1 ಸಮುಯೇಲ 25:17 - ಪರಿಶುದ್ದ ಬೈಬಲ್17 ಈಗ ಅದರ ಬಗ್ಗೆ ಯೋಚಿಸಿ ನೀನು ಮಾಡಬೇಕಾದದ್ದನ್ನು ತೀರ್ಮಾನಿಸು. ಮೂರ್ಖನಾದ ನಾಬಾಲನೊಂದಿಗೆ ಮಾತಾಡಿ ಅವನ ಮನಸ್ಸನ್ನು ಬದಲಾಯಿಸುವುದು ಅಸಾಧ್ಯ. ನಮ್ಮ ಒಡೆಯನಿಗೂ ಅವನ ಕುಟುಂಬಕ್ಕೂ ಭೀಕರವಾದ ಕೇಡು ಬರಲಿದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಈಗ ಮಾಡಬೇಕಾದದ್ದನ್ನು ನೀನೇ ಆಲೋಚಿಸಿ ಗೊತ್ತುಮಾಡು. ನಮ್ಮ ಯಜಮಾನನಿಗೂ, ಅವನ ಕುಟುಂಬದವರೆಲ್ಲರಿಗೂ ಕೇಡು ಹತ್ತಿರವಾಗಿದೆ. ಮೂರ್ಖನಾದ ಅವನೊಡನೆ ಮಾತನಾಡುವುದು ಅಸಾಧ್ಯ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಈಗ ಮಾಡಬೇಕಾದುದ್ದನ್ನು ನೀವೇ ಆಲೋಚಿಸಿ ತೀರ್ಮಾನಿಸಿ. ನಮ್ಮ ಯಜಮಾನರಿಗೂ ಅವರ ಕುಟುಂಬದವರೆಲ್ಲರಿಗೂ ಕೇಡು ಹತ್ತಿರವಾಗಿದೆ; ಮಂದಮತಿಯಾದ ಅವರೊಡನೆ ಮಾತಾಡುವುದು ಅಸಾಧ್ಯ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಈಗ ಮಾಡಬೇಕಾದದ್ದನ್ನು ನೀನೇ ಆಲೋಚಿಸಿ ಗೊತ್ತುಮಾಡು. ನಮ್ಮ ಯಜಮಾನನಿಗೂ ಅವನ ಕುಟುಂಬದವರೆಲ್ಲರಿಗೂ ಕೇಡು ಹತ್ತಿರವಾಗಿದೆ; ಮೂರ್ಖನಾದ ಅವನೊಡನೆ ಮಾತಾಡುವದಸಾಧ್ಯ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಈಗ ನೀನು ಮಾಡಬೇಕಾದದ್ದೇನೆಂದು ಆಲೋಚಿಸಿ ನೋಡು. ಏಕೆಂದರೆ ಕೇಡು ನಮ್ಮ ಯಜಮಾನನ ಮೇಲೂ ಅವನ ಮನೆಯ ಮೇಲೆಯೂ ನಿಶ್ಚಯವಾಗಿದೆ. ದುಷ್ಟನಾಗಿರುವ ಅವನ ಸಂಗಡ ಮಾತನಾಡುವುದು ಅಸಾಧ್ಯ,” ಎಂದನು. ಅಧ್ಯಾಯವನ್ನು ನೋಡಿ |
ಆದರೆ ಕೆಲವು ಕಿರುಕುಳಕಾರರು, “ಈ ಮನುಷ್ಯನು ಹೇಗೆ ತಾನೆ ನಮ್ಮನ್ನು ರಕ್ಷಿಸುವನು?” ಎಂದು ಹೇಳಿದರು. ಅವರು ಸೌಲನ ಬಗ್ಗೆ ಕೆಟ್ಟಮಾತುಗಳನ್ನು ಆಡಿದರು; ಅವನನ್ನು ತಿರಸ್ಕರಿಸಿ, ಕಾಣಿಕೆಗಳನ್ನು ತಂದುಕೊಡಲಿಲ್ಲ. ಆದರೆ ಸೌಲನು ಏನೂ ಮಾತನಾಡಲಿಲ್ಲ. ಅಮ್ಮೋನಿಯರ ರಾಜನಾದ ನಾಹಾಷನು, ಗಾದ್ ಮತ್ತು ರೂಬೆನ್ ಕುಲದವರಿಗೆ ಕಿರುಕುಳಕೊಡುತ್ತಿದ್ದನು. ನಾಹಾಷನು ಪ್ರತಿ ಮನುಷ್ಯನ ಬಲಗಣ್ಣನ್ನು ಕಿತ್ತುಹಾಕುತ್ತಿದ್ದನು. ನಾಹಾಷನು ಅವರಿಗೆ ಸಹಾಯಮಾಡಲು ಯಾರಿಗೂ ಅವಕಾಶಕೊಡುತ್ತಿರಲಿಲ್ಲ. ಅಮ್ಮೋನಿಯರ ರಾಜನಾದ ನಾಹಾಷನು ಜೋರ್ಡನ್ ನದಿಯ ಪೂರ್ವ ಪ್ರದೇಶದಲ್ಲಿ ವಾಸವಾಗಿದ್ದ ಎಲ್ಲ ಇಸ್ರೇಲರ ಬಲಗಣ್ಣನ್ನು ಕಿತ್ತುಹಾಕುತ್ತಿದ್ದನು. ಆದ್ದರಿಂದ ಅಮ್ಮೋನಿಯರಿಂದ ಏಳು ಸಾವಿರ ಮಂದಿ ಇಸ್ರೇಲರು ಯಾಬೇಷ್ ಗಿಲ್ಯಾದಿಗೆ ಓಡಿಹೋದರು.
ಗಾದನು ದಾವೀದನ ಬಳಿಗೆ ಹೋಗಿ, “ಈ ಮೂರು ಶಿಕ್ಷೆಗಳಲ್ಲಿ ಒಂದನ್ನು ಆರಿಸಿಕೊ: ನಿನಗೆ ಮತ್ತು ನಿನ್ನ ದೇಶಕ್ಕೆ ಏಳು ವರ್ಷಗಳ ಕಾಲ ಬರಗಾಲ ಬರಬೇಕೇ? ಅಥವಾ ನಿನ್ನ ಶತ್ರುಗಳು ನಿನ್ನನ್ನು ಮೂರು ತಿಂಗಳ ಕಾಲ ಅಟ್ಟಿಸಬೇಕೇ? ಅಥವಾ ಮೂರು ದಿನಗಳ ಕಾಲ ನಿನ್ನ ದೇಶದಲ್ಲಿ ರೋಗರುಜಿನಗಳು ವ್ಯಾಪಿಸಬೇಕೇ? ಇವುಗಳ ಬಗ್ಗೆ ಯೋಚಿಸು, ನನ್ನನ್ನು ಕಳುಹಿಸಿದ ಯೆಹೋವನಿಗೆ ನಾನು ಏನು ಹೇಳಬೇಕೆಂಬುದನ್ನು ನೀನು ತೀರ್ಮಾನಿಸು” ಎಂದು ಹೇಳಿದನು.