Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 24:5 - ಪರಿಶುದ್ದ ಬೈಬಲ್‌

5 ತರುವಾಯ ಸೌಲನ ಅಂಗಿಯ ಮೂಲೆಯನ್ನು ಕತ್ತರಿಸಿದ್ದಕ್ಕಾಗಿ ದಾವೀದನಿಗೆ ಅಸಮಾಧಾನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅನಂತರ ಸೌಲನ ನಿಲುವಂಗಿಯ ತುದಿಯನ್ನು ಕತ್ತರಿಸಿದ್ದಕ್ಕಾಗಿ ಅವನ ಮನಸ್ಸಾಕ್ಷಿಯು ಅವನನ್ನು ಚುಚ್ಚತೊಡಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅನಂತರದಲ್ಲೇ ಸೌಲನ ನಿಲುವಂಗಿಯ ಮೂಲೆಯನ್ನು ಕತ್ತರಿಸಿದ್ದಕ್ಕಾಗಿ ಅವನ ಮನಸ್ಸಾಕ್ಷಿ ಅವನನ್ನು ಹಂಗಿಸತೊಡಗಿತು..

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅನಂತರದಲ್ಲಿ ಸೌಲನ ನಿಲುವಂಗಿಯ ಮೂಲೆಯನ್ನು ಕತ್ತರಿಸಿದ್ದಕ್ಕಾಗಿ ಅವನ ಮನಸ್ಸಾಕ್ಷಿಯು ಅವನನ್ನು ಹಂಗಿಸತೊಡಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದರೆ ಹಾಗೆ ಮಾಡಿದ ಮೇಲೆ, ಸೌಲನ ನಿಲುವಂಗಿಯ ಅಂಚನ್ನು ಕತ್ತರಿಸಿಕೊಂಡದ್ದರಿಂದ ದಾವೀದನ ಮನಃಸ್ಸಾಕ್ಷಿ ಅವನನ್ನು ಹಂಗಿಸತೊಡಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 24:5
6 ತಿಳಿವುಗಳ ಹೋಲಿಕೆ  

ದಾವೀದನು ಜನರನ್ನು ಲೆಕ್ಕಹಾಕಿದ ನಂತರ ಅವಮಾನಗೊಂಡಂತೆ ಭಾವಿಸಿದನು. ದಾವೀದನು ಯೆಹೋವನಿಗೆ, “ನಾನು ಈ ಕಾರ್ಯವನ್ನು ಮಾಡಿ ಮಹಾಪಾಪಕ್ಕೆ ಒಳಗಾದೆನು! ಯೆಹೋವನೇ, ನನ್ನ ಪಾಪಕ್ಕಾಗಿ ನನ್ನನ್ನು ಕ್ಷಮಿಸೆಂದು ಬೇಡುತ್ತೇನೆ. ನಾನು ಬಹಳ ಮೂರ್ಖನಾಗಿಬಿಟ್ಟೆ” ಎಂದು ಹೇಳಿದನು.


ನೀನು ಯೆಹೋವನ ಆಜ್ಞೆಯನ್ನು ಏಕೆ ಕಡೆಗಣಿಸಿದೆ? ಆತನು ತಪ್ಪೆಂದು ಹೇಳಿದ ಕಾರ್ಯವನ್ನು ಏಕೆ ಮಾಡಿದೆ? ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ನೀನು ಕೊಲ್ಲಿಸಿದೆ. ಅವನ ಪತ್ನಿಯನ್ನು ನಿನ್ನ ಪತ್ನಿಯನ್ನಾಗಿ ಸ್ವೀಕರಿಸಿದೆ. ಹೌದು, ನೀನು ಅಮ್ಮೋನಿಯರ ಕತ್ತಿಯಿಂದ ಊರೀಯನನ್ನು ಕೊಲ್ಲಿಸಿದೆ.


ಅಬೀಷೈಯು, “ಯೆಹೋವನು ಈ ದಿನ ನಿನ್ನ ಶತ್ರುವನ್ನು ಸೋಲಿಸಲು ನಿನಗೆ ಒಪ್ಪಿಸಿದ್ದಾನೆ. ಸೌಲನನ್ನು ಅವನ ಭರ್ಜಿಯಿಂದಲೇ ಅವನನ್ನು ನೆಲಕ್ಕೆ ಹತ್ತಿಕೊಳ್ಳುವಂತೆ ತಿವಿಯಲು ನನಗೆ ಅವಕಾಶಕೊಡು. ನಾನು ಒಂದೇ ಸಲಕ್ಕೆ ಆ ಕಾರ್ಯವನ್ನು ಮುಗಿಸಿಬಿಡುತ್ತೇನೆ!” ಎಂದು ದಾವೀದನನ್ನು ಕೇಳಿದನು.


ಯೆಹೋವನೇ, ನಮ್ಮ ಗುರಾಣಿಯೇ, ಅವರನ್ನು ಫಕ್ಕನೆ ಕೊಲ್ಲಬೇಡ, ಇಲ್ಲವಾದರೆ, ನನ್ನ ಜನರು ಮರೆತುಬಿಡಬಹುದು. ನನ್ನ ಒಡಯನೇ, ಸಂರಕ್ಷಕನೇ, ಅವರನ್ನು ಚದರಿಸಿಬಿಡು; ನಿನ್ನ ಬಲದಿಂದ ಸೋಲಿಸಿಬಿಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು