Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 23:26 - ಪರಿಶುದ್ದ ಬೈಬಲ್‌

26 ಸೌಲನು ಬೆಟ್ಟದ ಒಂದು ದಿಕ್ಕಿನಲ್ಲಿದ್ದನು. ದಾವೀದ ಮತ್ತು ಅವನ ಜನರು ಅದೇ ಬೆಟ್ಟದ ಮತ್ತೊಂದು ದಿಕ್ಕಿನಲ್ಲಿದ್ದರು. ದಾವೀದನು ಸೌಲನಿಂದ ದೂರ ಹೋಗಲು ತವಕಿಸುತ್ತಿದ್ದನು. ದಾವೀದನನ್ನು ಅವನ ಜನರೊಡನೆ ಬಂಧಿಸಲು ಸೌಲನು ತನ್ನ ಸೈನಿಕರೊಂದಿಗೆ ಬೆಟ್ಟದ ಸುತ್ತಲೂ ಹೋಗುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅದರ ಇನ್ನೊಂದು ಕಡೆಯಲ್ಲಿ ದಾವೀದನೂ ಅವನ ಜನರೂ ಇದ್ದರು. ದಾವೀದನೂ ಅವನ ಜನರೂ ತಪ್ಪಿಸಿಕೊಳ್ಳುವುದಕ್ಕೆ ತ್ವರೆಪಡುವಷ್ಟರಲ್ಲಿ ಸೌಲನೂ, ಅವನ ಜನರೂ ಬಂದು ಅವರನ್ನು ಮುತ್ತಿಗೆ ಹಾಕುವುದಕ್ಕಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅದರ ಇನ್ನೊಂದು ಕಡೆಯಲ್ಲಿ ದಾವೀದನೂ ಅವನ ಜನರೂ ಇದ್ದರು. ದಾವೀದನೂ ಅವನ ಜನರೂ ತಪ್ಪಿಸಿಕೊಳ್ಳುವುದಕ್ಕೆ ತ್ವರೆಪಡುತ್ತಿದ್ದರು. ಅಷ್ಟರಲ್ಲಿ ಸೌಲನೂ ಅವನ ಜನರೂ ಬಂದು ಅವರನ್ನು ಸುತ್ತಿ ಹಿಡಿಯುವುದಕ್ಕಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಸೌಲನು ಇದನ್ನು ಕೇಳಿ ಮಾವೋನ್ ಅರಣ್ಯಕ್ಕೆ ಬಂದು ಆ ಬೆಟ್ಟದ ಒಂದು ಕಡೆಯಲ್ಲಿ ಹೋಗುತ್ತಿದ್ದನು; ಅದರ ಇನ್ನೊಂದು ಕಡೆಯಲ್ಲಿ ದಾವೀದನೂ ಅವನ ಜನರೂ ಇದ್ದರು. ದಾವೀದನೂ ಅವನ ಜನರೂ ತಪ್ಪಿಸಿಕೊಳ್ಳುವದಕ್ಕೆ ತ್ವರೆಪಡುವಷ್ಟರಲ್ಲಿ ಸೌಲನೂ ಅವನ ಜನರೂ ಬಂದು ಅವರನ್ನು ಸುತ್ತಿ ಹಿಡಿಯುವದಕ್ಕಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಸೌಲನು ಬೆಟ್ಟದ ಇನ್ನೊಂದು ಕಡೆಯಲ್ಲಿ ಹೋದನು. ದಾವೀದನೂ, ಅವನ ಜನರೂ ಬೆಟ್ಟದ ಆ ಕಡೆಯಲ್ಲಿ ಹೋದರು. ಸೌಲನಿಗೆ ಭಯಪಟ್ಟು ತಪ್ಪಿಸಿಕೊಂಡು ಹೋಗಲು ದಾವೀದನು ತ್ವರೆಪಡುತ್ತಿದ್ದರು. ಆಗ ಸೌಲನೂ, ಅವನ ಜನರೂ ಅವರನ್ನು ಹಿಡಿಯುವಂತೆ ಸುತ್ತಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 23:26
17 ತಿಳಿವುಗಳ ಹೋಲಿಕೆ  

ಯೆಹೋವನೇ, ನನ್ನನ್ನು ನಾಶಮಾಡಬೇಕೆಂದಿರುವ ದುಷ್ಟರಿಂದ ನನ್ನನ್ನು ತಪ್ಪಿಸಿ ಕಾಪಾಡು. ನನಗೆ ಕೇಡುಮಾಡಬೇಕೆಂದು ಸುತ್ತುಗಟ್ಟಿರುವ ಜನರಿಂದ ನನ್ನನ್ನು ಸಂರಕ್ಷಿಸು.


ಸೈತಾನನ ಸೈನ್ಯವು ಭೂಮಿಯಲ್ಲೆಲ್ಲಾ ಶಿಸ್ತಿನಿಂದ ನಡೆದಾಡಿ ದೇವಜನರ ಶಿಬಿರದ ಸುತ್ತಲೂ ದೇವರ ಪ್ರಿಯ ನಗರದ ಸುತ್ತಲೂ ಒಟ್ಟುಗೂಡಿದರು. ಆದರೆ ಪರಲೋಕದಿಂದ ಇಳಿದು ಬಂದ ಬೆಂಕಿಯು ಸೈತಾನನ ಸೈನ್ಯವನ್ನು ನಾಶಗೊಳಿಸಿತು.


ಸಹೋದರ ಸಹೋದರಿಯರೇ, ನಾವು ಏಷ್ಯಾ ಪ್ರಾಂತ್ಯದಲ್ಲಿ ಅನುಭವಿಸಿದ ಸಂಕಟದ ಬಗ್ಗೆ ನೀವು ತಿಳಿದುಕೊಳ್ಳಬೇಕೆಂದು ನಾವು ಅಪೇಕ್ಷಿಸುತ್ತೇವೆ. ಅಲ್ಲಿ ನಮಗೆ ಅಪಾರವಾದ ಭಾರಗಳಿದ್ದವು. ಆ ಭಾರಗಳು ನಮ್ಮ ಸ್ವಂತ ಶಕ್ತಿಗಿಂತಲೂ ಅಧಿಕವಾಗಿದ್ದವು. ಜೀವಸಹಿತ ಉಳಿಯುತ್ತೇವೆ ಎಂಬ ನಿರೀಕ್ಷೆಯನ್ನು ಸಹ ನಾವು ಬಿಟ್ಟುಕೊಟ್ಟೆವು.


ನಾನು ಭಯಗೊಂಡು, “ದೇವರು ನನ್ನನ್ನು ತನ್ನ ಸಾನಿಧ್ಯದಿಂದ ಹೊರಗಟ್ಟಿದ್ದಾನೆ” ಎಂದುಕೊಂಡೆನು. ಆದರೆ ನಾನು ನಿನ್ನನ್ನು ಕೂಗಿಕೊಂಡಾಗ ನೀನು ಕಿವಿಗೊಟ್ಟೆ.


ದುಷ್ಟರು ನಾಯಿಗಳಂತೆ ನನ್ನನ್ನು ಸುತ್ತಿಕೊಂಡಿದ್ದಾರೆ. ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ.


ಜನರು ನನ್ನನ್ನು ಸುತ್ತುಗಟ್ಟಿದ್ದಾರೆ; ಅವರು ಬಲಿಷ್ಠವಾದ ಹೋರಿಗಳಂತಿದ್ದಾರೆ.


ಅವರು ನನ್ನನ್ನು ಬೆನ್ನಟ್ಟಿ ಬಂದು ಸುತ್ತುಗಟ್ಟಿದ್ದಾರೆ; ಆಕ್ರಮಣಮಾಡಲು ಸಿದ್ಧರಾಗಿದ್ದಾರೆ.


ನಮ್ಮ ದೇವರೇ, ನೀನೇ ಅವರನ್ನು ಶಿಕ್ಷಿಸು. ನಮಗೆ ವಿರುದ್ಧವಾಗಿ ಬರುತ್ತಿರುವ ಅವರ ದೊಡ್ಡಸೈನ್ಯವನ್ನು ಎದುರಿಸಲು ನಮ್ಮಿಂದಾಗದು. ಏನು ಮಾಡಬೇಕೋ ನಮಗೆ ತಿಳಿಯುತ್ತಿಲ್ಲ. ನಾವು ನಿನ್ನ ಸಹಾಯವನ್ನೇ ಎದುರುನೋಡುತ್ತಿದ್ದೇವೆ” ಎಂದು ಪ್ರಾರ್ಥಿಸಿದನು.


ಆಗ ದಾವೀದನು ಜೆರುಸಲೇಮಿನಲ್ಲಿ ತನ್ನೊಂದಿಗಿದ್ದ ತನ್ನ ಸೇವಕರಿಗೆಲ್ಲ, “ನಾವು ತಪ್ಪಿಸಿಕೊಳ್ಳಲೇಬೇಕು! ನಾವು ತಪ್ಪಿಸಿಕೊಳ್ಳದಿದ್ದರೆ ಅಬ್ಷಾಲೋಮನು ನಮ್ಮನ್ನು ಹೋಗಗೊಡಿಸುವುದಿಲ್ಲ. ಅಬ್ಷಾಲೋಮನು ನಮ್ಮನ್ನು ಹಿಡಿಯುವುದಕ್ಕಿಂತ ಮೊದಲೇ ಇಲ್ಲಿಂದ ಹೋಗಿಬಿಡೋಣ. ಅವನು ನಮ್ಮೆಲ್ಲರನ್ನೂ ನಾಶಮಾಡುತ್ತಾನೆ; ಅವನು ಜೆರುಸಲೇಮಿನ ಜನರನ್ನು ಕೊಂದುಹಾಕುತ್ತಾನೆ” ಎಂದು ಹೇಳಿದನು.


ನಂತರ ಯೋನಾತಾನನು, “ಬೇಗ ಹೋಗು! ಅವುಗಳನ್ನು ತೆಗೆದುಕೊಂಡು ಬಾ! ಅಲ್ಲಿಯೇ ನಿಲ್ಲಬೇಡ!” ಎಂದು ಕೂಗಿಹೇಳಿದನು. ಆ ಬಾಲಕನು ಬಾಣಗಳನ್ನೆಲ್ಲ ಆರಿಸಿಕೊಂಡು ತನ್ನ ಒಡೆಯನ ಬಳಿಗೆ ತಂದನು.


ನಂತರ ಮೀಕಲಳು ಕಿಟಿಕಿಯಿಂದ ದಾವೀದನನ್ನು ಹೊರಗೆ ಇಳಿಸಿದಳು. ದಾವೀದನು ತಪ್ಪಿಸಿಕೊಂಡು ಓಡಿಹೋದನು.


ಯಾರೋ ಒಬ್ಬರು, “ಸಂಸೋನನು ಇಲ್ಲಿಗೆ ಬಂದಿದ್ದಾನೆ” ಎಂದು ಗಾಜಾದ ಜನರಿಗೆ ಹೇಳಿದರು. ಅವರು ಅವನನ್ನು ಕೊಲ್ಲಬೇಕೆಂದಿದ್ದರು. ಅದಕ್ಕಾಗಿ ಅವರು ಆ ಸ್ಥಳವನ್ನು ಸುತ್ತುಗಟ್ಟಿದರು. ನಗರದ ಬಾಗಿಲುಗಳನ್ನು ಭದ್ರಪಡಿಸಿ ಅಡಗಿಕೊಂಡು ಸಂಸೋನನ ದಾರಿಕಾಯ್ದರು. ಇಡೀರಾತ್ರಿ ಅವರು ನಗರದ ಬಾಗಿಲಲ್ಲಿ ಸುಮ್ಮನಿದ್ದರು. “ಬೆಳಗಾದ ಮೇಲೆ ನಾವು ಸಂಸೋನನನ್ನು ಕೊಲ್ಲೋಣ” ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.


ಸೌಲನು ಮತ್ತು ಅವನ ಜನರು ದಾವೀದನನ್ನು ಕಂಡುಹಿಡಿಯಲು ಹೋದರು. ಆದರೆ ದಾವೀದನನ್ನು ಜನರು ಎಚ್ಚರಿಸಿದರು. ಸೌಲನು ಅವನನ್ನು ಹುಡುಕುತ್ತಿರುವನೆಂದು ಜನರು ಅವನಿಗೆ ಹೇಳಿದರು. ದಾವೀದನು ಮಾವೋನಿನ ಅರಣ್ಯದಲ್ಲಿರುವ ಕಡಿದಾದ ಬೆಟ್ಟಕ್ಕೆ ಹೋದನು. ದಾವೀದನು ಮಾವೋನಿನ ಅರಣ್ಯಕ್ಕೆ ಹೋದನೆಂಬುದನ್ನು ಕೇಳಿದ ಸೌಲನು ದಾವೀದನನ್ನು ಕಂಡುಹಿಡಿಯಲು ಆ ಸ್ಥಳಕ್ಕೆ ಹೋದನು.


ಆದರೆ ಸೌಲನ ಬಳಿಗೆ ಒಬ್ಬ ಸಂದೇಶಕನು ಬಂದು, “ಫಿಲಿಷ್ಟಿಯರು ನಮ್ಮನ್ನು ಆಕ್ರಮಣ ಮಾಡುತ್ತಿದ್ದಾರೆ, ಬೇಗ ಬಾ!” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು