7 ಸೌಲನು ತನ್ನ ಸುತ್ತಲೂ ನಿಂತಿದ್ದ ಅಧಿಕಾರಿಗಳಿಗೆ, “ಬೆನ್ಯಾಮೀನನ ಜನರೇ, ಕೇಳಿ! ಇಷಯನ ಮಗನಾದ ದಾವೀದನು ನಿಮಗೆ ಹೊಲಗಳನ್ನೂ ದ್ರಾಕ್ಷಿತೋಟಗಳನ್ನೂ ಕೊಡುತ್ತಾನೆಂದು ತಿಳಿದಿರುವಿರಾ? ದಾವೀದನು ನಿಮಗೆ ಸಹಸ್ರಾಧಿಪತಿಗಳಾಗಿ ಮತ್ತು ಶತಾಧಿಪತಿಗಳಾಗಿ ಬಡ್ತಿ ನೀಡುತ್ತಾನೆಂದು ನೀವು ತಿಳಿದಿರುವಿರಾ?
7 ಆಗ ಅವನು ತನ್ನ ಸುತ್ತಲೂ ನಿಂತಿದ್ದ ಪರಿವಾರದವರಿಗೆ, “ಬೆನ್ಯಾಮೀನನ ಮಕ್ಕಳೇ ಕೇಳಿರಿ. ನೀವೆಲ್ಲರೂ ನನಗೆ ಒಳಸಂಚು ಮಾಡುವುದೇಕೆ? ಇಷಯನ ಮಗನು ನಿಮ್ಮೆಲ್ಲರಿಗೂ ಹೊಲಗಳನ್ನು, ದ್ರಾಕ್ಷಿತೋಟಗಳನ್ನು ಕೊಡುವನೋ? ಎಲ್ಲರನ್ನು ಸಹಸ್ರಾಧಿಪತಿಗಳನ್ನಾಗಲಿ, ಶತಾಧಿಪತಿಗಳನ್ನಾಗಲಿ ಮಾಡುವನೋ?
7 ಆಗ ಅವನು ತನ್ನ ಸುತ್ತಲೂ ನಿಂತಿದ್ದ ಪರಿವಾರದವರಿಗೆ, “ಬೆನ್ಯಾಮೀನನ ಕುಲಪುತ್ರರೇ ಕೇಳಿ; ನೀವೆಲ್ಲರೂ ನನಗೆ ವಿರೋಧವಾಗಿ ಒಳಸಂಚು ಮಾಡುವುದೇಕೆ? ಜೆಸ್ಸೆಯನ ಮಗನು ನಿಮ್ಮೆಲ್ಲರಿಗೂ ಹೊಲಗಳನ್ನೂ ದ್ರಾಕ್ಷಿತೋಟಗಳನ್ನೂ ಕೊಡುತ್ತಾನೆಯೇ? ಎಲ್ಲರನ್ನು ಸಹಸ್ರಾಧಿಪತಿಗಳನ್ನಾಗಲಿ, ಶತಾಧಿಪತಿಗಳನ್ನಾಗಲಿ ಮಾಡುತ್ತಾನೆಯೆ?
ಇಸ್ರೇಲಿನ ಜನರೆಲ್ಲರೂ ಹೊಸರಾಜನು ತಮ್ಮ ಮಾತಿಗೆ ಕಿವಿಗೊಡಲಿಲ್ಲವೆಂಬುದನ್ನು ನೋಡಿದರು. ಆದ್ದರಿಂದ ಜನರೆಲ್ಲರೂ ರಾಜನಿಗೆ, “ದಾವೀದನ ಕುಟುಂಬದಲ್ಲಿ ನಾವೆಲ್ಲರೂ ಭಾಗಿಗಳೇ? ಇಲ್ಲ! ಇಷಯನ ಭೂಮಿಯಲ್ಲಿ ನಮಗೇನಾದರೂ ಪಾಲು ಸಿಕ್ಕುತ್ತದೆಯೇ? ಇಲ್ಲ! ಇಸ್ರೇಲರೇ, ನಮ್ಮ ಮನೆಗಳಿಗೆ ನಾವು ಹೋಗೋಣ ನಡೆಯಿರಿ. ದಾವೀದನ ಮಗನು ತನ್ನ ಜನರನ್ನು ತಾನೇ ಆಳಲಿ!” ಎಂದು ಹೇಳಿದರು. ಇಸ್ರೇಲಿನ ಜನರೆಲ್ಲರೂ ಮನೆಗಳಿಗೆ ಹೋದರು.
ಆ ಸಮಯದಲ್ಲಿ ಇಷಯನ ವಂಶದಿಂದ ಒಬ್ಬ ವಿಶೇಷ ವ್ಯಕ್ತಿಯು ಹುಟ್ಟುವನು. ಆತನು ಒಂದು ಧ್ವಜದಂತಿರುವನು. ಎಲ್ಲಾ ಜನಾಂಗಗಳು ಆತನ ಸುತ್ತಲೂ ಸೇರಿಬರಬೇಕೆಂದು ಈ ಧ್ವಜವು ತೋರಿಸುವುದು. ಆ ಜನಾಂಗಗಳು ತಾವು ಏನು ಮಾಡಬೇಕೆಂದು ಕೇಳುವರು. ಆತನಿರುವ ಸ್ಥಳವು ಮಹಿಮೆಯಿಂದ ತುಂಬುವದು.
ಬಿಕ್ರೀಯ ಮಗನಾದ ಶೆಬ ಅಲ್ಲಿದ್ದನು. ಇವನು ದುಷ್ಟನಾಗಿದ್ದನು; ಬೆನ್ಯಾಮೀನ್ ಕುಲದವನಾಗಿದ್ದ ಇವನು, ತುತ್ತೂರಿಯನ್ನು ಊದುತ್ತಾ, “ದಾವೀದನಲ್ಲಿ ನಮ್ಮ ಪಾಲು ಏನೂ ಇಲ್ಲ. ಇಷಯನ ಮಗನಲ್ಲಿ ನಮಗೇನೂ ಇಲ್ಲ. ನಾವೆಲ್ಲ, ಅಂದರೆ ಇಸ್ರೇಲರೆಲ್ಲ ನಮ್ಮನಮ್ಮ ಗುಡಾರಗಳಿಗೆ ಹೋಗೋಣ” ಎಂದು ಹೇಳಿದನು.
ಸೌಲನು ಅಹೀಮೆಲೆಕನಿಗೆ, “ನೀನು ಮತ್ತು ಇಷಯನ ಮಗ ನನ್ನ ವಿರುದ್ಧ ರಹಸ್ಯಯೋಜನಗೆಳನ್ನು ಏಕೆ ಮಾಡಿದಿರಿ? ನೀನು ದಾವೀದನಿಗೆ ರೊಟ್ಟಿಯನ್ನೂ ಖಡ್ಗವನ್ನೂ ಕೊಟ್ಟೆ! ನೀನು ಅವನಿಗಾಗಿ ದೇವರಲ್ಲಿ ಪ್ರಾರ್ಥಿಸಿದೆ. ಈಗ ದಾವೀದನು ನನ್ನ ಮೇಲೆ ಆಕ್ರಮಣಮಾಡಲು ಕಾಯುತ್ತಿದ್ದಾನೆ!” ಎಂದು ಹೇಳಿದನು.
ಸೌಲನು ಯೋನಾತಾನನ ಮೇಲೆ ಬಹಳ ಕೋಪಗೊಂಡು, “ನೀನು ಅವಿಧೇಯಳಾದ ದಾಸಿಯ ಮಗ. ನೀನೂ ಅವಳಂತೆಯೇ ಅವಿಧೇಯ. ನೀನು ದಾವೀದನ ಪಕ್ಷವಹಿಸಿರುವುದು ನನಗೆ ಗೊತ್ತಿದೆ. ನೀನು ನಿನಗೂ ಮತ್ತು ನಿನ್ನ ತಾಯಿಗೂ ನಾಚಿಕೆಯನ್ನು ತಂದಿರುವೆ.
ಮಾರನೆಯ ದಿನದಲ್ಲಿ, ಅಂದರೆ ಆ ತಿಂಗಳ ಎರಡನೆಯ ದಿನದಲ್ಲಿ ದಾವೀದನ ಸ್ಥಳವು ಮತ್ತೆ ಖಾಲಿಯಾಗಿತ್ತು. ಆಗ ಸೌಲನು ತನ್ನ ಮಗನಾದ ಯೋನಾತಾನನಿಗೆ, “ನಿನ್ನೆ ಮತ್ತು ಇಂದು ಅಮಾವಾಸ್ಯೆ ಔತಣಕ್ಕೆ ಇಷಯನ ಮಗನಾದ ದಾವೀದನು ಏಕೆ ಬರಲಿಲ್ಲ?” ಎಂದು ಕೇಳಿದನು.