1 ಸಮುಯೇಲ 25:40 - ಪರಿಶುದ್ದ ಬೈಬಲ್40 ದಾವೀದನ ಸೈನಿಕರು ಕರ್ಮೆಲಿಗೆ ಹೋಗಿ ಅಬೀಗೈಲಳಿಗೆ, “ದಾವೀದನು ನಿನ್ನನ್ನು ಕರೆತರಲು ಹೇಳಿದ್ದಾನೆ. ನಿನ್ನನ್ನು ತನ್ನ ಹೆಂಡತಿಯನ್ನಾಗಿ ಸ್ವೀಕರಿಸಿಕೊಳ್ಳಬೇಕೆಂಬುದು ದಾವೀದನ ಅಪೇಕ್ಷೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಅವರು ಕರ್ಮೆಲಿನಲ್ಲಿದ್ದ ಅಬೀಗೈಲಳ ಬಳಿಗೆ ಹೋಗಿ ಆಕೆಗೆ, “ದಾವೀದನು ನಿನ್ನನ್ನು ತನಗೆ ಹೆಂಡತಿಯಾಗಿರುವುದಕ್ಕೆ ಕರೆದುಕೊಂಡು ಬರಬೇಕೆಂದು ನಮ್ಮನ್ನು ಕಳುಹಿಸಿದ್ದಾನೆ” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಅವರು ಕರ್ಮೆಲಿನಲ್ಲಿದ್ದ ಅಬೀಗೈಲಳ ಬಳಿಗೆ ಹೋಗಿ ಆಕೆಗೆ, “ದಾವೀದ ಅವರು ನಿನ್ನನ್ನು ತಮಗೆ ಹೆಂಡತಿಯಾಗುವುದಕ್ಕೆ ಕರೆದುಕೊಂಡು ಬರಬೇಕೆಂದು ನಮ್ಮನ್ನು ಕಳುಹಿಸಿದ್ದಾರೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ಅವರು ಕರ್ಮೆಲಿನಲ್ಲಿದ್ದ ಅಬೀಗೈಲಳ ಬಳಿಗೆ ಹೋಗಿ ಆಕೆಗೆ - ದಾವೀದನು ನಿನ್ನನ್ನು ತನಗೆ ಹೆಂಡತಿಯಾಗುವದಕ್ಕೆ ಕರಕೊಂಡು ಬರಬೇಕೆಂದು ನಮ್ಮನ್ನು ಕಳುಹಿಸಿದ್ದಾನೆ ಅಂದಾಗ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ದಾವೀದನ ಸೇವಕರು ಕರ್ಮೆಲಿನಲ್ಲಿರುವ ಅಬೀಗೈಲಳ ಬಳಿಗೆ ಬಂದಾಗ ಅವಳಿಗೆ, “ದಾವೀದನು ನಿನ್ನನ್ನು ತನಗೆ ಹೆಂಡತಿಯಾಗಿ ತೆಗೆದುಕೊಳ್ಳುವುದಕ್ಕಾಗಿ ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದನು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |
ನಾಬಾಲನು ಸತ್ತನೆಂಬುದು ದಾವೀದನಿಗೆ ತಿಳಿಯಿತು. ದಾವೀದನು, “ಯೆಹೋವನಿಗೆ ಸ್ತೋತ್ರವಾಗಲಿ! ನಾಬಾಲನು ನನ್ನ ಬಗ್ಗೆ ಕೆಟ್ಟಮಾತುಗಳನ್ನು ಆಡಿದನು, ಆದರೆ ಯೆಹೋವನು ನನಗೆ ಸಹಾಯ ಮಾಡಿದನು. ನಾನು ತಪ್ಪುಮಾಡದಂತೆ ಯೆಹೋವನು ನನ್ನನ್ನು ತಡೆದನು. ನಾಬಾಲನು ಕೆಟ್ಟದನ್ನು ಮಾಡಿದ್ದರಿಂದ ಯೆಹೋವನು ಅವನಿಗೆ ಸಾವನ್ನು ಬರಮಾಡಿದನು” ಎಂದು ಹೇಳಿದನು. ನಂತರ ದಾವೀದನು ಅಬೀಗೈಲಳಿಗೆ ಒಂದು ಸಂದೇಶವನ್ನು ಕಳುಹಿಸಿ ತನ್ನ ಹೆಂಡತಿಯಾಗಬೇಕೆಂದು ಕೇಳಿಕೊಂಡನು.