23 ನೀನಾದರೋ ಹೆದರದೆ ನನ್ನ ಸಂಗಡ ಇರು. ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವವನೇ ನಿನ್ನ ಪ್ರಾಣವನ್ನೂ ತೆಗೆಯಬೇಕೆಂದಿರುತ್ತಾನೆ. ನೀನು ನನ್ನ ಜೊತೆಯಲ್ಲಿರುವುದಾದರೆ ಸುರಕ್ಷಿತನಾಗಿರುವಿ” ಎಂದನು.
23 ನೀನಾದರೋ ಹೆದರದೆ ನನ್ನ ಸಂಗಡ ಇರು; ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವವನು ನಿನ್ನ ಪ್ರಾಣವನ್ನೂ ತೆಗೆಯಬೇಕೆಂದಿರುತ್ತಾನೆ. ನೀನು ನನ್ನ ಜೊತೆಯಲ್ಲಿ ಇರುವುದಾದರೆ ಸುರಕ್ಷಿತನಾಗಿರುವೆ,” ಎಂದನು.
23 ನೀನಾದರೋ ಹೆದರದೆ ನನ್ನ ಸಂಗಡ ಇರು; ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವವನೇ ನಿನ್ನ ಪ್ರಾಣವನ್ನೂ ತೆಗೆಯಬೇಕೆಂದಿರುತ್ತಾನೆ. ನೀನು ನನ್ನ ಜೊತೆಯಲ್ಲಿರುವದಾದರೆ ಸುರಕ್ಷಿತನಾಗಿರುವಿ ಅಂದನು.
ಆಗ ರಾಜನಾದ ಸೊಲೊಮೋನನು ಯಾಜಕನಾದ ಎಬ್ಯಾತಾರನಿಗೆ, “ನಾನು ನಿನ್ನನ್ನು ಕೊಲ್ಲಲೇಬೇಕು. ಆದರೆ ಅಣತೋತಿನಲ್ಲಿರುವ ನಿನ್ನ ಮನೆಗೆ ಹಿಂತಿರುಗಿ ಹೋಗಲು ನಿನಗೆ ಅವಕಾಶ ಕೊಡುತ್ತೇನೆ. ನಾನು ನಿನ್ನನ್ನು ಕೊಲ್ಲುವುದಿಲ್ಲ ಏಕೆಂದರೆ ನನ್ನ ತಂದೆಯಾದ ದಾವೀದನೊಂದಿಗೆ ನಡೆಯುವಾಗ ಯೆಹೋವನ ಪವಿತ್ರಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ನೀನು ಸಹಾಯ ಮಾಡಿದೆ. ನನ್ನ ತಂದೆಯ ಕಷ್ಟದ ದಿನಗಳಲ್ಲೆಲ್ಲಾ ನೀನೂ ಅವನ ಕಷ್ಟಗಳಲ್ಲಿ ಪಾಲುಗಾರನಾಗಿದ್ದದ್ದು ನನಗೆ ತಿಳಿದಿದೆ” ಎಂದು ಹೇಳಿದನು.
“ಸೇವಕನು ತನ್ನ ಒಡೆಯನಿಗಿಂತ ದೊಡ್ಡವನಲ್ಲ ಎಂದು ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಿಸಿಕೊಳ್ಳಿ. ಜನರು ನನ್ನನ್ನು ಹಿಂಸಿಸಿದಂತೆ ನಿಮ್ಮನ್ನೂ ಹಿಂಸಿಸುವರು ಮತ್ತು ನನ್ನ ಉಪದೇಶಕ್ಕೆ ವಿಧೇಯರಾದರೆ ನಿಮ್ಮ ಉಪದೇಶಕ್ಕೂ ವಿಧೇಯರಾಗುವರು.
ನಾನು ಇವರೊಂದಿಗೆ ಇದ್ದಾಗ, ನಿನ್ನ ಹೆಸರಿನ ಶಕ್ತಿಯಿಂದ ಇವರನ್ನು ಕಾಯ್ದು ಕಾಪಾಡಿದೆನು. ಪವಿತ್ರ ಗ್ರಂಥದ ಹೇಳಿಕೆಯು ನೆರವೇರುವಂತೆ ಕಳೆದುಹೋಗುವುದಕ್ಕಾಗಿಯೇ ಆರಿಸಲ್ಪಟ್ಟಿದ್ದ (ಯೂದನೆಂಬ) ಒಬ್ಬನೇ ಒಬ್ಬನು ಇವರಲ್ಲಿ ನಾಶವಾದನು.
“ಆಗ ಜನರು ನಿಮ್ಮನ್ನು ಹಿಂಸಿಸಿ, ಮರಣದಂಡನೆ ವಿಧಿಸಲು ಅಧಿಕಾರಿಗಳಿಗೆ ಒಪ್ಪಿಸಿಕೊಡುವರು. ಜನರೆಲ್ಲರೂ ನಿಮ್ಮನ್ನು ವಿರೋಧಿಸುವರು. ನೀವು ನನ್ನಲ್ಲಿ ನಂಬಿಕೆ ಇಟ್ಟದ್ದಕ್ಕಾಗಿ ಇವುಗಳೆಲ್ಲಾ ನಿಮಗೆ ಸಂಭವಿಸುವವು.
“ಹೆದರಬೇಡ, ನನ್ನ ತಂದೆಯಾದ ಸೌಲನು ನಿನಗೆ ತೊಂದರೆ ಮಾಡುವುದಿಲ್ಲ. ನೀನು ಇಸ್ರೇಲಿನ ರಾಜನಾಗುವೆ! ನಾನು ನಿನಗೆ ಎರಡನೆಯವನಾಗುತ್ತೇನೆ. ಇದು ನನ್ನ ತಂದೆಗೂ ಸಹ ತಿಳಿದಿದೆ” ಎಂದು ಹೇಳಿದನು.
ದಾವೀದನು ಮೆಫೀಬೋಶೆತನಿಗೆ, “ಹೆದರಬೇಡ, ನಾನು ನಿನಗೆ ದಯತೋರಿಸುವೆ. ನಿನ್ನ ತಂದೆಯಾದ ಯೋನಾತಾನನ ಸಲುವಾಗಿ ನಾನು ಇದನ್ನು ಮಾಡುತ್ತೇನೆ. ನಿನ್ನ ಅಜ್ಜನಾದ ಸೌಲನ ಭೂಮಿಯನ್ನೆಲ್ಲಾ ನಾನು ಹಿಂದಕ್ಕೆ ಕೊಡುತ್ತೇನೆ. ನೀನು ಯಾವಾಗಲೂ ನನ್ನ ಪಂಕ್ತಿಯಲ್ಲಿ ಊಟಮಾಡಬೇಕು” ಎಂದು ಹೇಳಿದನು.