Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 22:3 - ಪರಿಶುದ್ದ ಬೈಬಲ್‌

3 ದಾವೀದನು ಅದುಲ್ಲಾಮನ್ನು ಬಿಟ್ಟು ಮೋವಾಬಿನ ಮಿಚ್ಪೆಗೆ ಹೋದನು. ದಾವೀದನು ಮೋವಾಬ್ ರಾಜನಿಗೆ, “ದೇವರು ನನಗೇನು ಮಾಡುತ್ತಾನೆಂಬುದನ್ನು ನಾನು ತಿಳಿದುಕೊಳ್ಳುವ ತನಕ, ನನ್ನ ತಂದೆತಾಯಿಗಳು ನಿನ್ನಲ್ಲಿಗೆ ಬಂದು ಇರಲು ದಯವಿಟ್ಟು ನನಗೆ ಅವಕಾಶ ಕೊಡು” ಎಂದು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅನಂತರ ದಾವೀದನು ತನ್ನ ತಂದೆತಾಯಿಗಳನ್ನು ಮೋವಾಬ್ ದೇಶದ ಮಿಚ್ಪೆ ಎಂಬಲ್ಲಿಗೆ ಕರೆದುಕೊಂಡು ಹೋಗಿ ಅಲ್ಲಿಯ ಅರಸನಿಗೆ, “ದೇವರು ನನಗೆ ಮಾರ್ಗತೋರಿಸುವವರೆಗೆ ನನ್ನ ತಂದೆತಾಯಿಗಳು ನಿನ್ನ ಬಳಿಯಲ್ಲಿರುವುದಕ್ಕೆ ಅಪ್ಪಣೆಯಾಗಬೇಕು” ಎಂದು ಬೇಡಿಕೊಂಡು, ಅವರನ್ನು ಅವನ ಬಳಿಯಲ್ಲಿ ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅನಂತರ ದಾವೀದನು ತನ್ನ ತಂದೆತಾಯಿಗಳನ್ನು ಮೋವಾಬ್ ದೇಶದ ಮಿಚ್ಪೆ ಎಂಬಲ್ಲಿಗೆ ಕರೆದುಕೊಂಡು ಹೋದನು. ಅಲ್ಲಿನ ರಾಜನನ್ನು, “ದೇವರು ನನಗೆ ಮಾರ್ಗತೋರಿಸುವವರೆಗೂ ನನ್ನ ತಂದೆತಾಯಿಗಳು ನಿಮ್ಮ ಬಳಿಯಲ್ಲಿರುವುದಕ್ಕೆ ಅಪ್ಪಣೆಯಾಗಬೇಕು,” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅನಂತರ ದಾವೀದನು ತನ್ನ ತಂದೆತಾಯಿಗಳನ್ನು ಮೋವಾಬ್‍ದೇಶದ ವಿುಚ್ಪೆ ಎಂಬಲ್ಲಿಗೆ ಕರಕೊಂಡು ಹೋಗಿ ಅಲ್ಲಿನ ಅರಸನನ್ನು - ದೇವರು ನನಗೆ ಮಾರ್ಗತೋರಿಸುವವರೆಗೂ ನನ್ನ ತಂದೆತಾಯಿಗಳು ನಿನ್ನ ಬಳಿಯಲ್ಲಿರುವದಕ್ಕೆ ಅಪ್ಪಣೆಯಾಗಬೇಕೆಂದು ಬೇಡಿಕೊಂಡು ಅವರನ್ನು ಅವನ ಬಳಿಯಲ್ಲಿ ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದಾವೀದನು ಅಲ್ಲಿಂದ ಹೊರಟು ಮೋವಾಬ್ ದೇಶದ ಮಿಚ್ಪೆಗೆ ಬಂದು ಮೋವಾಬಿನ ಅರಸನಿಗೆ, “ದೇವರು ನನಗೆ ಏನು ಮಾಡುವರೋ ಎಂದು ನಾನು ತಿಳಿಯುವವರೆಗೂ, ನನ್ನ ತಂದೆತಾಯಿಗಳು ಹೊರಟುಬಂದು ನಿನ್ನ ಬಳಿಯಲ್ಲಿ ವಾಸಿಸಿರಲಿ,” ಎಂದು ಹೇಳಿ, ಅವರನ್ನು ಮೋವಾಬಿನ ಅರಸನ ಬಳಿಗೆ ಕರೆತಂದು ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 22:3
15 ತಿಳಿವುಗಳ ಹೋಲಿಕೆ  

ಆದರೆ ಒಬ್ಬ ವಿಧವೆಗೆ ಮಕ್ಕಳಾಗಲಿ, ಮೊಮ್ಮಕ್ಕಳಾಗಲಿ ಇದ್ದರೆ, ಅವರು ತಂದೆತಾಯಿಗಳಿಗೆ ಸಹಾಯ ಮಾಡುವುದರ ಮೂಲಕ ಸ್ವಂತ ಕುಟುಂಬಕ್ಕೆ ಗೌರವವನ್ನು ತೋರಬೇಕು. ಅವರು ಹೀಗೆ ಮಾಡಿದರೆ, ತಂದೆತಾಯಿಗಳಿಗೆ ಮತ್ತು ಅಜ್ಜಅಜ್ಜಿಯರಿಗೆ ಪ್ರತ್ಯುಪಕಾರ ಮಾಡಿದಂತಾಗುವುದು. ಅದು ದೇವರಿಗೆ ಮೆಚ್ಚಿಕೆಯಾದದ್ದು.


ಸೌಲನು ಇಸ್ರೇಲನ್ನು ಪೂರ್ಣವಾಗಿ ಹತೋಟಿಯಲ್ಲಿಟ್ಟುಕೊಂಡು ತಾನು ರಾಜನೆಂಬುದನ್ನು ತೋರಿಸಿಕೊಟ್ಟನು. ಸೌಲನು ಇಸ್ರೇಲಿನ ಸುತ್ತಲೂ ವಾಸಿಸುತ್ತಿದ್ದ ಶತ್ರುಗಳೊಡನೆ ಅಂದರೆ ಮೋವಾಬ್ಯರೊಡನೆ, ಅಮ್ಮೋನಿಯರೊಡನೆ, ಎದೋಮ್ಯರೊಡನೆ, ಚೋಬದ ಅರಸರೊಡನೆ ಮತ್ತು ಫಿಲಿಷ್ಟಿಯರೊಡನೆ ಹೋರಾಡಿದನು. ಸೌಲನು ತಾನು ಹೋದ ಕಡೆಯಲ್ಲೆಲ್ಲಾ ಇಸ್ರೇಲರ ಶತ್ರುಗಳನ್ನು ಸೋಲಿಸಿದನು.


ಸಮುವೇಲನು ಏನನ್ನೂ ಮುಚ್ಚಿಡದೆ, ಎಲ್ಲವನ್ನೂ ಏಲಿಗೆ ತಿಳಿಸಿದನು. ಏಲಿಯು, “ಆತನು ಯೆಹೋವ. ಆತನು ತನಗೆ ಸರಿಕಾಣುವದನ್ನೇ ಮಾಡಲಿ” ಎಂದು ಹೇಳಿದನು.


ನೆರೆಹೊರೆಯವರು ಮಗುವಿಗೆ ಹೆಸರಿಟ್ಟರು. ಆ ಸ್ತ್ರೀಯರು, “ನೊವೊಮಿಗೆ ಗಂಡುಮಗು ಹುಟ್ಟಿದೆ” ಎಂದರು. ನೆರೆಯವರು ಓಬೇದನೆಂದು ಹೆಸರಿಟ್ಟರು. ಓಬೇದನು ಇಷಯನ ತಂದೆ, ಇಷಯನು ರಾಜನಾದ ದಾವೀದನ ತಂದೆ.


ಮೋವಾಬ್ಯಳೂ ಮಹ್ಲೋನನ ಹೆಂಡತಿಯೂ ಆಗಿದ್ದ ರೂತಳನ್ನು ನನ್ನ ಹೆಂಡತಿಯನ್ನಾಗಿ ತೆಗೆದುಕೊಳ್ಳುತ್ತೇನೆ. ಸತ್ತುಹೋದ ಮನುಷ್ಯನ ಆಸ್ತಿಯು ಅವನ ಹೆಸರಿನಲ್ಲಿ ಉಳಿಯಲೆಂದು ನಾನು ಹೀಗೆ ಮಾಡುತ್ತಿದ್ದೇನೆ. ಹೀಗೆ ಮಾಡುವುದರಿಂದ ಸತ್ತವನ ಹೆಸರು ಅವನ ಕುಟುಂಬದಲ್ಲಿಯೂ ಅವನ ಆಸ್ತಿಯಲ್ಲಿಯೂ ಉಳಿಯುವುದು. ಇದಕ್ಕೆ ನೀವೇ ಸಾಕ್ಷಿಯಾಗಿದ್ದೀರಿ” ಎಂದು ನುಡಿದನು.


ಆಗ ಯೆಹೋವನ ಆತ್ಮವು ಯೆಫ್ತಾಹನ ಮೇಲೆ ಬಂತು. ಯೆಫ್ತಾಹನು ಗಿಲ್ಯಾದನ ಮತ್ತು ಮನಸ್ಸೆಯ ಪ್ರದೇಶಗಳಲ್ಲಿ ಸಂಚರಿಸಿದನು. ಅವನು ಗಿಲ್ಯಾದಿನ ಮಿಚ್ಛೆಗೆ ಬಂದನು. ಗಿಲ್ಯಾದಿನ ಮಿಚ್ಛೆಯ ನಗರದಿಂದ ಅವನು ಅಮ್ಮೋನಿಯರ ಪ್ರದೇಶಕ್ಕೆ ಹೋದನು.


“ನೀವು ನಿಮ್ಮ ತಂದೆತಾಯಿಗಳನ್ನು ಸನ್ಮಾನಿಸಬೇಕು; ನೀವು ಸನ್ಮಾನಿಸಿದರೆ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಬಹುಕಾಲ ಬಾಳುವಿರಿ.


ಫರೋಹನು ಹೇಳಿದಂತೆಯೇ ಯೋಸೇಫನು ಮಾಡಿದನು. ಅವನು ತನ್ನ ತಂದೆಗೂ ಸಹೋದರರಿಗೂ ಈಜಿಪ್ಟಿನಲ್ಲಿ ವಾಸಿಸಲು ಉತ್ತಮವಾದ ಪ್ರದೇಶವನ್ನು ಕೊಟ್ಟನು. ಅದು ರಮ್ಸೇಸ್ ಪಟ್ಟಣದ ಸಮೀಪದಲ್ಲಿತ್ತು.


ದಾವೀದನ ಜೊತೆ ಅನೇಕ ಜನರು ಸೇರಿಕೊಂಡರು. ತೊಂದರೆಯಲ್ಲಿರುವವರು, ಸಾಲಗಾರರು ಮತ್ತು ಅತೃಪ್ತರಾದವರು ದಾವೀದನನ್ನು ಆಶ್ರಯಿಸಿಕೊಂಡರು. ದಾವೀದನು ಅವರಿಗೆಲ್ಲಾ ನಾಯಕನಾದನು. ದಾವೀದನೊಂದಿಗೆ ನಾನೂರು ಜನರಿದ್ದರು.


ದಾವೀದನು ತನ್ನ ತಂದೆತಾಯಿಗಳನ್ನು ಮೋವಾಬ್ ರಾಜನ ಹತ್ತಿರ ಬಿಟ್ಟನು. ದಾವೀದನ ತಂದೆತಾಯಿಗಳು ಅವನು ಕೋಟೆಯಲ್ಲಿರುವ ತನಕ ಮೋವಾಬಿನ ರಾಜನೊಂದಿಗೆ ನೆಲೆಸಿದರು.


ಮೋವಾಬಿನ ಜನರನ್ನು ಸಹ ದಾವೀದನು ಸೋಲಿಸಿದನು. ಅವರನ್ನು ನೆಲದ ಮೇಲೆ ಬಲವಂತದಿಂದ ಮಲಗಿಸಿ ಹಗ್ಗದಿಂದ ಅವರನ್ನು ಸಾಲುಸಾಲಾಗಿ ವಿಂಗಡಿಸಿದನು. ಎರಡು ಸಾಲಿನ ಗಂಡಸರನ್ನು ಕೊಲ್ಲಿಸಿದನು; ಆದರೆ ಮೂರನೆಯ ಸಾಲಿನ ಗಂಡಸರನ್ನು ಜೀವಂತವಾಗಿ ಉಳಿಸಿದನು. ಮೋವಾಬಿನ ಜನರು ದಾವೀದನ ಸೇವಕರಾದರು. ಅವರು ಅವನಿಗೆ ಕಪ್ಪಕಾಣಿಕೆಗಳನ್ನು ಅರ್ಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು