28 ನಾನು ಮಾಡಿದ ತಪ್ಪನ್ನು ದಯವಿಟ್ಟು ಕ್ಷಮಿಸು. ಯೆಹೋವನು ನಿನ್ನ ಕುಟುಂಬವನ್ನು ಪ್ರಬಲಗೊಳಿಸುತ್ತಾನೆಂದೂ ನಿನ್ನ ಕುಟುಂಬದಿಂದ ಅನೇಕ ರಾಜರು ಬರುತ್ತಾರೆಂದೂ ನನಗೆ ತಿಳಿದಿದೆ! ನೀನು ಯೆಹೋವನ ಯುದ್ಧಗಳಲ್ಲಿ ಹೋರಾಡುವುದರಿಂದ ಯೆಹೋವನು ಇದನ್ನು ನೆರವೇರಿಸುತ್ತಾನೆ. ನೀನು ಜೀವಿಸಿರುವ ತನಕ ಜನರು ನಿನ್ನಲ್ಲಿ ಯಾವುದೇ ಬಗೆಯ ಕೆಟ್ಟದನ್ನು ಕಂಡುಹಿಡಿಯುವುದಿಲ್ಲ!
28 ನಿನ್ನ ದಾಸಿಯ ಅಪರಾಧಕ್ಕೆ ಕ್ಷಮಾಪಣೆಯಾಗಲಿ. ಸ್ವಾಮಿಯೇ, ನೀನು ಯೆಹೋವನ ಶತ್ರುಗಳೊಡನೆ ಯುದ್ಧಮಾಡುವುದರಿಂದ ಆತನು ನಿನ್ನ ಮನೆಯನ್ನು ಶಾಶ್ವತವಾಗಿ ಸ್ಥಿರಪಡಿಸುವನು. ಆದ್ದರಿಂದ ನಿನ್ನ ಜೀವಮಾನದಲ್ಲೆಲ್ಲಾ ನಿನ್ನಲ್ಲಿ ಕೆಟ್ಟತನವು ಕಾಣದಿರಲಿ.
28 ನಿಮ್ಮ ದಾಸಿಯ ಅಪರಾಧಕ್ಕೆ ಕ್ಷಮಾಪಣೆಯಾಗಲಿ; ಒಡೆಯಾ, ತಾವು ಸರ್ವೇಶ್ವರನ ಶತ್ರುಗಳೊಡನೆ ಯುದ್ಧಮಾಡುವುದರಿಂದ ಅವರು ನಿಮ್ಮ ಮನೆಯನ್ನು ಶಾಶ್ವತವಾಗಿ ಸ್ಥಿರಪಡಿಸುವರು. ಆದುದರಿಂದ ನಿಮ್ಮ ಜೀವಮಾನದಲ್ಲೆಲ್ಲಾ ನಮ್ಮಲ್ಲಿ ಕೆಟ್ಟತನ ಕಾಣದಿರಲಿ;
28 ನಿನ್ನ ದಾಸಿಯ ಅಪರಾಧಕ್ಕೆ ಕ್ಷಮಾಪಣೆಯಾಗಲಿ; ಸ್ವಾವಿುಯೇ, ನೀನು ಯೆಹೋವನ ಶತ್ರುಗಳೊಡನೆ ಯುದ್ಧಮಾಡುವದರಿಂದ ಆತನು ನಿನ್ನ ಮನೆಯನ್ನು ಶಾಶ್ವತವಾಗಿ ಸ್ಥಿರಪಡಿಸುವನು. ಆದದರಿಂದ ನಿನ್ನ ಜೀವಮಾನದಲ್ಲೆಲ್ಲಾ ನಿನ್ನಲ್ಲಿ ಕೆಟ್ಟತನವು ಕಾಣದಿರಲಿ;
28 “ನೀನು ದಯಮಾಡಿ ನಿನ್ನ ದಾಸಿಯ ತಪ್ಪನ್ನು ಮನ್ನಿಸಬೇಕು. ಏಕೆಂದರೆ ನನ್ನ ಒಡೆಯನು ಯೆಹೋವ ದೇವರ ಯುದ್ಧಗಳನ್ನು ನಡೆಸುತ್ತಾನೆ. ಆದ್ದರಿಂದ ನಿನ್ನ ಜೀವಮಾನದಲ್ಲೆಲ್ಲಾ ನಿನ್ನಲ್ಲಿ ಕೆಟ್ಟತನ ಕಾಣದಿರಲಿ. ಯೆಹೋವ ದೇವರು ನಿಶ್ಚಯವಾಗಿ ನನ್ನ ಒಡೆಯನಾದ ನಿನಗೆ ಶಾಶ್ವತ ರಾಜ್ಯವನ್ನು ಸ್ಥಿರಪಡಿಸುವರು.
ಆದರೆ ಸೌಲನು ದಾವೀದನನ್ನು ಕೊಲ್ಲಬೇಕೆಂದಿದ್ದನು. ದಾವೀದನಿಗೆ ಮೋಸಮಾಡಲು ಸೌಲನು ಒಂದು ಉಪಾಯವನ್ನು ಹೂಡಿ ಅವನಿಗೆ, “ನನ್ನ ಹಿರಿಯ ಮಗಳಾದ ಮೇರಬಳು ಇದ್ದಾಳೆ. ನಾನು ಅವಳನ್ನು ನಿನಗೆ ಮದುವೆ ಮಾಡಿಕೊಡುತ್ತೇನೆ. ಆಗ ನೀನೊಬ್ಬ ಬಲಶಾಲಿಯಾದ ಸೈನಿಕನಾಗುವೆ. ನೀನು ನನಗೆ ಮಗನಂತಿರುವೆ! ನಂತರ ನೀನು ಹೋಗಿ ಯೆಹೋವನ ಯುದ್ಧಗಳಲ್ಲಿ ಹೋರಾಡು” ಎಂದು ಹೇಳಿದನು. ಆದರೆ ಇದೊಂದು ಮೋಸವಾಗಿತ್ತು. “ಈಗ ನಾನು ದಾವೀದನನ್ನು ಕೊಲ್ಲುವ ಅಗತ್ಯವಿಲ್ಲ. ನನಗೋಸ್ಕರ ಫಿಲಿಷ್ಟಿಯರೇ ಅವನನ್ನು ಕೊಲ್ಲುವಂತೆ ಮಾಡುತ್ತೇನೆ” ಎಂಬದು ಸೌಲನ ನಿಜವಾದ ಆಲೋಚನೆಯಾಗಿತ್ತು.
“ನನ್ನ ದೇವರೇ, ನಿನ್ನ ಸೇವಕನಾದ ನನ್ನೊಂದಿಗೆ ನೀನು ಮಾತನಾಡಿದೆ. ನೀನು ನನ್ನ ಕುಟುಂಬವನ್ನು ಸ್ಥಿರವಾಗಿ ಕಟ್ಟುವೆನೆಂದು ವಾಗ್ದಾನ ಮಾಡಿದೆ. ಆದ್ದರಿಂದ ನಾನು ಧೈರ್ಯದಿಂದ ನಿನ್ನ ಸಂಗಡ ಮಾತನಾಡುತ್ತಿದ್ದೇನೆ; ನಿನ್ನ ವಾಗ್ದಾನವನ್ನು ನೆರವೇರಿಸು ಎಂದು ಕೇಳಿಕೊಳ್ಳುತ್ತಿದ್ದೇನೆ.
ನನ್ನ ತಂದೆಯೇ, ನನ್ನ ಕೈಯಲ್ಲಿರುವ ಚೂರು ಬಟ್ಟೆಯನ್ನು ನೋಡು. ನಾನು ನಿನ್ನ ಅಂಗಿಯ ಮೂಲೆಯನ್ನು ಕತ್ತರಿಸಿಹಾಕಿದೆ. ನಾನು ನಿನ್ನನ್ನು ಕೊಲ್ಲಬಹುದಿತ್ತು, ಆದರೆ ಕೊಲ್ಲಲಿಲ್ಲ! ನೀನು ಇದನ್ನು ಅರ್ಥಮಾಡಿಕೊಳ್ಳಬೇಕೆಂದು ನಾನು ಬಯಸಿದ್ದೇನೆ. ನಾನು ನಿನ್ನ ವಿರುದ್ಧವಾಗಿ ಯಾವ ಸಂಚನ್ನೂ ಮಾಡುತ್ತಿಲ್ಲವೆಂದು ನೀನು ತಿಳಿದುಕೊಳ್ಳಬೇಕಾಗಿದೆ! ನಾನು ನಿನಗೆ ಯಾವ ತಪ್ಪನ್ನೂ ಮಾಡಿಲ್ಲ! ಆದರೆ ನೀನು ನನ್ನನ್ನು ಹುಡುಕುತ್ತಿರುವೆ; ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿರುವೆ.
ನೀನು ಅವುಗಳನ್ನೆಲ್ಲಾ ಕೈಕೊಂಡು ನಡೆದರೆ ಯಾವಾಗಲೂ ನಿನ್ನ ಕುಟುಂಬದ ಯಾವನಾದರೊಬ್ಬನು ಇಸ್ರೇಲಿನ ರಾಜನಾಗಿರುತ್ತಾನೆಂದು ನಾನು ನಿನಗೆ ವಾಗ್ದಾನ ಮಾಡುತ್ತೇನೆ. ನಿನ್ನ ತಂದೆಯಾದ ದಾವೀದನಿಗೆ ನಾನು ಈ ವಾಗ್ದಾನವನ್ನು ಮಾಡಿದ್ದೆನು. ಯಾವಾಗಲೂ ಅವನ ಸಂತತಿಯವರಲ್ಲಿ ಯಾವನಾದರೊಬ್ಬನು ಇಸ್ರೇಲನ್ನು ಆಳುತ್ತಾನೆಂದು ನಾನು ಅವನಿಗೆ ಹೇಳಿದ್ದೆನು.
ಯೆಹೋವನು ಇಚ್ಛಿಸಿದ ಕಾರ್ಯಗಳನ್ನು ದಾವೀದನು ಯಾವಾಗಲೂ ಮಾಡುತ್ತಿದ್ದನು. ಯೆಹೋವನ ಆಜ್ಞೆಗಳಿಗೆ ಅವನು ಯಾವಾಗಲೂ ವಿಧೇಯತೆಯಿಂದಿದ್ದನು. ದಾವೀದನು ಹಿತ್ತಿಯನಾದ ಊರೀಯನ ವಿಷಯದಲ್ಲಿ ಮಾತ್ರ ಯೆಹೋವನಿಗೆ ಅವಿಧೇಯನಾದನು.
“ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನೇ, ನೀನು ನನಗೆ ಮುಂದಿನ ಸಂಗತಿಗಳನ್ನು ತೋರಿಸಿರುವೆ. ‘ನಾನು ನಿನ್ನ ಕುಟುಂಬವನ್ನು ಸ್ಥಿರಪಡಿಸುವೆನು’ ಎಂದು ಹೇಳಿರುವೆ. ಆ ಕಾರಣದಿಂದಲೇ ನಿನ್ನ ಸೇವಕನಾದ ನಾನು ನಿನ್ನಲ್ಲಿ ಈ ಪ್ರಾರ್ಥನೆಯನ್ನು ಸಲ್ಲಿಸಲು ತೀರ್ಮಾನಿಸಿದ್ದೇನೆ.
ಹಿಂದಿನ ದಿನಗಳಲ್ಲಿ, ಸೌಲನು ರಾಜನಾಗಿದ್ದಾಗಲೂ ನಮ್ಮನ್ನು ಯುದ್ಧದಲ್ಲಿ ಮುನ್ನಡೆಸಿದವನು ನೀನೇ. ಯೆಹೋವನು ನಿನ್ನನ್ನು ಕುರಿತು, ‘ನೀನು ನನ್ನ ಜನರಾದ ಇಸ್ರೇಲರ ನಾಯಕನೂ ಪಾಲಕನೂ ಆಗಿರುವೆ’ ಎಂದು ಹೇಳಿದ್ದಾನೆ” ಎಂದರು.
ಜನರನ್ನು ರಕ್ಷಿಸಲು ಯೆಹೋವನಿಗೆ ಕತ್ತಿ ಮತ್ತು ಈಟಿಗಳ ಅಗತ್ಯವಿಲ್ಲ ಎಂಬುದು ಇಲ್ಲಿ ಸೇರಿರುವ ಜನರಿಗೆಲ್ಲ ತಿಳಿಯುತ್ತದೆ. ಇದು ಯೆಹೋವನ ಯುದ್ಧ. ಫಿಲಿಷ್ಟಿಯರನ್ನೆಲ್ಲ ಸೋಲಿಸಲು ಯೆಹೋವನು ನಮಗೆ ಸಹಾಯ ಮಾಡುತ್ತಾನೆ” ಎಂದು ಹೇಳಿದನು.
ಆಗ ಸಮುವೇಲನು ಸೌಲನಿಗೆ, “ನೀನು ನನ್ನ ಮೇಲಂಗಿಯನ್ನು ಹರಿದುಹಾಕಿದೆ. ಇದೇರೀತಿ ಯೆಹೋವನು ಈ ದಿನ ನಿನ್ನಿಂದ ಇಸ್ರೇಲ್ ರಾಜ್ಯವನ್ನು ಹರಿದುಹಾಕಿದನು. ನಿನ್ನ ಸ್ನೇಹಿತರಲ್ಲಿ ಒಬ್ಬನಿಗೆ ಯೆಹೋವನು ರಾಜ್ಯಾಧಿಕಾರವನ್ನು ಕೊಟ್ಟಿದ್ದಾನೆ. ಅವನು ನಿನಗಿಂತ ಉತ್ತಮ ವ್ಯಕ್ತಿ.
ಸಭೆಯ ಮಧ್ಯದಲ್ಲಿ ನಿಂತುಕೊಂಡು ಯೆಹಜೀಯೇಲನು ಅವರಿಗೆ, “ರಾಜನಾದ ಯೆಹೋಷಾಫಾಟನೇ, ನನ್ನ ಮಾತನ್ನು ಕೇಳು. ಜೆರುಸಲೇಮಿನಲ್ಲಿಯೂ ಯೆಹೂದದ ರಾಜ್ಯದಲ್ಲಿಯೂ ವಾಸಿಸುವ ಸರ್ವಜನರೇ, ನನ್ನ ಮಾತನ್ನು ಕೇಳಿರಿ. ಯೆಹೋವನು ನಿಮಗೆ ಹೀಗೆನ್ನುತ್ತಾನೆ: ‘ಆ ದೊಡ್ಡ ಸೈನ್ಯಕ್ಕೆ ಹೆದರಿ ಚಿಂತೆಗೊಳಗಾಗಬೇಡಿ. ಯಾಕೆಂದರೆ ಯುದ್ಧವು ನಿಮ್ಮದಲ್ಲ, ಅದು ದೇವರದೇ!
ನಾನು ನನಗೋಸ್ಕರ ನಂಬಿಗಸ್ತನಾದ ಯಾಜಕನೊಬ್ಬನನ್ನು ಆರಿಸಿಕೊಳ್ಳುತ್ತೇನೆ. ಈ ಯಾಜಕನು ನಾನು ಹೇಳುವುದನ್ನು ಕೇಳುವನು ಮತ್ತು ನನಗೆ ಇಷ್ಟವಾದುದನ್ನು ಮಾಡುವನು. ಈ ಯಾಜಕನ ಕುಟುಂಬವನ್ನು ನಾನು ಬಲಗೊಳಿಸುವೆನು. ನಾನು ಆರಿಸಿಕೊಂಡಿರುವ ರಾಜನ ಬಳಿಯಲ್ಲಿ ಅವನು ಸದಾಕಾಲ ಸೇವೆಮಾಡುವನು.
ಅಹೀಮೆಲೆಕನು, “ದಾವೀದನು ನಿನಗೆ ಬಹಳ ನಂಬಿಗಸ್ತನಾಗಿದ್ದಾನೆ. ದಾವೀದನಷ್ಟು ನಂಬಿಗಸ್ತನು ನಿನ್ನ ಇತರ ಅಧಿಕಾರಿಗಳಲ್ಲಿ ಇಲ್ಲವೇ ಇಲ್ಲ. ದಾವೀದನು ನಿನ್ನ ಸ್ವಂತ ಅಳಿಯ. ದಾವೀದನು ನಿನ್ನ ಅಂಗರಕ್ಷಕ ದಳಪತಿ. ದಾವೀದನನ್ನು ನಿನ್ನ ಸ್ವಂತ ಕುಟುಂಬವೆಲ್ಲ ಗೌರವಿಸುತ್ತದೆ.
ಜನರು ದಾವೀದನಿಗೆ, “ಯೆಹೋವನು ಈ ದಿನವನ್ನೇ ಕುರಿತು ನಿನ್ನೊಂದಿಗೆ ಮಾತನಾಡಿದನು. ಯೆಹೋವನು ನಿನಗೆ, ‘ನಾನು ನಿನ್ನ ಶತ್ರುವನ್ನು ನಿನಗೆ ಒಪ್ಪಿಸುತ್ತೇನೆ. ನಿನ್ನ ಇಷ್ಟದಂತೆ ಶತ್ರುವಿಗೆ ಏನು ಬೇಕಾದರೂ ಮಾಡು’ ಎಂದು ಹೇಳಿದನು” ಎಂದರು. ನಂತರ ದಾವೀದನು ಸೌಲನ ಹತ್ತಿರಕ್ಕೆ ತೆವಳುತ್ತಾ ಹೋಗಿ ಸೌಲನ ಅಂಗಿಯ ಒಂದು ಮೂಲೆಯನ್ನು ಕತ್ತರಿಸಿದನು. ದಾವೀದನನ್ನು ಸೌಲನು ನೋಡಲಿಲ್ಲ.
ದಾವೀದನು ಚಿಕ್ಲಗಿಗೆ ಆಗಮಿಸಿದನು. ನಂತರ ಅವನು ಅಮಾಲೇಕ್ಯರಿಂದ ವಶಪಡಿಸಿಕೊಂಡಿದ್ದ ಕೆಲವು ವಸ್ತುಗಳನ್ನು ಯೆಹೂದದ ಅವನ ಗೆಳೆಯರಿಗೂ ನಾಯಕರಿಗೂ ಕಳುಹಿಸಿದನು. ದಾವೀದನು, “ಯೆಹೋವನ ಶತ್ರುಗಳಿಂದ ನಾವು ವಶಪಡಿಸಿಕೊಂಡ ವಸ್ತುಗಳ ಕೊಡುಗೆಯು ನಿಮಗಾಗಿ ಇಲ್ಲಿದೆ” ಎಂದು ಹೇಳಿದನು.
ಈಗ ನೀನು ನನಗೆ ಒಂದು ಪ್ರಮಾಣವನ್ನು ಮಾಡು. ನನ್ನ ಸಂತಾನದವರನ್ನು ನೀನು ಕೊಲ್ಲುವುದಿಲ್ಲವೆಂದು ಯೆಹೋವನ ಹೆಸರಿನಲ್ಲಿ ನನಗೆ ಪ್ರಮಾಣಮಾಡು. ನನ್ನ ತಂದೆಯ ಕುಲದಲ್ಲಿ ನನ್ನ ಹೆಸರನ್ನು ನಾಶಮಾಡುವುದಿಲ್ಲವೆಂದು ಪ್ರಮಾಣ ಮಾಡು” ಎಂದು ಬೇಡಿಕೊಂಡನು.
ಫಿಲಿಷ್ಟಿಯರ ಅಧಿಪತಿಗಳು, “ಈ ಇಬ್ರಿಯರು ಇಲ್ಲಿ ಮಾಡುತ್ತಿರುವುದೇನು?” ಎಂದು ಆಕೀಷನನ್ನು ಕೇಳಿದರು. ಆಕೀಷನು ಫಿಲಿಷ್ಟಿಯರ ಸೇನಾಧಿಪತಿಗಳಿಗೆ, “ಇವನು ದಾವೀದ. ದಾವೀದನು ಸೌಲನ ಅಧಿಕಾರಿಗಳಲ್ಲಿ ಒಬ್ಬನು. ದಾವೀದನು ಬಹಳ ಕಾಲದಿಂದ ನನ್ನೊಡನೆ ಇದ್ದಾನೆ. ದಾವೀದನು ಸೌಲನನ್ನು ತೊರೆದು ನನ್ನ ಬಳಿಗೆ ಬಂದಾಗಿನಿಂದ ನಾನು ಅವನಲ್ಲಿ ಯಾವ ತಪ್ಪುನ್ನೂ ಗುರುತಿಸಿಲ್ಲ” ಎಂದನು.