂದಿ ಯಾಜಕರನ್ನು ಕೊಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆದ್ದರಿಂದ ಸೌಲನು ಎದೋಮ್ಯನಾದ ದೋಯೇಗನಿಗೆ, “ನೀನು ಹೋಗಿ ಅವರನ್ನು ಕೊಲ್ಲು” ಎಂದು ಆಜ್ಞಾಪಿಸಲು, ಅವನು ನಾರು ಬಟ್ಟೆಯ ಎಪೋದನ್ನು ಧರಿಸಿಕೊಂಡಿದ್ದ ಎಂಭತ್ತೈದು ಯಾಜಕರನ್ನು ಆ ದಿನ ಕೊಂದುಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆದುದರಿಂದ ಸೌಲನು ಎದೋಮ್ಯನಾದ ದೋಯೇಗನಿಗೆ, “ನೀನು ಹೋಗಿ ಅವರನ್ನು ಕೊಲ್ಲು,” ಎಂದು ಆಜ್ಞಾಪಿಸಿದನು. ಅವನು ನಾರುಮಡಿಯ ಏಫೋದನ್ನು ಧರಿಸಿಕೊಂಡಿದ್ದ ಎಂಬತ್ತೈದು ಮಂದಿ ಯಾಜಕರನ್ನು ಆ ದಿವಸ ಕೊಂದುಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆದದರಿಂದ ಸೌಲನು ಎದೋಮ್ಯನಾದ ದೋಯೇಗನಿಗೆ - ನೀನು ಹೋಗಿ ಅವರನ್ನು ಕೊಲ್ಲು ಎಂದು ಆಜ್ಞಾಪಿಸಲು ಅವನು ನಾರು ಬಟ್ಟೆಯ ಏಫೋದನ್ನು ಧರಿಸಿಕೊಂಡಿದ್ದ ಎಂಭತ್ತೈದು ಮಂದಿ ಯಾಜಕರನ್ನು ಆ ದಿವಸ ಕೊಂದುಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆಗ ಅರಸನು ದೋಯೇಗನಿಗೆ, “ನೀನು ತಿರುಗಿಕೊಂಡು ಯಾಜಕರ ಮೇಲೆ ಬೀಳು,” ಎಂದನು. ಆಗ ಎದೋಮ್ಯನಾದ ದೋಯೇಗನು ತಿರುಗಿಕೊಂಡು ಯಾಜಕರ ಮೇಲೆ ಬಿದ್ದು, ನಾರುಬಟ್ಟೆಯ ಏಫೋದನ್ನು ಧರಿಸಿಕೊಳ್ಳುವವರಾದ ಎಂಬತ್ತೈದು ಯಾಜಕರನ್ನು ಆ ದಿನದಲ್ಲಿ ಕೊಂದನು. ಅಧ್ಯಾಯವನ್ನು ನೋಡಿ |
ಯಾಕೆಂದರೆ ನೀವು ಒಮ್ರಿಯ ಆಜ್ಞೆಯನ್ನು ಪರಿಪಾಲಿಸಿದಿರಿ. ಅಹಾಬನ ಮನೆಯವರು ಮಾಡುತ್ತಿದ್ದ ದುಷ್ಕೃತ್ಯಗಳನ್ನು ನೀವು ಮಾಡುತ್ತೀರಿ. ನೀವು ಅವರ ಬೋಧನೆಯನ್ನು ಅನುಸರಿಸುತ್ತೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ಕೆಡವಲ್ಪಟ್ಟ ನಿಮ್ಮ ನಗರವನ್ನು ನೋಡಿದ ಜನರು ಆಶ್ಚರ್ಯದಿಂದ ಸಿಳ್ಳುಹಾಕುವರು. ಆಗ ಬೇರೆ ಜನಾಂಗದವರು ನಿಮ್ಮ ಮೇಲೆ ಹೊರಿಸಿದ ಅವಮಾನವನ್ನು ನೀವು ಸಹಿಸಿಕೊಳ್ಳುವಿರಿ.”