1 ಸಮುಯೇಲ 24:10 - ಪರಿಶುದ್ದ ಬೈಬಲ್10 ನಾನು ನಿನಗೆ ಕೇಡುಮಾಡಲು ಇಚ್ಛಿಸುವುದಿಲ್ಲ! ನೀನು ಅದನ್ನು ನಿನ್ನ ಸ್ವಂತ ಕಣ್ಣುಗಳಿಂದ ನೋಡಬಹುದು! ಈ ದಿನ ಗವಿಯಲ್ಲಿ ಯೆಹೋವನು ನಿನ್ನನ್ನು ನನಗೆ ಒಪ್ಪಿಸಿದ್ದನು. ಆದರೆ ನಾನು ನಿನ್ನನ್ನು ಕೊಲ್ಲಲು ನಿರಾಕರಿಸಿದೆ. ನಾನು ನಿನಗೆ ದಯಾಳುವಾಗಿದ್ದೆ. ‘ನಾನು ನನ್ನ ಒಡೆಯನಿಗೆ ಕೇಡು ಮಾಡುವುದಿಲ್ಲ. ಸೌಲನು ಯೆಹೋವನಿಂದ ಅಭಿಷೇಕಿಸಲ್ಪಟ್ಟ ರಾಜ!’ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಈ ಹೊತ್ತು ಯೆಹೋವನು ಗವಿಯಲ್ಲಿ ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದಾನೆಂಬುದು ಈಗ ನಿನಗೆ ಗೊತ್ತಾಯಿತಲ್ಲವೋ? ನಿನ್ನನ್ನು ಕೊಂದುಬಿಡಬೇಕೆಂದು ಕೆಲವರು ನನಗೆ ಹೇಳಿದರು. ಆದರೆ ನಾನು ಅವರಿಗೆ, ‘ಯೆಹೋವನ ಅಭಿಷಿಕ್ತನಾದ ನನ್ನ ಒಡೆಯನ ಮೇಲೆ ಕೈಹಾಕುವುದಿಲ್ಲ’ ಎಂದು ಹೇಳಿ ನಿನ್ನನ್ನು ಉಳಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಇಂದು ಈ ಗವಿಯಲ್ಲಿ ಸರ್ವೇಶ್ವರ ನಿಮ್ಮನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದರೆಂಬುದು ಈಗ ನಿಮಗೆ ಗೊತ್ತಾಗಿರಬೇಕು. ನಿಮ್ಮನ್ನು ಕೊಂದುಬಿಡಬೇಕೆಂದು ಕೆಲವರು ನನಗೆ ಹೇಳಿದರು. ಆದರೆ ನಾನು ಅವರಿಗೆ, ‘ಸರ್ವೇಶ್ವರನಿಂದ ಅಭಿಷಿಕ್ತರಾದ ನನ್ನ ಒಡೆಯರ ಮೇಲೆ ಕೈಯೆತ್ತುವುದಿಲ್ಲ,’ ಎಂದು ಹೇಳಿ ನಿಮ್ಮನ್ನು ಉಳಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಈಹೊತ್ತು ಯೆಹೋವನು ಗವಿಯಲ್ಲಿ ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದನೆಂಬದು ಈಗ ನಿನಗೆ ಗೊತ್ತಾಯಿತಲ್ಲವೋ? ನಿನ್ನನ್ನು ಕೊಂದುಬಿಡಬೇಕೆಂದು ಕೆಲವರು ನನಗೆ ಹೇಳಿದರು; ಆದರೆ ನಾನು ಅವರಿಗೆ - ಯೆಹೋವನ ಅಭಿಷಿಕ್ತನಾದ ನನ್ನ ಒಡೆಯನ ಮೇಲೆ ಕೈಹಾಕುವದಿಲ್ಲ ಎಂದು ಹೇಳಿ ನಿನ್ನನ್ನು ಉಳಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಯೆಹೋವ ದೇವರು ಈ ಗವಿಯಲ್ಲಿ ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟರೆಂಬುದನ್ನು ಈ ದಿನ ನಿನ್ನ ಕಣ್ಣುಗಳು ಕಂಡವು. ಕೆಲವರು ನಿನ್ನನ್ನು ಕೊಂದುಹಾಕಲು ನನಗೆ ಒತ್ತಾಯಮಾಡಿದರು. ಆದರೆ ನಾನು ಅವರಿಗೆ, ‘ಅರಸನು ಯೆಹೋವ ದೇವರ ಅಭಿಷಿಕ್ತನು. ಆದುದರಿಂದ ನಾನು ನನ್ನ ಒಡೆಯನಿಗೆ ವಿರೋಧವಾಗಿ ಕೈಯೆತ್ತುವುದಿಲ್ಲ’ ಎಂದು ಹೇಳಿ ನಿನ್ನನ್ನು ಉಳಿಸಿದೆ. ಅಧ್ಯಾಯವನ್ನು ನೋಡಿ |