Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 25:35 - ಪರಿಶುದ್ದ ಬೈಬಲ್‌

35 ನಂತರ ದಾವೀದನು ಅಬೀಗೈಲಳ ಕೊಡುಗೆಗಳನ್ನು ಸ್ವೀಕರಿಸಿ ಆಕೆಗೆ, “ಶಾಂತಿಯಿಂದ ಮನೆಗೆ ಹಿಂದಿರುಗು. ನಾನು ನಿನ್ನ ಮಾತುಗಳನ್ನು ಆಲಿಸಿದ್ದೇನೆ ಮತ್ತು ನೀನು ಕೇಳಿಕೊಂಡಿರುವುದನ್ನು ನೆರವೇರಿಸುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಅವನು ಆಕೆ ತಂದ ಪದಾರ್ಥಗಳನ್ನು ತೆಗೆದುಕೊಂಡು ಆಕೆಗೆ “ಸಮಾಧಾನದಿಂದ ಮನೆಗೆ ಹೋಗು, ನಿನ್ನನ್ನು ನೋಡಿ ನಿನ್ನ ವಿಜ್ಞಾಪನೆಯನ್ನು ಲಾಲಿಸಿದ್ದೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಆಕೆ ತಂದ ಪದಾರ್ಥಗಳನ್ನು ತೆಗೆದುಕೊಂಡು ಆಕೆಗೆ, “ಸಮಾಧಾನದಿಂದ ಮನೆಗೆ ಹೋಗು; ನಿನ್ನನ್ನು ಕಟಾಕ್ಷಿಸಿ, ನಿನ್ನ ವಿಜ್ಞಾಪನೆಯನ್ನು ಆಲಿಸಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಆಕೆ ತಂದ ಪದಾರ್ಥಗಳನ್ನು ತೆಗೆದುಕೊಂಡು ಆಕೆಗೆ - ಸಮಾಧಾನದಿಂದ ಮನೆಗೆ ಹೋಗು; ನಿನ್ನನ್ನು ನೋಡಿ ನಿನ್ನ ವಿಜ್ಞಾಪನೆಯನ್ನು ಲಾಲಿಸಿದ್ದೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಅವಳು ತನಗೆ ತಂದದ್ದನ್ನು ದಾವೀದನು ತೆಗೆದುಕೊಂಡು ಅವಳಿಗೆ, “ನೀನು ಸಮಾಧಾನವಾಗಿ ನಿನ್ನ ಮನೆಗೆ ಹೋಗು; ನಾನು ನಿನ್ನ ಮಾತನ್ನು ಕೇಳಿ ನಿನ್ನ ಮುಖ ದಾಕ್ಷಿಣ್ಯವನ್ನು ನೋಡಿದೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 25:35
9 ತಿಳಿವುಗಳ ಹೋಲಿಕೆ  

ಆಗ ಎಲೀಷನು, “ಸಮಾಧಾನದಿಂದ ಹೋಗು” ಎಂದನು. ನಾಮಾನನು ಎಲೀಷನ ಬಳಿಯಿಂದ ಸ್ವಲ್ಪದೂರ ಹೋದನು.


ಯೋನಾತಾನನು ದಾವೀದನಿಗೆ, “ಸಮಾಧಾನದಿಂದ ಹೋಗು. ನಾವಿಬ್ಬರೂ ಗೆಳೆಯರಾಗಿರಲು ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡಿದ್ದೇವೆ. ನಮ್ಮಿಬ್ಬರಿಗೂ ನಮ್ಮ ಸಂತತಿಯವರಿಗೂ ಇರುವ ಸಂಬಂಧಕ್ಕೆ ಯೆಹೋವನೇ ಸಾಕ್ಷಿ ಎಂದು ಹೇಳಿದ್ದೇವೆ” ಎಂದನು.


ಆ ಪುರುಷನು ಲೋಟನಿಗೆ, “ಆಗಲಿ, ನಿನಗೆ ಅಪ್ಪಣೆ ಕೊಟ್ಟಿದ್ದೇನೆ. ನಾನು ಆ ಊರನ್ನು ನಾಶಮಾಡುವುದಿಲ್ಲ.


ಯೇಸು ಆಕೆಗೆ, “ಮಗಳೇ, ನೀನು ನಂಬಿದ್ದರಿಂದ ನಿನಗೆ ಸ್ವಸ್ಥವಾಯಿತು. ಸಮಾಧಾನದಿಂದ ಹೋಗು” ಎಂದು ಹೇಳಿದನು.


ಯೇಸು ಆ ಸ್ತ್ರೀಗೆ, “ನಿನ್ನ ನಂಬಿಕೆಯಿಂದಲೇ ನಿನಗೆ ರಕ್ಷಣೆ ಆಯಿತು. ಸಮಾಧಾನದಿಂದ ಹೋಗು” ಎಂದು ಹೇಳಿದನು.


ದೇವರಲ್ಲಿ ಸಾಮಾನ್ಯರು ಮತ್ತು ಪ್ರಮುಖರು ಎಂದಾಗಲಿ ಬಡವರು ಮತ್ತು ಶ್ರೀಮಂತರು ಎಂದಾಗಲಿ ಭೇದಭಾವವಿಲ್ಲ. ಯಾಕೆಂದರೆ ಎಲ್ಲರನ್ನೂ ಸೃಷ್ಟಿಮಾಡಿದವನು ದೇವರೇ.


“ಸಮಾಧಾನದಿಂದ ಹೋಗು” ಎಂದು ರಾಜನಾದ ದಾವೀದನು ಹೇಳಿದನು. ಅಬ್ಷಾಲೋಮನು ಹೆಬ್ರೋನಿಗೆ ಹೋದನು.


ಏಲಿಯು, “ಸಮಾಧಾನದಿಂದ ಹೋಗು. ಇಸ್ರೇಲಿನ ದೇವರು ನಿನ್ನ ಇಷ್ಟಾರ್ಥಗಳನ್ನು ನೆರವೇರಿಸುತ್ತಾನೆ” ಎಂದು ಉತ್ತರಿಸಿದನು.


ನೀನು ಸರಿಸಮಯದಲ್ಲಿ ಒಳ್ಳೆಯದನ್ನು ಹೇಳಿದರೆ, ಅದು ಬೆಳ್ಳಿಯ ತಟ್ಟೆಯಲ್ಲಿರುವ ಚಿನ್ನದ ಸೇಬಿನಂತಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು