Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 23:7 - ಪರಿಶುದ್ದ ಬೈಬಲ್‌

7 ದಾವೀದನು ಈಗ ಕೆಯೀಲಾದಲ್ಲಿದ್ದಾನೆಂದು ಜನರು ಸೌಲನಿಗೆ ತಿಳಿಸಿದರು. ಸೌಲನು, “ದೇವರು ದಾವೀದನನ್ನು ನನಗೆ ಕೊಟ್ಟಿದ್ದಾನೆ! ದಾವೀದನು ತಾನಾಗಿಯೇ ಸಿಕ್ಕಿಹಾಕಿಕೊಂಡಿದ್ದಾನೆ. ಅವನು, ಬಾಗಿಲುಗಳಿರುವ ಹಾಗೂ ಕಬ್ಬಿಣದ ಸಲಾಕೆಗಳಿಂದ ಬೀಗ ಹಾಕಬಲ್ಲ ಬಾಗಿಲುಗಳಿರುವ ಪಟ್ಟಣದೊಳಕ್ಕೆ ಹೋಗಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದಾವೀದನು ಕೆಯೀಲದಲ್ಲಿದ್ದಾನೆಂಬ ವರ್ತಮಾನವು ಸೌಲನಿಗೆ ಮುಟ್ಟಿತು. ಆಗ ಅವನು, ದೇವರು ದಾವೀದನನ್ನು ನನ್ನ ಕೈಗೆ ಒಪ್ಪಿಸಿದನು. ಅವನು ಅಗುಳಿ ಬಾಗಿಲುಗಳಿಂದ ಭದ್ರವಾಗಿರುವ ಪಟ್ಟಣವನ್ನು ಪ್ರವೇಶಿಸಿದ್ದಾನಲ್ಲಾ ಅವನು ಅಲ್ಲಿಂದ ತಪ್ಪಿಸಿಕೊಳ್ಳಲಾರನು ಅಂದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ದಾವೀದನು ಕೆಯೀಲಾದಲ್ಲಿದ್ದಾನೆಂಬ ಸಮಾಚಾರ ಸೌಲನಿಗೆ ಮುಟ್ಟಿತು. ಆಗ ಅವನು, “ದೇವರು ದಾವೀದನನ್ನು ನನ್ನ ಕೈಗೆ ಒಪ್ಪಿಸಿದ್ದಾರೆ. ಅವನು ಅಗುಳಿಕದಗಳಿಂದ ಭದ್ರವಾಗಿರುವ ಕೋಟೆಯನ್ನು ಪ್ರವೇಶಿಸಿದ್ದಾನಲ್ಲವೆ? ಅವನು ಅಲ್ಲಿಂದ ತಪ್ಪಿಸಿಕೊಳ್ಳಲಾರನು,” ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ದೇವರು ದಾವೀದನನ್ನು ನನ್ನ ಕೈಗೆ ಒಪ್ಪಿಸಿದನು. ಅವನು ಅಗುಳಿಕದಗಳಿಂದ ಭದ್ರವಾಗಿರುವ ಪಟ್ಟಣವನ್ನು ಪ್ರವೇಶಿಸಿದ್ದಾನಲ್ಲಾ; ಅವನು ಅಲ್ಲಿಂದ ತಪ್ಪಿಸಿಕೊಳ್ಳಲಾರನು ಅಂದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದಾವೀದನು ಕೆಯೀಲಾ ನಗರಕ್ಕೆ ಬಂದಿದ್ದಾನೆ ಎಂಬ ವಿಷಯ ಸೌಲನಿಗೆ ಮುಟ್ಟಿತು. ಆಗ ಅವನು, “ದೇವರು ಅವನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟರು. ಏಕೆಂದರೆ ಅವನು ಬಾಗಿಲುಗಳೂ, ಅಗುಳಿಗಳೂ ಇರುವ ಪಟ್ಟಣದ ಒಳಗೆ ಪ್ರವೇಶಿಸಿದ್ದರಿಂದ ಈಗ ತಪ್ಪಿಸಿಕೊಳ್ಳಲಾರನು,” ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 23:7
12 ತಿಳಿವುಗಳ ಹೋಲಿಕೆ  

ದಾವೀದನು ಜೀಫ್ ಅರಣ್ಯದಲ್ಲಿರುವ ಬೆಟ್ಟಪ್ರದೇಶವಾದ ಆಶ್ರಯಗಿರಿಗಳಲ್ಲಿ ಅಡಗಿಕೊಂಡಿದ್ದನು. ಸೌಲನು ಪ್ರತಿದಿನವೂ ದಾವೀದನಿಗಾಗಿ ಹುಡುಕುತ್ತಿದ್ದನು, ಆದರೆ ದಾವೀದನನ್ನು ಹಿಡಿಯಲು ಯೆಹೋವನು ಸೌಲನಿಗೆ ಅವಕಾಶ ಕೊಡಲಿಲ್ಲ.


“‘ನಾವು ಅವರನ್ನು ಬೆನ್ನಟ್ಟಿ ಹಿಡಿಯುವೆವು; ನಾವು ಅವರ ಸಂಪತ್ತನ್ನೆಲ್ಲಾ ತೆಗೆದುಕೊಳ್ಳುವೆವು. ನಾವು ಖಡ್ಗದಿಂದ ಅವರನ್ನು ಸಂಹರಿಸುವೆವು. ನಮ್ಮ ಭುಜಬಲದಿಂದ ಅವರ ಸ್ವತ್ತುಗಳನ್ನೆಲ್ಲಾ ವಶಪಡಿಸಿಕೊಳ್ಳುವೆವು’ ಎಂದುಕೊಂಡರು ವೈರಿಗಳು.


ಇಸ್ರೇಲರು ಅರಣ್ಯದಲ್ಲಿ ದಾರಿ ತಪ್ಪಿದರು; ಅವರಿಗೆ ಹೋಗಲು ಯಾವ ಸ್ಥಳವೂ ಇರುವುದಿಲ್ಲ ಎಂದು ಫರೋಹನು ಭಾವಿಸುವನು.


(ಎಬ್ಯಾತಾರನು ದಾವೀದನ ಹತ್ತಿರಕ್ಕೆ ಓಡಿಹೋದಾಗ ತನ್ನೊಂದಿಗೆ ಒಂದು ಏಫೋದನ್ನು ತೆಗೆದುಕೊಂಡಿದ್ದನು.)


ಸೌಲನು ಯುದ್ಧಕ್ಕಾಗಿ ತನ್ನ ಸೈನ್ಯವನ್ನೆಲ್ಲ ಒಟ್ಟಿಗೆ ಕರೆದನು. ದಾವೀದನನ್ನೂ ಅವನ ಜನರನ್ನೂ ಆಕ್ರಮಿಸಲು ಕೆಯೀಲಾಕ್ಕೆ ಹೋಗಲು ಅವರೆಲ್ಲ ಸಿದ್ಧಗೊಂಡರು.


ಯೆಹೋವನಿಗೆ ಸ್ತೋತ್ರವಾಗಲಿ! ವೈರಿಗಳು ಈ ಪಟ್ಟಣಕ್ಕೆ ಮುತ್ತಿಗೆ ಹಾಕಿದಾಗ ಆತನು ತನ್ನ ಶಾಶ್ವತ ಪ್ರೀತಿಯನ್ನು ಆಶ್ಚರ್ಯಕರವಾಗಿ ತೋರಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು