Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 23:18 - ಪರಿಶುದ್ದ ಬೈಬಲ್‌

18 ಯೋನಾತಾನನು ಮತ್ತು ದಾವೀದನು ಯೆಹೋವನ ಸನ್ನಿಧಿಯಲ್ಲಿ ಒಂದು ಒಪ್ಪಂದವನ್ನು ಮಾಡಿಕೊಂಡರು. ನಂತರ ಯೋನಾತಾನನು ಮನೆಗೆ ಹೋದನು. ದಾವೀದನು ಹೋರೆಷಿನಲ್ಲಿ ನೆಲೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವರಿಬ್ಬರೂ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆ ಮಾಡಿಕೊಂಡರು. ತರುವಾಯ ಯೋನಾತಾನನು ತನ್ನ ಮನೆಗೆ ಹೋದನು. ದಾವೀದನು ಹೋರೆಷದಲ್ಲಿಯೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅವರಿಬ್ಬರೂ ಸರ್ವೇಶ್ವರನ ಸನ್ನಿಧಿಯಲ್ಲಿ ಒಪ್ಪಂದಮಾಡಿಕೊಂಡರು. ತರುವಾಯ ಯೋನಾತಾನನು ತನ್ನ ಮನೆಗೆ ಹೋದನು. ದಾವೀದನು ಹೋರೆಷದಲ್ಲಿಯೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವರಿಬ್ಬರೂ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆಮಾಡಿಕೊಂಡರು. ತರುವಾಯ ಯೋನಾತಾನನು ತನ್ನ ಮನೆಗೆ ಹೋದನು; ದಾವೀದನು ಹೋರೆಷದಲ್ಲಿಯೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವರಿಬ್ಬರೂ ಯೆಹೋವ ದೇವರ ಮುಂದೆ ಒಡಂಬಡಿಕೆಯನ್ನು ಮಾಡಿಕೊಂಡರು. ದಾವೀದನು ಹೋರೆಷದಲ್ಲಿಯೇ ಉಳಿದನು. ಆದರೆ ಯೋನಾತಾನನು ತನ್ನ ಮನೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 23:18
8 ತಿಳಿವುಗಳ ಹೋಲಿಕೆ  

ಆದರೆ ಯೋನಾತಾನನ ಮಗನಾದ ಮೆಫೀಬೋಶೆತನನ್ನು ರಾಜನು ರಕ್ಷಿಸಿದನು. (ಯೋನಾತಾನನು ಸೌಲನ ಮಗ.) ದಾವೀದನು ಯೆಹೋವನ ಹೆಸರಿನಲ್ಲಿ ಯೋನಾತಾನನಿಗೆ ವಾಗ್ದಾನ ಮಾಡಿದ್ದನು. ಆದ್ದರಿಂದ ಮೆಫೀಬೋಶೆತನಿಗೆ ಅವರಿಂದ ತೊಂದರೆಯಾಗದಂತೆ ನೋಡಿಕೊಂಡನು.


ಯೋನಾತಾನನು ದಾವೀದನಿಗೆ, “ಸಮಾಧಾನದಿಂದ ಹೋಗು. ನಾವಿಬ್ಬರೂ ಗೆಳೆಯರಾಗಿರಲು ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡಿದ್ದೇವೆ. ನಮ್ಮಿಬ್ಬರಿಗೂ ನಮ್ಮ ಸಂತತಿಯವರಿಗೂ ಇರುವ ಸಂಬಂಧಕ್ಕೆ ಯೆಹೋವನೇ ಸಾಕ್ಷಿ ಎಂದು ಹೇಳಿದ್ದೇವೆ” ಎಂದನು.


ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದನು. ಅವನು ದಾವೀದನೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಂಡನು.


ದಾವೀದನು, “ಸೌಲನ ಕುಟುಂಬದಲ್ಲಿ ಇನ್ನೂ ಯಾರಾದರೂ ಉಳಿದಿರುವರೇ? ಯೋನಾತಾನನಿಗೋಸ್ಕರ ನಾನು ಆ ವ್ಯಕ್ತಿಗೆ ದಯೆ ತೋರಿಸಬೇಕಾಗಿದೆ” ಎಂದು ಕೇಳಿದನು.


ಯೋನಾತಾನನೇ, ನನ್ನ ಮೇಲೆ ದಯೆಯಿರಲಿ. ನಾನು ನಿನ್ನ ಸೇವಕ. ನೀನು ಯೆಹೋವನ ಮುಂದೆ ನನ್ನೊಂದಿಗೆ ಒಪ್ಪಂದ ಮಾಡಿಕೊಂಡಿರುವೆ. ನಾನು ತಪ್ಪಿತಸ್ಥನಾಗಿದ್ದರೆ, ನೀನೇ ನನ್ನನ್ನು ಕೊಂದುಬಿಡು! ಆದರೆ ನಿನ್ನ ತಂದೆಯ ಹತ್ತಿರಕ್ಕೆ ನನ್ನನ್ನು ಕರೆದೊಯ್ಯಬೇಡ” ಎಂದು ಹೇಳಿದನು.


ದಾವೀದನು ಸೌಲನೊಂದಿಗೆ ಮಾತನಾಡಿದ ಬಳಿಕ ಯೋನಾತಾನನು ದಾವೀದನೊಂದಿಗೆ ಒಂದಾದನು. ಯೋನಾತಾನನು ತನ್ನನ್ನು ಪ್ರೀತಿಸುವಷ್ಟೇ ದಾವೀದನನ್ನು ಪ್ರೀತಿಸಲಾರಂಭಿಸಿದನು.


ನಂತರ ದಾವೀದನು ಹೊರಟುಹೋದನು. ಯೋನಾತಾನನು ಪಟ್ಟಣಕ್ಕೆ ಹಿಂದಿರುಗಿದನು. ದಾವೀದನು ನೋಬ್ ಎಂಬ ಪಟ್ಟಣದ ಯಾಜಕನಾದ ಅಹೀಮೆಲೆಕನನ್ನು ನೋಡಲು ಹೋದನು. ಅಹೀಮೆಲೆಕನು ದಾವೀದನನ್ನು ಸಂಧಿಸಲು ಹೊರಗೆ ಬಂದನು. ಅಹೀಮೆಲೆಕನು ಭಯದಿಂದ ನಡುಗುತ್ತಿದ್ದನು. ಅಹೀಮೆಲೆಕನು ದಾವೀದನಿಗೆ, “ನೀನು ಒಬ್ಬಂಟಿಗನಾಗಿ ಬಂದಿರುವುದೇಕೆ? ಬೇರೆ ಯಾವ ವ್ಯಕ್ತಿಯೂ ನಿನ್ನ ಜೊತೆಯಲ್ಲಿಲ್ಲದಿರುವುದೇಕೆ?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು