1 ಸಮುಯೇಲ 25:26 - ಪರಿಶುದ್ದ ಬೈಬಲ್26 ಮುಗ್ದಜನರನ್ನು ಕೊಂದು ಅಪರಾಧಿಯಾಗದಂತೆ ಯೆಹೋವನು ನಿನ್ನನ್ನು ಕಾಪಾಡಿದ್ದಾನೆ. ಯೆಹೋವನ ಆಣೆಯಾಗಿಯೂ ನಿನ್ನ ಆಣೆಯಾಗಿಯೂ ನಿನ್ನ ಶತ್ರುಗಳೂ ನಿನಗೆ ಕೇಡುಮಾಡುವವರೂ ನಾಬಾಲನಂತಾಗಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಸ್ವಾಮೀ, ನೀನು ಸ್ವಹಸ್ತದಿಂದ ಮುಯ್ಯಿ ತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ಯೆಹೋವನು ನಿನ್ನನ್ನು ಕಾಪಾಡಿದ್ದಾನೆ. ಯೆಹೋವನಾಣೆ, ನಿನ್ನ ಜೀವದಾಣೆ ನಿನ್ನ ವಿರೋಧಿಗಳೂ, ನಿನಗೆ ಕೇಡು ಬಗೆಯುವವರೂ ನಾಬಾಲನ ಗತಿಯನ್ನು ಹೊಂದಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಒಡೆಯಾ, ತಾವು ಸ್ವಹಸ್ತದಿಂದ ಮುಯ್ಯಿತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ಸರ್ವೇಶ್ವರ ತಮ್ಮನ್ನು ಕಾಪಾಡಿದ್ದಾರೆ. ಸರ್ವೇಶ್ವರನಾಣೆ, ನಿಮ್ಮ ಜೀವದಾಣೆ, ನಿಮ್ಮ ವಿರೋಧಿಗಳೂ ನಿಮಗೆ ಕೇಡು ಬಗೆಯುವವರೂ ನಾಬಾಲನ ಗತಿಯನ್ನು ಹೊಂದಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಸ್ವಾಮೀ, ನೀನು ಸ್ವಹಸ್ತದಿಂದ ಮುಯ್ಯಿತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ಯೆಹೋವನು ನಿನ್ನನ್ನು ಕಾಪಾಡಿದ್ದಾನೆ. ಯೆಹೋವನ ಆಣೆ, ನಿನ್ನ ಜೀವದಾಣೆ, ನಿನ್ನ ವಿರೋಧಿಗಳೂ ನಿನಗೆ ಕೇಡು ಬಗೆಯುವವರೂ ನಾಬಾಲನ ಗತಿಯನ್ನು ಹೊಂದಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆದಕಾರಣ ನನ್ನ ಒಡೆಯನೇ, ನೀನು ರಕ್ತ ಚೆಲ್ಲುವುದಕ್ಕೂ, ನಿನ್ನ ಕೈಯಿಂದ ನಿನಗೆ ಮುಯ್ಯಿ ತೀರಿಸಿಕೊಳ್ಳುವುದಕ್ಕೂ ಹೋಗುವುದನ್ನು ದೇವರು ತಡೆದದ್ದರಿಂದ, ಯೆಹೋವ ದೇವರ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ ನಿನ್ನ ಶತ್ರುಗಳೂ, ನನ್ನ ಒಡೆಯನಿಗೆ ಕೇಡನ್ನು ಹುಡುಕುವವರೂ ನಾಬಾಲನ ಹಾಗೆಯೇ ಆಗಲಿ. ಅಧ್ಯಾಯವನ್ನು ನೋಡಿ |
ಆಗ ದಾನಿಯೇಲನು (ಬೇಲ್ತೆಶಚ್ಚರನು) ಸುಮಾರು ಒಂದು ಗಂಟೆಯವರೆಗೆ ಮೌನವಾಗಿದ್ದನು. ಅವನ ಬುದ್ಧಿಗೆ ತೋರಿದ ವಿಷಯಗಳು ಅವನನ್ನು ಗಾಬರಿಪಡಿಸಿದವು. ಆಗ ರಾಜನು, “ಬೇಲ್ತೆಶಚ್ಚರನೇ, ಕನಸು ಅಥವಾ ಕನಸಿನ ಅರ್ಥವು ನಿನ್ನನ್ನು ಭಯಗೊಳಿಸದಿರಲಿ” ಎಂದು ಧೈರ್ಯ ಹೇಳಿದನು. ಆಗ ಬೇಲ್ತೆಶಚ್ಚರನು ಅರಸನಿಗೆ, “ನನ್ನ ಒಡೆಯನೇ, ಈ ಕನಸು ನಿನ್ನ ವಿರೋಧಿಗಳಿಗೆ ಫಲಿಸಲಿ. ಇದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ ಎಂದು ನಾನು ಹಾರೈಸುತ್ತೇನೆ.
ನಾಬಾಲನು ಸತ್ತನೆಂಬುದು ದಾವೀದನಿಗೆ ತಿಳಿಯಿತು. ದಾವೀದನು, “ಯೆಹೋವನಿಗೆ ಸ್ತೋತ್ರವಾಗಲಿ! ನಾಬಾಲನು ನನ್ನ ಬಗ್ಗೆ ಕೆಟ್ಟಮಾತುಗಳನ್ನು ಆಡಿದನು, ಆದರೆ ಯೆಹೋವನು ನನಗೆ ಸಹಾಯ ಮಾಡಿದನು. ನಾನು ತಪ್ಪುಮಾಡದಂತೆ ಯೆಹೋವನು ನನ್ನನ್ನು ತಡೆದನು. ನಾಬಾಲನು ಕೆಟ್ಟದನ್ನು ಮಾಡಿದ್ದರಿಂದ ಯೆಹೋವನು ಅವನಿಗೆ ಸಾವನ್ನು ಬರಮಾಡಿದನು” ಎಂದು ಹೇಳಿದನು. ನಂತರ ದಾವೀದನು ಅಬೀಗೈಲಳಿಗೆ ಒಂದು ಸಂದೇಶವನ್ನು ಕಳುಹಿಸಿ ತನ್ನ ಹೆಂಡತಿಯಾಗಬೇಕೆಂದು ಕೇಳಿಕೊಂಡನು.