Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 23:8 - ಪರಿಶುದ್ದ ಬೈಬಲ್‌

8 ಸೌಲನು ಯುದ್ಧಕ್ಕಾಗಿ ತನ್ನ ಸೈನ್ಯವನ್ನೆಲ್ಲ ಒಟ್ಟಿಗೆ ಕರೆದನು. ದಾವೀದನನ್ನೂ ಅವನ ಜನರನ್ನೂ ಆಕ್ರಮಿಸಲು ಕೆಯೀಲಾಕ್ಕೆ ಹೋಗಲು ಅವರೆಲ್ಲ ಸಿದ್ಧಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಕೆಯೀಲದಲ್ಲಿದ್ದ ದಾವೀದನನ್ನೂ, ಅವನ ಜನರನ್ನೂ ಹಿಡಿಯಲು ಹೋಗುವುದಕ್ಕೋಸ್ಕರ ಸೈನ್ಯವನ್ನು ಕೂಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಕೆಯೀಲಾದಲ್ಲಿದ್ದ ದಾವೀದನನ್ನೂ ಅವನ ಜನರನ್ನೂ ಹಿಡಿಯುವುದಕ್ಕಾಗಿ ಸೈನ್ಯವನ್ನು ಕೂಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಕೆಯೀಲದಲ್ಲಿದ್ದ ದಾವೀದನನ್ನೂ ಅವನ ಜನರನ್ನೂ ಹಿಡಿಯ ಹೋಗುವದಕ್ಕೋಸ್ಕರ ಸೈನ್ಯವನ್ನು ಕೂಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಸೌಲನು ದಾವೀದನನ್ನೂ, ಅವನ ಜನರನ್ನೂ ಮುತ್ತಿಕೊಳ್ಳಲು ತನ್ನ ಸೈನಿಕರನ್ನು ಯುದ್ಧಕ್ಕೆ ಹೋಗಲು ಕೆಯೀಲಾ ನಗರಕ್ಕೆ ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 23:8
4 ತಿಳಿವುಗಳ ಹೋಲಿಕೆ  

ದಾವೀದನು ಈಗ ಕೆಯೀಲಾದಲ್ಲಿದ್ದಾನೆಂದು ಜನರು ಸೌಲನಿಗೆ ತಿಳಿಸಿದರು. ಸೌಲನು, “ದೇವರು ದಾವೀದನನ್ನು ನನಗೆ ಕೊಟ್ಟಿದ್ದಾನೆ! ದಾವೀದನು ತಾನಾಗಿಯೇ ಸಿಕ್ಕಿಹಾಕಿಕೊಂಡಿದ್ದಾನೆ. ಅವನು, ಬಾಗಿಲುಗಳಿರುವ ಹಾಗೂ ಕಬ್ಬಿಣದ ಸಲಾಕೆಗಳಿಂದ ಬೀಗ ಹಾಕಬಲ್ಲ ಬಾಗಿಲುಗಳಿರುವ ಪಟ್ಟಣದೊಳಕ್ಕೆ ಹೋಗಿದ್ದಾನೆ” ಎಂದು ಹೇಳಿದನು.


ಸೌಲನು ತನ್ನ ವಿರುದ್ಧವಾಗಿ ಉಪಾಯಗಳನ್ನು ಮಾಡುತ್ತಿದ್ದಾನೆಂಬುದು ದಾವೀದನಿಗೆ ತಿಳಿಯಿತು. ಆಗ ದಾವೀದನು ಯಾಜಕನಾದ ಎಬ್ಯಾತಾರನಿಗೆ, “ಎಫೋದನ್ನು ತೆಗೆದುಕೊಂಡು ಬಾ” ಎಂದನು.


ಆಗ ರಾಜನಾದ ಸೊಲೊಮೋನನು ಯಾಜಕನಾದ ಎಬ್ಯಾತಾರನಿಗೆ, “ನಾನು ನಿನ್ನನ್ನು ಕೊಲ್ಲಲೇಬೇಕು. ಆದರೆ ಅಣತೋತಿನಲ್ಲಿರುವ ನಿನ್ನ ಮನೆಗೆ ಹಿಂತಿರುಗಿ ಹೋಗಲು ನಿನಗೆ ಅವಕಾಶ ಕೊಡುತ್ತೇನೆ. ನಾನು ನಿನ್ನನ್ನು ಕೊಲ್ಲುವುದಿಲ್ಲ ಏಕೆಂದರೆ ನನ್ನ ತಂದೆಯಾದ ದಾವೀದನೊಂದಿಗೆ ನಡೆಯುವಾಗ ಯೆಹೋವನ ಪವಿತ್ರಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ನೀನು ಸಹಾಯ ಮಾಡಿದೆ. ನನ್ನ ತಂದೆಯ ಕಷ್ಟದ ದಿನಗಳಲ್ಲೆಲ್ಲಾ ನೀನೂ ಅವನ ಕಷ್ಟಗಳಲ್ಲಿ ಪಾಲುಗಾರನಾಗಿದ್ದದ್ದು ನನಗೆ ತಿಳಿದಿದೆ” ಎಂದು ಹೇಳಿದನು.


ದಾವೀದನು, “ಇಸ್ರೇಲರ ದೇವರಾದ ಯೆಹೋವನೇ, ಸೌಲನು ನನಗಾಗಿ ಕೆಯೀಲಾಕ್ಕೆ ಬರುತ್ತಾನೆಂಬುದೂ ಈ ಪಟ್ಟಣವನ್ನು ನಾಶಗೊಳಿಸುತ್ತಾನೆಂಬುದೂ ತಿಳಿಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು