1 ಸಮುಯೇಲ 25:29 - ಪರಿಶುದ್ದ ಬೈಬಲ್29 ನಿನ್ನನ್ನು ಕೊಲ್ಲಲು ಒಬ್ಬ ವ್ಯಕ್ತಿಯು ಅಟ್ಟಿಸಿಕೊಂಡು ಬಂದರೆ, ನಿನ್ನ ದೇವರಾದ ಯೆಹೋವನು ನಿನ್ನ ಜೀವವನ್ನು ರಕ್ಷಿಸುತ್ತಾನೆ! ಆದರೆ ಯೆಹೋವನು ನಿನ್ನ ಶತ್ರುಗಳನ್ನು ಕವಣೆಯ ಕಲ್ಲನ್ನು ಎಸೆಯುವಂತೆ ಎಸೆದುಬಿಡುತ್ತಾನೆ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಯಾವನಾದರೂ ನನ್ನ ಒಡೆಯನಾದ ನಿನ್ನನ್ನು ಹಿಂಸಿಸಿ ಜೀವತೆಗೆಯಬೇಕೆಂದಿದ್ದರೂ, ಆ ನಿನ್ನ ಜೀವವು ನಿನ್ನ ದೇವರಾದ ಯೆಹೋವನ ರಕ್ಷಣೆಯಲ್ಲಿರುವ ಜೀವ ನಿಕ್ಷೇಪದಲ್ಲಿ ಭದ್ರವಾಗಿರಲಿ. ಆದರೆ ಆತನು ನಿನ್ನ ಶತ್ರುಗಳ ಜೀವವನ್ನು ಕವಣೆಯ ಕಲ್ಲನ್ನೋ ಎಂಬಂತೆ ಎಸೆದು ಬಿಡಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಯಾವನಾದರೂ ನನ್ನ ಒಡೆಯರಾದ ನಿಮ್ಮನ್ನು ಹಿಂಸಿಸಿ ಜೀವತೆಗೆಯಬೇಕೆಂದು ಇರುವಾಗ, ಆ ನಿಮ್ಮ ಜೀವ, ತಮ್ಮ ದೇವರಾದ ಸರ್ವೇಶ್ವರನ ರಕ್ಷಣೆಯಲ್ಲಿರುವ ಜೀವನಿಕ್ಷೇಪದಲ್ಲಿ ಸುಭದ್ರವಾಗಿರಲಿ; ಆದರೆ ನಿಮ್ಮ ಶತ್ರುಗಳ ಜೀವವನ್ನು ಕವಣೆಯ ಕಲ್ಲನ್ನೋ ಎಂಬಂತೆ ಎಸೆದುಬಿಡಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಯಾವನಾದರೂ ನನ್ನ ಸ್ವಾವಿುಯಾದ ನಿನ್ನನ್ನು ಹಿಂಸಿಸಿ ಜೀವತಗೆಯಬೇಕೆಂದಿರುವಾಗ ಆ ನಿನ್ನ ಜೀವವು ನಿನ್ನ ದೇವರಾದ ಯೆಹೋವನ ರಕ್ಷಣೆಯಲ್ಲಿರುವ ಜೀವನಿಕ್ಷೇಪದಲ್ಲಿ ಭದ್ರವಾಗಿರಲಿ; ಆದರೆ ಆತನು ನಿನ್ನ ಶತ್ರುಗಳ ಜೀವವನ್ನು ಕವಣೆಯ ಕಲ್ಲನ್ನೋ ಎಂಬಂತೆ ಎಸೆದುಬಿಡಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಈಗ ನಿನ್ನನ್ನು ಹಿಂದಟ್ಟಿ ನಿನ್ನ ಪ್ರಾಣವನ್ನು ಹುಡುಕುವುದಕ್ಕೆ ಒಬ್ಬನು ಎದ್ದಿದ್ದಾನೆ. ಆದರೂ ನನ್ನ ಒಡೆಯನ ಪ್ರಾಣವು ದೇವರಾದ ಯೆಹೋವ ದೇವರ ಬಳಿಯ ಜೀವದ ಕಟ್ಟಿನಲ್ಲಿ ಕಟ್ಟಿರುವುದು. ನಿನ್ನ ಶತ್ರುಗಳ ಪ್ರಾಣವನ್ನು ಕವಣೆಯ ಮಧ್ಯದಲ್ಲಿಟ್ಟು ಎಸೆದ ಹಾಗೆಯೇ ದೇವರು ಎಸೆದುಬಿಡುವರು. ಅಧ್ಯಾಯವನ್ನು ನೋಡಿ |