1 ಸಮುಯೇಲ 25:2 - ಪರಿಶುದ್ದ ಬೈಬಲ್2 ಮಾವೋನ್‌ನಲ್ಲಿ ಒಬ್ಬ ಮನುಷ್ಯನು ವಾಸಿಸುತ್ತಿದ್ದನು. ಈ ಮನುಷ್ಯನು ಬಹಳ ಶ್ರೀಮಂತನಾಗಿದ್ದನು. ಅವನು ಮೂರು ಸಾವಿರ ಕುರಿಗಳನ್ನೂ ಒಂದು ಸಾವಿರ ಆಡುಗಳನ್ನೂ ಹೊಂದಿದ್ದನು. ಅವನು ಕರ್ಮೆಲಿನಲ್ಲಿ ವ್ಯಾಪಾರ ಮಾಡುತ್ತಿದ್ದನು. ಒಮ್ಮೆ ಅವನು ಕುರಿಗಳ ತುಪ್ಪಟವನ್ನು ಕತ್ತರಿಸುವುದಕ್ಕಾಗಿ ಕರ್ಮೆಲಿಗೆ ಹೋಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಕರ್ಮೆಲಿನಲ್ಲಿ ಸ್ವಂತ ಸೊತ್ತು ಹೊಂದಿದ್ದ ಒಬ್ಬ ಮನುಷ್ಯನಿದ್ದನು. ಅವನು ಮಾವೋನಿನಲ್ಲಿ ವಾಸಿಸುತ್ತಿದ್ದನು. ಅವನ ಹೆಸರು ನಾಬಾಲ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಕರ್ಮೆಲಿನಲ್ಲಿ ಸ್ವಂತ ಸೊತ್ತು ಪಡೆದಿದ್ದ ಒಬ್ಬ ಮನುಷ್ಯ ಮಾವೋನಿನಲ್ಲಿ ವಾಸಿಸುತ್ತಿದ್ದನು. ಅವನ ಹೆಸರು ನಾಬಾಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಕರ್ಮೆಲಿನಲ್ಲಿ ಸ್ವಾಸ್ತ್ಯವಿದ್ದಂಥ ಒಬ್ಬ ಮನುಷ್ಯನು ಮಾವೋನಿನಲ್ಲಿ ವಾಸಿಸುತ್ತಿದ್ದನು; ಅವನ ಹೆಸರು ನಾಬಾಲ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆದರೆ ಕರ್ಮೆಲಿನಲ್ಲಿ ಸೊತ್ತುಗಳಿರುವ ಮಾವೋನಿನ ಒಬ್ಬ ಮನುಷ್ಯನಿದ್ದನು. ಅವನು ಬಹು ಸಿರಿವಂತನಾಗಿದ್ದನು. ಅವನಿಗೆ ಮೂರು ಸಾವಿರ ಕುರಿಗಳೂ ಸಾವಿರ ಮೇಕೆಗಳೂ ಇದ್ದವು. ಅಧ್ಯಾಯವನ್ನು ನೋಡಿ |
ಸಮುವೇಲನು ಮಾರನೆಯ ದಿನ ಬೆಳಿಗ್ಗೆ ಮೇಲೆದ್ದು, ಸೌಲನನ್ನು ಭೇಟಿಮಾಡಲು ಹೋದನು. ಆದರೆ ಜನರೆಲ್ಲ ಸಮುವೇಲನಿಗೆ, “ಸೌಲನು ತನ್ನ ಗೌರವಾರ್ಥವಾಗಿ ಜ್ಞಾಪಕಸ್ತಂಭವನ್ನು ನಿರ್ಮಿಸಲು ಕರ್ಮೆಲ್ ಎಂಬ ಪಟ್ಟಣಕ್ಕೆ ಹೋದನು. ನಂತರ ಸೌಲನು ಕೆಲವು ಪ್ರದೇಶಗಳನ್ನು ಸುತ್ತಿಕೊಂಡು ಗಿಲ್ಗಾಲಿಗೆ ಹೋದನು” ಎಂದು ಹೇಳಿದರು. ಸಮುವೇಲನು ಸೌಲನಿದ್ದ ಸ್ಥಳಕ್ಕೆ ಹೋದನು. ಸೌಲನು ಅಮಾಲೇಕ್ಯರಿಂದ ವಶಪಡಿಸಿಕೊಂಡ ಪಶುಗಳನ್ನು ಪ್ರಥಮ ಸರ್ವಾಂಗಹೋಮವಾಗಿ ಯೆಹೋವನಿಗೆ ಅರ್ಪಿಸುತ್ತಿದ್ದನು.