1 ಸಮುಯೇಲ 22:2 - ಪರಿಶುದ್ದ ಬೈಬಲ್2 ದಾವೀದನ ಜೊತೆ ಅನೇಕ ಜನರು ಸೇರಿಕೊಂಡರು. ತೊಂದರೆಯಲ್ಲಿರುವವರು, ಸಾಲಗಾರರು ಮತ್ತು ಅತೃಪ್ತರಾದವರು ದಾವೀದನನ್ನು ಆಶ್ರಯಿಸಿಕೊಂಡರು. ದಾವೀದನು ಅವರಿಗೆಲ್ಲಾ ನಾಯಕನಾದನು. ದಾವೀದನೊಂದಿಗೆ ನಾನೂರು ಜನರಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಇದಲ್ಲದೆ ಕುಗ್ಗಿದವರೂ, ಸಾಲಗಾರರೂ, ಮನನೊಂದವರೂ, ಆಗಿರುವ ಸರ್ವಜನರೂ ಬಂದು ಅವನನ್ನು ಆಶ್ರಯಿಸಿಕೊಳ್ಳಲು, ಅವನು ಸುಮಾರು ನಾನೂರು ಜನರಿಗೆ ನಾಯಕನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಇದಲ್ಲದೆ ಶೋಷಿತರು, ಸಾಲಗಾರರು ಹಾಗು ಮನನೊಂದವರು ಆಗಿದ್ದ ಜನಸಾಮಾನ್ಯರು ಬಂದು ಅವನನ್ನು ಆಶ್ರಯಿಸಿಕೊಂಡರು. ಹೀಗೆ ಅವನು ಸುಮಾರು ನಾನೂರು ಜನರಿಗೆ ನಾಯಕನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇದಲ್ಲದೆ ಕುಗ್ಗಿದವರೂ ಸಾಲಗಾರರೂ ಮನನೊಂದವರೂ ಆಗಿರುವ ಸರ್ವಜನರೂ ಬಂದು ಅವನನ್ನು ಆಶ್ರಯಿಸಿಕೊಳ್ಳಲು ಅವನು ಸುಮಾರು ನಾನೂರು ಜನರಿಗೆ ನಾಯಕನಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಇದಲ್ಲದೆ ಶ್ರಮಪಟ್ಟವರೂ, ಸಾಲಗಾರರೂ, ಅಸಂತುಷ್ಟರೂ ಅವನ ಸಂಗಡ ಕೂಡಿಕೊಂಡರು. ಆಗ ದಾವೀದನು ಅವರಿಗೆ ಅಧಿಪತಿಯಾದನು. ಹೆಚ್ಚು ಕಡಿಮೆ ನಾನೂರು ಜನರು ಅವನ ಬಳಿಯಲ್ಲಿ ಇದ್ದರು. ಅಧ್ಯಾಯವನ್ನು ನೋಡಿ |
“ನಾಳೆ ಇದೇ ಸಮಯಕ್ಕೆ ನಾನು ನಿನ್ನ ಬಳಿಗೆ ಒಬ್ಬ ಮನುಷ್ಯನನ್ನು ಕಳುಹಿಸುತ್ತೇನೆ. ಅವನು ಬೆನ್ಯಾಮೀನ್ ಕುಟುಂಬಕ್ಕೆ ಸೇರಿದವನು. ನೀನು ಅವನನ್ನು ಅಭಿಷೇಕಿಸು. ನನ್ನ ಜನರಾದ ಇಸ್ರೇಲರಿಗೆ ಅವನು ರಾಜನಾಗುತ್ತಾನೆ. ಈ ಮನುಷ್ಯನು ನನ್ನ ಜನರನ್ನು ಫಿಲಿಷ್ಟಿಯರಿಂದ ರಕ್ಷಿಸುತ್ತಾನೆ. ನನ್ನ ಜನರ ಸಂಕಟವನ್ನು ನಾನು ನೋಡಿದ್ದೇನೆ; ನನ್ನ ಜನರ ಗೋಳನ್ನು ನಾನು ಆಲಿಸಿದ್ದೇನೆ” ಎಂದು ತಿಳಿಸಿದ್ದನು.
ಸಮಸ್ತವನ್ನು ಸೃಷ್ಟಿಸಿದಾತನು ದೇವರೇ. ಸಮಸ್ತವು ಆತನ ಮಹಿಮೆಗಾಗಿಯೇ ಸೃಷ್ಟಿಯಾಯಿತು. ದೇವರು ತನ್ನವರೇ ಆದ ಅನೇಕ ಜನರನ್ನು ಹೊಂದಿಕೊಂಡು ಅವರೊಂದಿಗೆ ತನ್ನ ಮಹಿಮೆಯನ್ನು ಹಂಚಿಕೊಳ್ಳಲು ಬಯಸಿದನು. ಆದ್ದರಿಂದ ಆತನು ಅವರನ್ನು ರಕ್ಷಣೆಗೆ ನಡೆಸಲು ಪರಿಪೂರ್ಣನಾದ ಒಬ್ಬಾತನನ್ನು ನಿರ್ಮಿಸಿದನು. ಆತನೇ ಯೇಸು. ದೇವರು ಆತನನ್ನು ಬಾಧೆಗಳ ಮೂಲಕವೇ ಪರಿಪೂರ್ಣನಾದ ರಕ್ಷಕನನ್ನಾಗಿ ಮಾಡಿದನು.
ಒಂದು ದಿನ ಪ್ರವಾದಿಮಂಡಲಿಯವರಲ್ಲೊಬ್ಬನ ಪತ್ನಿಯು ಗೋಳಾಡುತ್ತಾ ಎಲೀಷನಲ್ಲಿಗೆ ಹೋಗಿ, “ನನ್ನ ಗಂಡನು ನಿನಗೆ ಸೇವಕನಂತಿದ್ದನು. ಈಗ ನನ್ನ ಗಂಡ ಸತ್ತಿದ್ದಾನೆ! ಅವನು ಯೆಹೋವನಲ್ಲಿ ಭಯಭಕ್ತಿ ಉಳ್ಳವನಾಗಿದ್ದದು ನಿನಗೆ ತಿಳಿದಿದೆ. ಆದರೆ ಅವನು ಒಬ್ಬ ಮನುಷ್ಯನಿಗೆ ಹಣವನ್ನು ಕೊಡಬೇಕಾಗಿದೆ. ಈಗ ಆ ಮನುಷ್ಯನು ನನ್ನ ಎರಡು ಗಂಡುಮಕ್ಕಳನ್ನು ತೆಗೆದುಕೊಂಡು ತನ್ನ ಗುಲಾಮರನ್ನಾಗಿ ಮಾಡಿಕೊಳ್ಳಲು ಬರುತ್ತಿದ್ದಾನೆ!” ಎಂದು ಹೇಳಿದಳು.