1 ಸಮುಯೇಲ 23:1 - ಪರಿಶುದ್ದ ಬೈಬಲ್1 ಜನರು ದಾವೀದನಿಗೆ, “ನೋಡು, ಫಿಲಿಷ್ಟಿಯರು ಕೆಯೀಲಾದವರ ವಿರುದ್ಧ ಹೋರಾಡುತ್ತಿದ್ದಾರೆ; ಅವರು ಕಣದಿಂದ ಧಾನ್ಯವನ್ನು ಸೂರೆ ಮಾಡುತ್ತಿದ್ದಾರೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಫಿಲಿಷ್ಟಿಯರು ಕೆಯೀಲಕ್ಕೆ ಮುತ್ತಿಗೆ ಹಾಕಿ ಅಲ್ಲಿನ ಕಣಗಳನ್ನು ಸೂರೆಮಾಡುತ್ತಿದ್ದಾರೆ ಎಂಬ ವರ್ತಮಾನವು ದಾವೀದನಿಗೆ ಮುಟ್ಟಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಫಿಲಿಷ್ಟಿಯರು ಕೆಯೀಲಾಕ್ಕೆ ಮುತ್ತಿಗೆ ಹಾಕಿ ಅಲ್ಲಿನ ಕಣಗಳನ್ನು ಸೂರೆಮಾಡುತ್ತಿದ್ದಾರೆಂದು ದಾವೀದನಿಗೆ ತಿಳಿಸಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಫಿಲಿಷ್ಟಿಯರು ಕೆಯೀಲಕ್ಕೆ ಮುತ್ತಿಗೆಹಾಕಿ ಅಲ್ಲಿನ ಕಣಗಳನ್ನು ಸೂರೆಮಾಡುತ್ತಿರುವ ವರ್ತಮಾನವು ದಾವೀದನಿಗೆ ಮುಟ್ಟಲು ಅವನು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 “ಫಿಲಿಷ್ಟಿಯರು ಕೆಯೀಲಾಕ್ಕೆ ವಿರೋಧವಾಗಿ ಯುದ್ಧಮಾಡಿ ಕಣಗಳನ್ನು ಕೊಳ್ಳೆಮಾಡುತ್ತಿದ್ದಾರೆ,” ಎಂದು ದಾವೀದನಿಗೆ ತಿಳಿಸಿದರು. ಅಧ್ಯಾಯವನ್ನು ನೋಡಿ |
ಅವರು ನಿಮ್ಮ ಪಶುಗಳನ್ನು ಅಟ್ಟಿಸಿಕೊಂಡು ಹೋಗುವರು; ನೀವು ಬೆಳೆದ ಬೆಳೆಯನ್ನು ಕೊಂಡೊಯ್ಯುವರು. ನಿಮ್ಮನ್ನು ನಾಶಪಡಿಸುವ ತನಕ ಅವರು ಪ್ರತಿಯೊಂದನ್ನೂ ತೆಗೆದುಕೊಂಡು ಹೋಗುವರು. ಅವರು ನಿಮಗೆ ದವಸಧಾನ್ಯವನ್ನಾಗಲಿ ದ್ರಾಕ್ಷಾರಸವನ್ನಾಗಲಿ ಎಣ್ಣೆಯನ್ನಾಗಲಿ ಹಸುಗಳನ್ನಾಗಲಿ ಕುರಿಗಳನ್ನಾಗಲಿ ಮೇಕೆಗಳನ್ನಾಗಲಿ ಬಿಟ್ಟುಹೋಗುವುದಿಲ್ಲ. ಅವರು ನಿಮ್ಮನ್ನು ನಾಶಪಡಿಸುವ ತನಕ ಪ್ರತಿಯೊಂದನ್ನೂ ತೆಗೆದುಕೊಂಡು ಹೋಗುವರು.
ಆ ಸಮಯದಲ್ಲಿ ಯೆಹೋವನ ದೂತನು ಗಿದ್ಯೋನ ಎಂಬ ವ್ಯಕ್ತಿಯ ಬಳಿಗೆ ಬಂದನು. ಯೆಹೋವನ ದೂತನು ಒಫ್ರ ಎಂಬ ಊರಲ್ಲಿ ಏಲಾ ವೃಕ್ಷದ ಕೆಳಗೆ ಕುಳಿತುಕೊಂಡನು. ಆ ಗಿಡವು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಯೋವಾಷನು ಗಿದ್ಯೋನನ ತಂದೆ. ಗಿದ್ಯೋನನು ದ್ರಾಕ್ಷಿಯ ಆಲೆಯ ಮರೆಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು. ಯೆಹೋವನ ದೂತನು ಗಿದ್ಯೋನನ ಹತ್ತಿರ ಕುಳಿತುಕೊಂಡನು. ಮಿದ್ಯಾನ್ಯರಿಗೆ ಗೋಧಿ ಕಾಣಬಾರದೆಂದು ಗಿದ್ಯೋನನು ಮರೆಯಾಗಿದ್ದನು.
ಆಮೇಲೆ ಕಬ್ಬಿಣ, ಮಣ್ಣು, ಕಂಚು, ಬೆಳ್ಳಿ, ಚಿನ್ನ ಎಲ್ಲವೂ ಏಕಕಾಲಕ್ಕೆ ಒಡೆದು ಚೂರುಚೂರಾದವು. ಆ ಚೂರುಗಳೆಲ್ಲ ಬೇಸಿಗೆಕಾಲದ ಕಣದಲ್ಲಿನ ಹೊಟ್ಟಿನಂತಾದವು. ಗಾಳಿಯು ಆ ಚೂರುಗಳನ್ನು ಹಾರಿಸಿಕೊಂಡು ಹೋಯಿತು. ಅಲ್ಲಿ ಏನೂ ಉಳಿಯಲಿಲ್ಲ. ಹಿಂದೆಂದೂ ಅಲ್ಲೊಂದು ಪ್ರತಿಮೆ ಇತ್ತೆಂದು ಯಾರೂ ಹೇಳುವಂತಿರಲಿಲ್ಲ. ಆಮೇಲೆ ಆ ಪ್ರತಿಮೆಗೆ ಅಪ್ಪಳಿಸಿದ ಬಂಡೆಯು ಒಂದು ದೊಡ್ಡ ಪರ್ವತವಾಗಿ ಇಡೀ ಭೂಮಂಡಲವನ್ನು ವ್ಯಾಪಿಸಿತು.