1 ಸಮುಯೇಲ 23:25 - ಪರಿಶುದ್ದ ಬೈಬಲ್25 ಸೌಲನು ಮತ್ತು ಅವನ ಜನರು ದಾವೀದನನ್ನು ಕಂಡುಹಿಡಿಯಲು ಹೋದರು. ಆದರೆ ದಾವೀದನನ್ನು ಜನರು ಎಚ್ಚರಿಸಿದರು. ಸೌಲನು ಅವನನ್ನು ಹುಡುಕುತ್ತಿರುವನೆಂದು ಜನರು ಅವನಿಗೆ ಹೇಳಿದರು. ದಾವೀದನು ಮಾವೋನಿನ ಅರಣ್ಯದಲ್ಲಿರುವ ಕಡಿದಾದ ಬೆಟ್ಟಕ್ಕೆ ಹೋದನು. ದಾವೀದನು ಮಾವೋನಿನ ಅರಣ್ಯಕ್ಕೆ ಹೋದನೆಂಬುದನ್ನು ಕೇಳಿದ ಸೌಲನು ದಾವೀದನನ್ನು ಕಂಡುಹಿಡಿಯಲು ಆ ಸ್ಥಳಕ್ಕೆ ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಸೌಲನು ತನ್ನ ಜನರೊಡನೆ ದಾವೀದನನ್ನು ಹಿಡಿಯುವುದಕ್ಕೆ ಬಂದನು. ಈ ವರ್ತಮಾನವು ದಾವೀದನಿಗೆ ತಲುಪಲು ಅವನು ಮಾವೋನಿನಲ್ಲಿರುವ ಒಂದು ಕಡಿದಾದ ಬೆಟ್ಟಕ್ಕೆ ಹೋಗಿ ಅಡಗಿಕೊಂಡನು. ಸೌಲನು ಇದನ್ನು ಕೇಳಿ ಮಾವೋನ ಅರಣ್ಯಕ್ಕೆ ಬಂದು ಆ ಬೆಟ್ಟದ ಒಂದು ಕಡೆಯಲ್ಲಿ ಹೋಗುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಸೌಲನು ತನ್ನ ಜನರೊಡನೆ ದಾವೀದನನ್ನು ಹಿಡಿಯುವುದಕ್ಕೆ ಬಂದನು. ಈ ಸಮಾಚಾರ ದಾವೀದನಿಗೆ ಸಿಕ್ಕಿತು. ಅವನು ಮಾವೋನಿನಲ್ಲಿ ಇರುವ ಒಂದು ಕಡಿದಾದ ಬೆಟ್ಟಕ್ಕೆ ಹೋಗಿ ಅಡಗಿಕೊಂಡನು. ಸೌಲನು ಇದನ್ನು ಕೇಳಿ ಮಾವೋನ್ ಮರುಭೂಮಿಗೆ ಬಂದು ಆ ಬೆಟ್ಟದ ಒಂದು ಕಡೆಯಲ್ಲಿ ಹೋಗುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಸೌಲನು ತನ್ನ ಜನರೊಡನೆ ದಾವೀದನನ್ನು ಹಿಡಿಯುವದಕ್ಕೆ ಬಂದನು. ಈ ವರ್ತಮಾನವು ದಾವೀದನಿಗೆ ಮುಟ್ಟಲು ಅವನು ಮಾವೋನಿನಲ್ಲಿರುವ ಒಂದು ಕಡಿದಾದ ಬೆಟ್ಟಕ್ಕೆ ಹೋಗಿ ಅಡಗಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಸೌಲನೂ, ಅವನ ಜನರೂ ಅವನನ್ನು ಹುಡುಕಲು ಬಂದರು. ಇದು ದಾವೀದನಿಗೆ ತಿಳಿದಾಗ, ಅವನು ಬಂಡೆಗಳಲ್ಲಿ ಇಳಿದು ಮಾವೋನಿನ ಮರುಭೂಮಿಯಲ್ಲಿ ವಾಸಿಸಿದನು. ಅದನ್ನು ಸೌಲನು ಕೇಳಿ ಮಾವೋನಿನ ಮರುಭೂಮಿಯಲ್ಲಿ ದಾವೀದನನ್ನು ಹಿಂದಟ್ಟಿದನು. ಅಧ್ಯಾಯವನ್ನು ನೋಡಿ |