1 ಸಮುಯೇಲ 23:2 - ಪರಿಶುದ್ದ ಬೈಬಲ್2 ದಾವೀದನು, “ನಾನು ಹೋಗಿ ಈ ಫಿಲಿಷ್ಟಿಯರೊಡನೆ ಹೋರಾಡಲೇ?” ಎಂದು ಯೆಹೋವನನ್ನು ಕೇಳಿದನು. ಯೆಹೋವನು ದಾವೀದನಿಗೆ, “ಹೋಗು ಫಿಲಿಷ್ಟಿಯರ ಮೇಲೆ ಆಕ್ರಮಣ ಮಾಡು. ಕೆಯೀಲಾವನ್ನು ರಕ್ಷಿಸು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅವನು, “ನಾನು ಹೋಗಿ ಆ ಫಿಲಿಷ್ಟಿಯರನ್ನು ಹೊಡೆಯಬಹುದೋ” ಎಂದು ಯೆಹೋವನನ್ನು ಕೇಳಿದನು. ಆತನು ಅವನಿಗೆ, “ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯೀಲಾ ಊರನ್ನು ರಕ್ಷಿಸು” ಎಂದು ಉತ್ತರ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅವನು, “ನಾನು ಹೋಗಿ ಆ ಫಿಲಿಷ್ಟಿಯರ ಮೇಲೆ ದಾಳಿಮಾಡಲೆ?” ಎಂದು ಸರ್ವೇಶ್ವರನನ್ನು ಕೇಳಿದನು. ಸರ್ವೇಶ್ವರ ಅವನಿಗೆ, “ಹೋಗಿ ಫಿಲಿಷ್ಟಿಯರ ಮೇಲೆ ದಾಳಿಮಾಡಿ ಕೆಯೀಲಾ ಊರನ್ನು ರಕ್ಷಿಸು,” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಾನು ಹೋಗಿ ಆ ಫಿಲಿಷ್ಟಿಯರನ್ನು ಹೊಡಿಯಬಹುದೋ ಎಂದು ಯೆಹೋವನನ್ನು ಕೇಳಿದನು. ಆತನು ಅವನಿಗೆ - ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯೀಲಾ ಊರನ್ನು ರಕ್ಷಿಸು ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆದ್ದರಿಂದ ದಾವೀದನು, “ನಾನು ಈ ಫಿಲಿಷ್ಟಿಯರನ್ನು ಹೊಡೆಯಲು ಹೋಗಲೋ?” ಎಂದು ಯೆಹೋವ ದೇವರನ್ನು ಕೇಳಿದನು. ಅದಕ್ಕೆ ಯೆಹೋವ ದೇವರು, “ನೀನು ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯೀಲಾ ನಗರವನ್ನು ರಕ್ಷಿಸು,” ಎಂದರು. ಅಧ್ಯಾಯವನ್ನು ನೋಡಿ |
ಯೆಹೋಶುವನು ತೀರ್ಮಾನವೇನಾದರೂ ಮಾಡಬೇಕಾದರೆ ಅವನು ಯಾಜಕನಾದ ಎಲ್ಲಾಜಾರನ ಬಳಿಗೆ ಹೋಗಲಿ, ಎಲ್ಲಾಜಾರನು ಊರೀಮಿನಿಂದ ಯೆಹೋವನ ಉತ್ತರವನ್ನು ಪಡೆಯುವನು. ಆಗ ಯೆಹೋಶುವನೂ ಇಸ್ರೇಲರೆಲ್ಲರೂ ದೇವರು ಹೇಳುವ ಕಾರ್ಯಗಳನ್ನು ಮಾಡುವರು. ಆತನು, ‘ಯುದ್ಧಕ್ಕೆ ಹೋಗಿರಿ’ ಎಂದು ಹೇಳಿದರೆ ಅವರು ಯುದ್ಧಕ್ಕೆ ಹೋಗುವರು. ಆತನು, ‘ಮನೆಗೆ ಹೋಗಿರಿ’ ಎಂದು ಹೇಳಿದರೆ ಅವರು ಮನೆಗೆ ಹೋಗುವರು” ಎಂದು ಹೇಳಿದನು.