Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 24:12 - ಪರಿಶುದ್ದ ಬೈಬಲ್‌

12 ಯೆಹೋವನೇ ನಮಗೆ ನ್ಯಾಯಾಧೀಶನಾಗಿರಲಿ! ನೀನು ಮಾಡಿರುವ ತಪ್ಪಿಗಾಗಿ ಯೆಹೋವನು ನಿನ್ನನ್ನು ದಂಡಿಸಲಿ. ಆದರೆ ನಾನು ನಿನ್ನೊಡನೆ ಹೋರಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆಹೋವನೇ ನಮ್ಮಿಬ್ಬರ ಮಧ್ಯೆ ವ್ಯಾಜ್ಯವನ್ನು ತೀರಿಸಲಿ. ಆತನೇ ನನಗೋಸ್ಕರ ನಿನಗೆ ಮುಯ್ಯಿ ತೀರಿಸಲಿ. ನಾನಂತೂ ನಿನಗೆ ವಿರೋಧವಾಗಿ ಕೈಯೆತ್ತುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸರ್ವೇಶ್ವರನೇ ನಮ್ಮ ಉಭಯರ ವ್ಯಾಜ್ಯವನ್ನು ತೀರಿಸಲಿ; ಅವರೇ ನನಗಾಗಿ ನಿಮಗೆ ಮುಯ್ಯಿಸಲ್ಲಿಸಲಿ; ನಾನಂತೂ ನಿಮಗೆ ವಿರೋಧವಾಗಿ ಕೈಯೆತ್ತುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೆಹೋವನೇ ನಮ್ಮ ಉಭಯರ ವ್ಯಾಜ್ಯವನ್ನು ತೀರಿಸಲಿ; ಆತನೇ ನನಗೋಸ್ಕರ ನಿನಗೆ ಮುಯ್ಯಿಸಲ್ಲಿಸಲಿ; ನಾನಂತೂ ನಿನಗೆ ವಿರೋಧವಾಗಿ ಕೈಯೆತ್ತುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೆಹೋವ ದೇವರು ನನ್ನ ನಿನ್ನ ಮಧ್ಯದಲ್ಲಿ ನ್ಯಾಯತೀರಿಸಲಿ. ಹೌದು, ಯೆಹೋವ ದೇವರು ತಾವೇ ನನಗೋಸ್ಕರ ನಿನ್ನ ವಿಷಯವಾಗಿ ಮುಯ್ಯಿಗೆ ಮುಯ್ಯಿ ಮಾಡಲಿ. ಆದರೆ ನಾನು ನಿನ್ನ ಮೇಲೆ ನನ್ನ ಕೈಯೆತ್ತುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 24:12
17 ತಿಳಿವುಗಳ ಹೋಲಿಕೆ  

ದೇವರೇ, ನನ್ನನ್ನು ನಿರಪರಾಧಿಯೆಂದು ತೀರ್ಪು ನೀಡು. ವ್ಯಾಜ್ಯದಲ್ಲಿ ನನ್ನ ಪರವಾಗಿಯೂ ಅನ್ಯ ಜನಾಂಗಗಳಿಗೆ ವಿರೋಧವಾಗಿಯೂ ವಾದಿಸು. ಸುಳ್ಳುಗಾರರಿಂದಲೂ ಕೆಡುಕರಿಂದಲೂ ನನ್ನನ್ನು ರಕ್ಷಿಸು.


ಇಸ್ರೇಲರು ನಿಮ್ಮ ವಿರುದ್ಧ ಯಾವ ಪಾಪವನ್ನೂ ಮಾಡಿಲ್ಲ. ಆದರೆ ನೀನು ಇಸ್ರೇಲರ ವಿರುದ್ಧ ಬಹಳ ಕೆಟ್ಟದ್ದನ್ನು ಮಾಡುತ್ತಿರುವೆ. ನ್ಯಾಯವು ಇಸ್ರೇಲರ ಪರವಾಗಿದೆಯೋ ಅಥವಾ ಅಮ್ಮೋನಿಯರ ಪರವಾಗಿದೆಯೋ ಎಂಬುದನ್ನು ನಿಜವಾದ ನ್ಯಾಯಾಧೀಶನಾದ ಯೆಹೋವನೇ ತೀರ್ಮಾನಿಸಬೇಕು.”


ಯೆಹೋವನೇ, ನನ್ನ ವ್ಯಾಜ್ಯಗಳಲ್ಲಿ ವಾದಿಸು! ನನ್ನ ಯುದ್ಧಗಳಲ್ಲಿ ಹೋರಾಡು!


ಆಗ ಸಾರಯಳು ಅಬ್ರಾಮನಿಗೆ, “ನನ್ನ ಸಂಕಟಕ್ಕೆ ನೀನೇ ಕಾರಣ. ನಾನು ಅವಳನ್ನು ನಿನಗೆ ಕೊಟ್ಟೆನು. ಈಗ ಅವಳು ಗರ್ಭಿಣಿಯಾಗಿದ್ದಾಳೆ ಮತ್ತು ನನ್ನನ್ನೇ ಕಡೆಗಣಿಸುತ್ತಿದ್ದಾಳೆ. ಯೆಹೋವನೇ ನನಗೂ ನಿನಗೂ ನ್ಯಾಯ ತೀರಿಸಲಿ” ಎಂದು ಹೇಳಿದಳು.


ಜನರು ಕ್ರಿಸ್ತನನ್ನು ಬಯ್ದರೂ ಆತನು ಅವರನ್ನು ಬಯ್ಯಲಿಲ್ಲ. ಆತನು ಸಂಕಟವನ್ನು ಅನುಭವಿಸಿದರೂ ಜನರನ್ನು ಹೆದರಿಸಲಿಲ್ಲ. ಆತನು ತನ್ನ ಕಾರ್ಯವನ್ನು ದೇವರಿಗೆ ವಹಿಸಿದನು. ಸರಿಯಾದ ನ್ಯಾಯತೀರ್ಪು ನೀಡುವಾತನು ದೇವರೊಬ್ಬನೇ.


ನನ್ನ ಸ್ನೇಹಿತರೇ, ನಿಮಗೆ ಕೇಡುಮಾಡುವ ಜನರನ್ನು ದಂಡಿಸಲು ಪ್ರಯತ್ನಿಸಬೇಡಿ. ದೇವರು ತನ್ನ ಕೋಪದಿಂದ ಅವರನ್ನು ದಂಡಿಸುವವರೆಗೆ ಕಾದುಕೊಂಡಿರಿ. “ನಾನೇ ದಂಡಿಸುವವನು; ನಾನೇ ಜನರಿಗೆ ಮುಯ್ಯಿತೀರಿಸುವವನು ಎಂದು ಪ್ರಭುವು ಹೇಳುತ್ತಾನೆ” ಎಂಬುದಾಗಿ ಬರೆಯಲ್ಪಟ್ಟಿದೆ.


ಯೆಹೋವನೇ, ನೀನು ಸೇಡು ತೀರಿಸಿಕೊಳ್ಳುವ ದೇವರು! ಸೇಡು ತೀರಿಸಿಕೊಳ್ಳುವ ದೇವರೇ ಪ್ರತ್ಯಕ್ಷನಾಗು!


ಯೋಬನೇ, ನಾನೇನಾದರೂ ನಿನ್ನ ಸ್ಥಿತಿಯಲ್ಲಿದ್ದಿದ್ದರೆ, ದೇವರನ್ನೇ ಆಶ್ರಯಿಸಿಕೊಂಡು ನನ್ನ ಕಷ್ಟವನ್ನು ಆತನಿಗೆ ಹೇಳಿಕೊಳ್ಳುತ್ತಿದ್ದೆನು.


ಈ ಆತ್ಮಗಳು, “ಪವಿತ್ರನಾದ ಮತ್ತು ಸತ್ಯವಂತನಾದ ಪ್ರಭುವೇ, ನಮ್ಮನ್ನು ಕೊಂದ ಜನರಿಗೆ ತೀರ್ಪು ನೀಡಲು ಮತ್ತು ಅವರನ್ನು ದಂಡಿಸಲು ನೀನು ಎಷ್ಟು ಕಾಲ ತೆಗೆದುಕೊಳ್ಳುವೆ?” ಎಂದು ಗಟ್ಟಿಯಾದ ಧ್ವನಿಯಲ್ಲಿ ಕೂಗಿದವು.


ಪ್ರತಿಯೊಬ್ಬನಿಗೂ ಅವನ ಕಾರ್ಯಗಳಿಗೆ ಮತ್ತು ನಂಬಿಗಸ್ತಿಕೆಗೆ ತಕ್ಕಂತೆ ಯೆಹೋವನು ಪ್ರತಿಫಲ ಕೊಡುವನು. ಇಂದು ಯೆಹೋವನು ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದರೂ ಯೆಹೋವನಿಂದ ಅಭಿಷೇಕಿಸಲ್ಪಟ್ಟ ರಾಜನಾಗಿರುವ ನಿನಗೆ ನಾನು ಕೇಡನ್ನು ಮಾಡುವುದಿಲ್ಲ!


ನಾವು ಈ ಒಪ್ಪಂದವನ್ನು ಮುರಿದುಹಾಕಿದರೆ, ನಮ್ಮಲ್ಲಿ ಅಪರಾಧಿಯಾದವನಿಗೆ ಅಬ್ರಹಾಮನ ದೇವರು, ನಾಹೋರನ ದೇವರು ಮತ್ತು ಅವರ ಪೂರ್ವಿಕರ ದೇವರು ನ್ಯಾಯತೀರಿಸಲಿ” ಎಂದು ಹೇಳಿದನು. ಅದೇ ರೀತಿಯಲ್ಲಿ ಯಾಕೋಬನು ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಸೇವೆಮಾಡುವ ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿದನು.


ಯೆಹೋವನೇ ನಮ್ಮಿಬ್ಬರಿಗೂ ನ್ಯಾಯಾಧೀಶನಾಗಿದ್ದು ತೀರ್ಪು ನೀಡಲಿ. ಯೆಹೋವನು ನನ್ನ ಪರವಾಗಿ ವಾದಿಸಿ ನಾನು ನೀತಿವಂತನೆಂದು ನಿರೂಪಿಸಿ ನನ್ನನ್ನು ನಿನ್ನಿಂದ ರಕ್ಷಿಸುತ್ತಾನೆ” ಎಂದು ಹೇಳಿದನು.


ನನ್ನ ಶತ್ರುಗಳನ್ನು ನನಗಾಗಿ ದಂಡಿಸುವ ದೇವರು ಆತನೇ. ಆತನು ಜನರನ್ನು ನನ್ನ ಅಧೀನತೆಗೆ ಒಳಪಡಿಸುವನು.


ದಾವೀದನು ರಾಮದ ಪಾಳೆಯದಿಂದ ಓಡಿಹೋದನು. ದಾವೀದನು ಯೋನಾತಾನನ ಬಳಿಗೆ ಹೋಗಿ, “ನಾನು ಮಾಡಿರುವ ತಪ್ಪೇನು? ನನ್ನ ಅಪರಾಧವೇನು? ನಿನ್ನ ತಂದೆಯು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿರುವುದೇಕೆ?” ಎಂದು ಕೇಳಿದನು.


ಮೂವತ್ತು ಮಂದಿ ಶೂರರ ನಾಯಕನಾದ ಅಮಾಸೈಯು ಆತ್ಮನಿಂದ ತುಂಬಿದವನಾಗಿ ಹೇಳಿದ್ದೇನೆಂದರೆ: “ದಾವೀದನೇ, ನಾವು ನಿನ್ನವರು. ಇಷಯನ ಮಗನೇ, ನಾವು ನಿನಗೆ ಸೇರಿದವರು; ನಿನಗೆ ಸಮಾಧಾನ ಕೋರುವವರು; ನಿನಗೆ ಸಹಾಯ ಮಾಡುವವರಿಗೆ ಸಮಾಧಾನ ಕೋರುವೆವು; ಯಾಕೆಂದರೆ ನಿನ್ನ ದೇವರು ನಿನಗೆ ಸಹಾಯಮಾಡುತ್ತಿದ್ದಾನೆ.” ದಾವೀದನು ಇವರನ್ನು ಸ್ವಾಗತಿಸಿ ತನ್ನ ಸೈನ್ಯಾಧಿಪತಿಗಳನ್ನಾಗಿ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು