Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 24:3 - ಪರಿಶುದ್ದ ಬೈಬಲ್‌

3 ಸೌಲನು ರಸ್ತೆಯ ಪಕ್ಕದ ಕುರಿದೊಡ್ಡಿಗೆ ಬಂದನು. ಅಲ್ಲಿಗೆ ಸಮೀಪದಲ್ಲಿ ಒಂದು ಗವಿಯಿದ್ದಿತು. ಸೌಲನು ಶೌಚಕ್ಕೋಸ್ಕರ ಗವಿಯ ಒಳಗಡೆಗೆ ಹೋದನು. ದಾವೀದನೂ ಅವನ ಜನರೂ ಅದೇ ಗವಿಯ ಹಿಂದಗಡೆ ಅಡಗಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನು ಮಾರ್ಗದಲ್ಲಿ ಕುರಿಹಟ್ಟಿಗಳ ಬಳಿಯಲ್ಲಿ ಒಂದು ಗವಿಯನ್ನು ಕಂಡು ಶೌಚಕ್ಕೋಸ್ಕರ ಅದರೊಳಗೆ ಪ್ರವೇಶಿಸಿದನು. ದಾವೀದನೂ ಅವನ ಜನರೂ ಅದೇ ಗವಿಯ ಹಿಂಭಾಗದಲ್ಲಿ ಅಡಗಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಮಾರ್ಗದಲ್ಲಿ ಕುರಿಹಟ್ಟಿಗಳ ಬಳಿಯಲ್ಲಿ ಒಂದು ಗವಿಯನ್ನು ಕಂಡು ಶೌಚಕ್ಕಾಗಿ ಅದರೊಳಗೆ ಪ್ರವೇಶಿಸಿದನು. ದಾವೀದನೂ ಅವನ ಜನರೂ ಅದೇ ಗವಿಯ ಹಿಂಗಡೆಯಲ್ಲಿ ಅಡಗಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವನು ಮಾರ್ಗದಲ್ಲಿ ಕುರಿಹಟ್ಟಿಗಳ ಬಳಿಯಲ್ಲಿ ಒಂದು ಗವಿಯನ್ನು ಕಂಡು ಶೌಚಕ್ಕೋಸ್ಕರ ಅದರೊಳಗೆ ಪ್ರವೇಶಿಸಿದನು. ದಾವೀದನೂ ಅವನ ಜನರೂ ಅದೇ ಗವಿಯ ಹಿಂಗಡೆಯಲ್ಲಿ ಅಡಗಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಸೌಲನು ಮಾರ್ಗದಲ್ಲಿ ಕುರಿಹಟ್ಟಿಗಳು ಇರುವ ಗವಿಯ ಬಳಿಗೆ ಬಂದು, ಅದರಲ್ಲಿ ಅವನು ಶೌಚಕ್ಕಾಗಿ ಹೋದನು. ಆದರೆ ದಾವೀದನೂ, ಅವನ ಜನರೂ ಅದೇ ಗವಿಯ ಹಿಂದೆ ಅಡಗಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 24:3
7 ತಿಳಿವುಗಳ ಹೋಲಿಕೆ  

ಏಹೂದನು ಹೋದ ಕೂಡಲೆ ಸೇವಕರು ಹಿಂದಿರುಗಿ ಬಂದರು. ಕೋಣೆಯ ಬಾಗಿಲಿಗೆ ಬೀಗ ಹಾಕಿದ್ದನ್ನು ಸೇವಕರು ನೋಡಿದರು. “ಅರಸನು ತನ್ನ ವಿಶ್ರಾಂತಿ ಕೋಣೆಯ ಶೌಚಾಲಯದಲ್ಲಿ ಇರಬಹುದು” ಎಂದುಕೊಂಡರು.


ಅವರ ಅಧಿಪತಿಗಳು ದೊಬ್ಬಲ್ಪಡಲಿ. ನಾನು ಹೇಳಿದ್ದು ಸತ್ಯವೆಂದು ಆಗ ಜನರು ತಿಳಿದುಕೊಳ್ಳುವರು.


ಸೌಲನು ಹಕೀಲಾ ಬೆಟ್ಟದ ಮೇಲೆ ತನ್ನ ಪಾಳೆಯವನ್ನು ಮಾಡಿಕೊಂಡನು. ಈ ಪಾಳೆಯವು ಜೆಸಿಮೋನ್ ಅರಣ್ಯಕ್ಕೆ ಎದುರಿನಲ್ಲಿರುವ ರಸ್ತೆಯ ಅಂಚಿನಲ್ಲಿತ್ತು. ದಾವೀದನು ಅರಣ್ಯದಲ್ಲಿ ನೆಲೆಸಿದ್ದನು. ಸೌಲನು ತನ್ನನ್ನು ಹಿಂಬಾಲಿಸಿಕೊಂಡು ಅಲ್ಲಿಗೆ ಬಂದಿರುವುದು ದಾವೀದನಿಗೆ ತಿಳಿಯಿತು.


ಅವನು ಮೂರು ಸಾವಿರ ಇಸ್ರೇಲ್ ಗಂಡಸರನ್ನು ಆರಿಸಿಕೊಂಡನು. ಅವರಲ್ಲಿ ಎರಡು ಸಾವಿರ ಗಂಡಸರು ಗುಡ್ಡಗಾಡು ಪ್ರದೇಶವಾದ ಬೇತೇಲಿನಲ್ಲಿಯೂ ಮಿಕ್ಮಾಷಿನಲ್ಲಿಯೂ ಅವನೊಂದಿಗೆ ಇದ್ದರು. ಉಳಿದ ಒಂದು ಸಾವಿರ ಗಂಡಸರು ಬೆನ್ಯಾಮೀನನ ಗಿಬೆಯದಲ್ಲಿ ಯೋನಾತಾನನೊಂದಿಗೆ ಇದ್ದರು. ಸೌಲನು ಸೈನ್ಯದಲ್ಲಿದ್ದ ಇತರರನ್ನು ಅವರವರ ಮನೆಗಳಿಗೆ ಮರಳಿ ಕಳುಹಿಸಿದನು.


ಸೌಲನು ಜೀಫ್ ಅರಣ್ಯಕ್ಕೆ ಹೋದನು. ಇಸ್ರೇಲಿನಲ್ಲೆಲ್ಲಾ ತಾನೇ ಆರಿಸಿದ ಮೂರು ಸಾವಿರ ಜನ ಸೈನಿಕರನ್ನು ಸೌಲನು ತನ್ನೊಡನೆ ಕರೆದುಕೊಂಡು ಹೋದನು. ಸೌಲನು ಮತ್ತು ಅವನ ಜನರು ದಾವೀದನನ್ನು ಜೀಫ್ ಅರಣ್ಯದಲ್ಲಿ ಹುಡುಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು