1 ಸಮುಯೇಲ 25:36 - ಪರಿಶುದ್ದ ಬೈಬಲ್36 ಅಬೀಗೈಲಳು ನಾಬಾಲನ ಬಳಿಗೆ ಹಿಂದಿರುಗಿ ಹೋದಳು. ನಾಬಾಲನು ಮನೆಯಲ್ಲಿಯೇ ಇದ್ದನು. ನಾಬಾಲನು ರಾಜನಂತೆ ತಿನ್ನುತ್ತಾ ಕುಡಿದು ಮತ್ತನಾಗಿದ್ದನು. ಆದ್ದರಿಂದ ಅಬೀಗೈಲಳು ಮಾರನೆಯ ದಿನದ ಹೊತ್ತಾರೆಯವರೆಗೆ ನಾಬಾಲನಿಗೆ ಏನನ್ನೂ ಹೇಳಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಅಬೀಗೈಲಳು ನಾಬಾಲನ ಬಳಿಗೆ ಬಂದಳು. ಅವನು ತನ್ನ ಮನೆಯಲ್ಲಿ ರಾಜರಂತೆ ಒಂದು ದೊಡ್ಡ ಔತಣವನ್ನು ಮಾಡಿಸಿ ಬಹಳವಾಗಿ ಕುಡಿದು ಬಹು ಸಂಭ್ರಮದಿಂದ ಕಾರಣ ಆಕೆಯು ಮರುದಿನದ ವರೆಗೆ ಇದರ ವಿಷಯವಾಗಿ ಏನೂ ಹೇಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಅಬೀಗೈಲಳು ನಾಬಾಲನ ಬಳಿಗೆ ಬಂದಳು. ಅವನು ತನ್ನ ಮನೆಯಲ್ಲಿ ರಾಜರಂತೆ ಒಂದು ದೊಡ್ಡ ಔತಣವನ್ನು ಮಾಡಿಸಿ, ಬಹಳವಾಗಿ ಕುಡಿದು, ಬಹು ಸಂಭ್ರಮದಿಂದಿದ್ದ ಕಾರಣ ಈಕೆ ಮರುದಿವಸದವರೆಗೆ ಇದರ ವಿಷಯವಾಗಿ ಏನೂ ಹೇಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಅಬೀಗೈಲಳು ನಾಬಾಲನ ಬಳಿಗೆ ಬಂದಳು. ಅವನು ತನ್ನ ಮನೆಯಲ್ಲಿ ರಾಜರಂತೆ ಒಂದು ದೊಡ್ಡ ಔತಣವನ್ನು ಮಾಡಿಸಿ ಬಹಳವಾಗಿ ಕುಡಿದು ಬಹು ಸಂಭ್ರಮದಿಂದಿದ್ದ ಕಾರಣ ಈಕೆಯು ಮರುದಿವಸದವರೆಗೆ ಇದರ ವಿಷಯವಾಗಿ ಏನೂ ಹೇಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಅಬೀಗೈಲಳು ನಾಬಾಲನ ಬಳಿಗೆ ಬಂದಾಗ, ಅರಸನ ಔತಣಕ್ಕೆ ಸಮಾನವಾದ ಔತಣ ಅವನ ಮನೆಯಲ್ಲಿತ್ತು. ಅವನು ಬಹಳವಾಗಿ ಕುಡಿದದ್ದರಿಂದ ಅವನ ಹೃದಯವು ಅವನಲ್ಲಿ ಉಲ್ಲಾಸಗೊಂಡಿತ್ತು. ಆದಕಾರಣ ಅವಳು ಉದಯವಾಗುವವರೆಗೆ ಅವನಿಗೆ ಕಡಿಮೆಯಾದದ್ದನ್ನಾಗಲಿ, ಹೆಚ್ಚಾದದ್ದನ್ನಾಗಲಿ ತಿಳಿಸಲಿಲ್ಲ. ಅಧ್ಯಾಯವನ್ನು ನೋಡಿ |
ಆಗ ಅಬ್ಷಾಲೋಮನು ತನ್ನ ಸೇವಕರಿಗೆ ಈ ರೀತಿ ಆಜ್ಞೆ ಮಾಡಿದನು: “ಅಮ್ನೋನನನ್ನು ಗಮನಿಸುತ್ತಿರಿ. ಅವನು ಮತ್ತನಾಗಿ ಆನಂದಿಸುತ್ತಿರುವಾಗ ನಾನು ಆಜ್ಞೆಯನ್ನು ಕೊಡುತ್ತೇನೆ. ಆಗ ನೀವು ಅವನ ಮೇಲೆ ಆಕ್ರಮಣಮಾಡಿ ಕೊಲ್ಲಬೇಕು. ನಿಮಗೆ ಶಿಕ್ಷೆಯಾಗುತ್ತದೆ ಎಂಬ ಭಯವಿಲ್ಲದಿರಲಿ, ಯಾಕೆಂದರೆ ನೀವು ನನ್ನ ಆಜ್ಞೆಯನ್ನು ಪಾಲಿಸಿದಿರಷ್ಟೇ, ಆದ್ದರಿಂದ ಶಕ್ತರಾಗಿಯೂ ಧೈರ್ಯವಂತರಾಗಿಯೂ ಇರಿ” ಎಂದನು.