1 ಸಮುಯೇಲ 25:7 - ಪರಿಶುದ್ದ ಬೈಬಲ್7 ನೀನು ನಿನ್ನ ಕುರಿಗಳ ತುಪ್ಪಟವನ್ನು ಕತ್ತರಿಸುತ್ತಿರುವುದು ನನಗೆ ತಿಳಿಯಿತು. ನಿನ್ನ ಕುರುಬರು ನಮ್ಮೊಡನೆ ಸ್ವಲ್ಪ ಸಮಯವಿದ್ದರು. ನಾವು ಅವರಿಗೆ ಕೆಟ್ಟದ್ದೇನನ್ನೂ ಮಾಡಲಿಲ್ಲ. ಅವರು ಕರ್ಮೆಲಿನಲ್ಲಿ ಸ್ವಲ್ಪ ಸಮಯವಿದ್ದಾಗ ನಾವು ಅವರಿಂದ ಏನನ್ನೂ ತೆಗೆದುಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಿನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವ ಕೆಲಸವು ನಡೆಯುತ್ತದೆಂಬ ವರ್ತಮಾನವನ್ನು ಕೇಳಿದ್ದೇನೆ. ನಿನ್ನ ಕುರುಬರು ನಮ್ಮೊಡನೆ ಕರ್ಮೆಲಿನಲ್ಲಿದ್ದ ಕಾಲವೆಲ್ಲಾ ನಾವು ಅವರನ್ನು ತೊಂದರೆಪಡಿಸಲಿಲ್ಲ. ಅವರಿಗೇನೂ ನಷ್ಟವಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಿನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವ ಕೆಲಸ ನಡೆಯುತ್ತಿದೆಯೆಂಬ ಸುದ್ದಿಯನ್ನು ಕೇಳಿದ್ದೇನೆ. ನಿನ್ನ ಕುರುಬರು ನಮ್ಮೊಡನೆ ಕರ್ಮೆಲಿನಲ್ಲಿದ್ದ ಕಾಲವೆಲ್ಲಾ ನಾವು ಅವರನ್ನು ತೊಂದರೆಪಡಿಸಲಿಲ್ಲ; ಅವರಿಗೇನೂ ನಷ್ಟಮಾಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಿನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವ ಕೆಲಸವು ನಡೆಯುತ್ತದೆಂಬ ವರ್ತಮಾನವನ್ನು ಕೇಳಿದ್ದೇನೆ. ನಿನ್ನ ಕುರುಬರು ನಮ್ಮೊಡನೆ ಕರ್ಮೆಲಿನಲ್ಲಿದ್ದ ಕಾಲವೆಲ್ಲಾ ನಾವು ಅವರನ್ನು ತೊಂದರೆಪಡಿಸಲಿಲ್ಲ; ಅವರಿಗೇನೂ ನಷ್ಟವಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 “ ‘ಈಗ ನಿನಗೆ ಕುರಿಗಳ ಉಣ್ಣೆ ಕತ್ತರಿಸುವವರು ಉಂಟೆಂದು ಕೇಳಿದ್ದೇನೆ. ಆದರೆ ನಮ್ಮ ಸಂಗಡವಿದ್ದ ನಿನ್ನ ಕುರಿಕಾಯುವವರು ಕರ್ಮೆಲಿನಲ್ಲಿದ್ದ ದಿವಸಗಳೆಲ್ಲಾ ನಾವು ಅವರಿಗೆ ತೊಂದರೆಪಡಿಸಲಿಲ್ಲ. ಅವರು ಒಂದಾದರೂ ಕಳೆದುಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿ |