1 ಸಮುಯೇಲ 25:34 - ಪರಿಶುದ್ದ ಬೈಬಲ್34 ಇಸ್ರೇಲರ ದೇವರಾದ ಯೆಹೋವನಾಣೆ, ನೀನು ನನ್ನನ್ನು ಸಂಧಿಸಲು ಬೇಗನೆ ಬರದಿದ್ದರೆ ನಾಳೆ ಹೊತ್ತಾರೆಯ ವೇಳೆಗೆ ನಾಬಾಲನ ಕುಟುಂಬದಲ್ಲಿ ಒಬ್ಬನೂ ಜೀವಸಹಿತ ಉಳಿಯುತ್ತಿರಲಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ನಿನಗೆ ಕೇಡು ಮಾಡದಂತೆ ನನ್ನನ್ನು ತಡೆದ ಇಸ್ರಾಯೇಲರ ದೇವರಾದ ಯೆಹೋವನ ಆಣೆ, ನೀನು ಬೇಗನೇ ಬಂದು ನನ್ನನ್ನು ಎದುರುಗೊಳ್ಳದಿದ್ದರೆ ನಿಜವಾಗಿ ನಾಳೆ ಬೆಳಗಾಗುವಷ್ಟರಲ್ಲಿ ನಾಬಾಲನವರಲ್ಲಿ ಒಬ್ಬ ಗಂಡಸಾದರೂ ಉಳಿಯುತ್ತಿರಲಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ನಿನಗೆ ಕೇಡುಮಾಡದಂತೆ ನನ್ನನ್ನು ತಡೆದ ಇಸ್ರಯೇಲ್ ದೇವರಾದ ಸರ್ವೇಶ್ವರನ ಆಣೆ, ನೀನು ಬೇಗನೆ ಬಂದು ನನ್ನನ್ನು ಎದುರುಗೊಳ್ಳದಿದ್ದರೆ ಖಂಡಿತವಾಗಿ ನಾಳೆ ಬೆಳಗಾಗುವಷ್ಟರಲ್ಲಿ ನಾಬಾಲನವರಲ್ಲಿ ಒಬ್ಬ ಗಂಡಸಾದರೂ ಖಂಡಿತವಾಗಿ ಉಳಿಯುತ್ತಿರಲಿಲ್ಲ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ನಿನಗೆ ಕೇಡುಮಾಡದಂತೆ ನನ್ನನ್ನು ತಡೆದ ಇಸ್ರಾಯೇಲ್‍ದೇವರಾದ ಯೆಹೋವನ ಆಣೆ, ನೀನು ಬೇಗನೆ ಬಂದು ನನ್ನನ್ನು ಎದುರುಗೊಳ್ಳದಿದ್ದರೆ ನಿಜವಾಗಿ ನಾಳೆ ಬೆಳಗಾಗುವಷ್ಟರಲ್ಲಿ ನಾಬಾಲನವರಲ್ಲಿ ಒಬ್ಬ ಗಂಡಸಾದರೂ ಉಳಿಯುತ್ತಿದ್ದಿಲ್ಲ ಎಂದು ಹೇಳಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಏಕೆಂದರೆ ನಿನಗೆ ಕೇಡು ಆಗದ ಹಾಗೆ ನನ್ನನ್ನು ತಡೆದ ಇಸ್ರಾಯೇಲಿನ ದೇವರಾದ ಯೆಹೋವ ದೇವರ ಜೀವದಾಣೆ, ನೀನು ತ್ವರೆಯಾಗಿ ನನ್ನನ್ನು ಎದುರುಗೊಳ್ಳದಿದ್ದರೆ, ಉದಯವಾಗುವಷ್ಟರಲ್ಲಿ ನಾಬಾಲನಿಗೆ ಒಬ್ಬನಾದರೂ ಉಳಿಯುತ್ತಿರಲಿಲ್ಲ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |
ಮಾರನೆಯ ದಿನ ಬೆಳಿಗ್ಗೆ ಸೌಲನು ತನ್ನ ಸೈನ್ಯವನ್ನು ಮೂರು ಗುಂಪುಗಳಾಗಿ ವಿಂಗಡಿಸಿದನು. ಸೌಲನು ಮತ್ತು ಅವನ ಸೈನಿಕರು ಬೆಳಗಿನ ಜಾವದಲ್ಲೇ ಅಮ್ಮೋನಿಯರ ಶಿಬಿರದೊಳಕ್ಕೆ ನುಗ್ಗಿದರು. ಅವರು ಆ ದಿನ ಬೆಳಗಿನ ಜಾವ ಶಿಬಿರ ರಕ್ಷಕರನ್ನು ಬದಲಾಯಿಸುತ್ತಿದ್ದಂತೆಯೇ ಸೌಲನು ಆಕ್ರಮಣ ಮಾಡಿದನು. ಸೌಲನು ಮತ್ತು ಅವನ ಸೈನಿಕರು ನಡುಮಧ್ಯಾಹ್ನದೊಳಗೆ ಅಮ್ಮೋನಿಯರನ್ನು ಸೋಲಿಸಿದರು. ಅಮ್ಮೋನಿಯ ಸೈನಿಕರೆಲ್ಲರೂ ದಿಕ್ಕುಪಾಲಾಗಿ ಓಡಿಹೋದರು; ಅವರು ಒಟ್ಟಾಗಿ ಸೇರಿಬರಲು ಸಾಧ್ಯವಾಗಲಿಲ್ಲ.
ಗಿಲ್ಗಾಲಿನ ಪಾಳೆಯದಲ್ಲಿದ್ದ ಯೆಹೋಶುವನಿಗೆ ಗಿಬ್ಯೋನ್ ನಗರದ ಜನರು ಒಂದು ಸಂದೇಶವನ್ನು ಕಳಿಸಿದರು. ಆ ಸಂದೇಶ ಹೀಗಿತ್ತು: “ನಾವು ನಿಮ್ಮ ಸೇವಕರಾಗಿದ್ದೇವೆ, ನಮ್ಮನ್ನು ನಿಸ್ಸಹಾಯಕರಾಗಿ ಬಿಡಬೇಡಿರಿ. ಬಂದು ನಮಗೆ ಸಹಾಯ ಮಾಡಿರಿ; ತ್ವರೆಮಾಡಿರಿ; ನಮ್ಮನ್ನು ಉಳಿಸಿರಿ. ಬೆಟ್ಟಪ್ರದೇಶದ ಅಮೋರಿಯರ ಅರಸರೆಲ್ಲಾ ತಮ್ಮ ಸೈನ್ಯವನ್ನು ಒಟ್ಟುಗೂಡಿಸಿ ನಮ್ಮ ವಿರುದ್ಧ ಯುದ್ಧಮಾಡುತ್ತಿದ್ದಾರೆ.”
ನಾಬಾಲನು ಸತ್ತನೆಂಬುದು ದಾವೀದನಿಗೆ ತಿಳಿಯಿತು. ದಾವೀದನು, “ಯೆಹೋವನಿಗೆ ಸ್ತೋತ್ರವಾಗಲಿ! ನಾಬಾಲನು ನನ್ನ ಬಗ್ಗೆ ಕೆಟ್ಟಮಾತುಗಳನ್ನು ಆಡಿದನು, ಆದರೆ ಯೆಹೋವನು ನನಗೆ ಸಹಾಯ ಮಾಡಿದನು. ನಾನು ತಪ್ಪುಮಾಡದಂತೆ ಯೆಹೋವನು ನನ್ನನ್ನು ತಡೆದನು. ನಾಬಾಲನು ಕೆಟ್ಟದನ್ನು ಮಾಡಿದ್ದರಿಂದ ಯೆಹೋವನು ಅವನಿಗೆ ಸಾವನ್ನು ಬರಮಾಡಿದನು” ಎಂದು ಹೇಳಿದನು. ನಂತರ ದಾವೀದನು ಅಬೀಗೈಲಳಿಗೆ ಒಂದು ಸಂದೇಶವನ್ನು ಕಳುಹಿಸಿ ತನ್ನ ಹೆಂಡತಿಯಾಗಬೇಕೆಂದು ಕೇಳಿಕೊಂಡನು.