ನೀವು ನನ್ನ ವಿರುದ್ಧವಾಗಿ ಸಂಚುನಡೆಸುತ್ತಿರುವಿರಿ! ನೀವು ರಹಸ್ಯಯೋಜನೆಗಳನ್ನು ಮಾಡಿದ್ದೀರಿ. ನನ್ನ ಮಗ ಯೋನಾತಾನನ ಬಗ್ಗೆ ನಿಮ್ಮಲ್ಲಿ ಒಬ್ಬರೂ ನನಗೆ ತಿಳಿಸಲಿಲ್ಲ! ಅವನು ಇಷಯನ ಮಗನ ಜೊತೆ ಒಪ್ಪಂದ ಮಾಡಿಕೊಂಡಿದ್ದಾನೆಂದು ನಿಮ್ಮಲ್ಲಿ ಒಬ್ಬರೂ ನನಗೆ ತಿಳಿಸಲಿಲ್ಲ! ನಿಮ್ಮಲ್ಲಿ ಒಬ್ಬರೂ ನನ್ನ ಬಗ್ಗೆ ಚಿಂತಿಸುವುದಿಲ್ಲ! ನನ್ನ ಮಗ ಯೋನಾತಾನನು ದಾವೀದನನ್ನು ಪ್ರೋತ್ಸಾಹಿಸಿದ್ದಾನೆಂದು ನಿಮ್ಮಲ್ಲಿ ಒಬ್ಬರೂ ನನಗೆ ತಿಳಿಸಲಿಲ್ಲ. ಅಡಗಿಕೊಂಡು ನನ್ನ ಮೇಲೆ ಆಕ್ರಮಣ ಮಾಡುವಂತೆ ನನ್ನ ಸೇವಕನಾದ ದಾವೀದನಿಗೆ ಯೋನಾತಾನನು ಹೇಳಿಕೊಟ್ಟಿದ್ದಾನೆ! ಈಗ ದಾವೀದನು ಮಾಡುತ್ತಿರುವುದು ಅದನ್ನೇ!” ಎಂದು ಹೇಳಿದನು.