1 ಸಮುಯೇಲ 25:21 - ಪರಿಶುದ್ದ ಬೈಬಲ್21 ಅಬೀಗೈಲಳನ್ನು ಸಂಧಿಸುವುದಕ್ಕೆ ಮುಂಚೆ ದಾವೀದನು, “ನಾಬಾಲನ ಆಸ್ತಿಯನ್ನು ನಾನು ಅರಣ್ಯದಲ್ಲಿ ಕಾಪಾಡಿದೆನು. ಅವನ ಕುರಿಗಳಲ್ಲಿ ಒಂದೂ ತಪ್ಪಿಸಿಕೊಳ್ಳದಂತೆ ನಾನು ನೋಡಿಕೊಂಡೆನು. ನಾನು ಅವನಿಂದ ಏನನ್ನೂ ಅಪೇಕ್ಷಿಸದೆ ಇದನ್ನೆಲ್ಲ ಮಾಡಿದೆ! ನಾನು ಅವನಿಗೆ ಒಳ್ಳೆಯದನ್ನು ಮಾಡಿದೆ; ಆದರೆ ಅವನು ನನಗೆ ಕೆಟ್ಟವನಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅಷ್ಟರಲ್ಲಿ ದಾವೀದನು, “ನಾನು ಮರುಭೂಮಿಯಲ್ಲಿ ಈ ಮನುಷ್ಯನ ಆಸ್ತಿಯಲ್ಲಿ ಏನೂ ನಷ್ಟವಾಗದಂತೆ ಕಾಪಾಡಿದ್ದು ವ್ಯರ್ಥವಾಯಿತು. ಅವನು ಉಪಕಾರಕ್ಕೆ ಅಪಕಾರ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅಷ್ಟರಲ್ಲಿ ದಾವೀದನು, “ನಾನು ಅಡವಿಯಲ್ಲಿ ಈ ಮನುಷ್ಯನ ಆಸ್ತಿಯಲ್ಲಿ ಏನೂ ನಷ್ಟವಾಗದಂತೆ ಕಾಪಾಡಿದ್ದು ವ್ಯರ್ಥ ಆಯಿತು. ಅವನು ಉಪಕಾರಕ್ಕೆ ಅಪಕಾರ ಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅಷ್ಟರಲ್ಲಿ ದಾವೀದನು - ನಾನು ಅಡವಿಯಲ್ಲಿ ಈ ಮನುಷ್ಯನ ಆಸ್ತಿಯಲ್ಲಿ ಏನೂ ನಷ್ಟವಾಗದಂತೆ ಕಾಪಾಡಿದ್ದು ವ್ಯರ್ಥವಾಯಿತು. ಅವನು ಉಪಕಾರಕ್ಕೆ ಅಪಕಾರಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅಷ್ಟರಲ್ಲಿ ದಾವೀದನು ತನ್ನ ಜನರಿಗೆ, “ಅಡವಿಯಲ್ಲಿದ್ದ ಇವನ ಆಸ್ತಿಯಲ್ಲಿ ಏನೂ ನಷ್ಟವಾಗದಂತೆ ನಾನು ಕಾಪಾಡಿದ್ದು ವ್ಯರ್ಥವಾಯಿತು. ಅವನು ನಾನು ಮಾಡಿದ ಉಪಕಾರಕ್ಕೆ ಅಪಕಾರ ಮಾಡಿದ್ದಾನೆ. ಅಧ್ಯಾಯವನ್ನು ನೋಡಿ |