Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 26:10 - ಪರಿಶುದ್ದ ಬೈಬಲ್‌

10 ಯೆಹೋವನಾಣೆ, ಸೌಲನನ್ನು ಸ್ವತಃ ಯೆಹೋವನೇ ದಂಡಿಸುತ್ತಾನೆ. ಸೌಲನು ಸ್ವಾಭಾವಿಕನಾದ ಮರಣಹೊಂದಬಹುದು ಅಥವಾ ಯುದ್ಧದಲ್ಲಿ ಕೊಲ್ಲಲ್ಪಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇದಲ್ಲದೆ ದಾವೀದನು, “ಯೆಹೋವನ ಆಣೆ, ಅವನು ಯೆಹೋವನಿಂದ ಸಾಯುವನು, ಇಲ್ಲವೆ ಕಾಲ ತುಂಬಿದ ಮೇಲೆ ಮರಣ ಹೊಂದುವನು ಅಥವಾ ಯುದ್ಧದಲ್ಲಿ ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇದಲ್ಲದೆ ದಾವೀದನು, “ಸರ್ವೇಶ್ವರನಾಣೆ, ಅವನು ಸರ್ವೇಶ್ವರನಿಂದಲೇ ಸಾಯುವನು; ಇಲ್ಲವೆ ಕಾಲತುಂಬಿ ಮರಣಹೊಂದುವನು; ಅಥವಾ ಯುದ್ಧದಲ್ಲಿ ಮಡಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇದಲ್ಲದೆ ದಾವೀದನು - ಯೆಹೋವನಾಣೆ, ಅವನು ಯೆಹೋವನಿಂದ ಸಾಯುವನು; ಇಲ್ಲವೆ ಕಾಲತುಂಬಿ ಮೃತಿಹೊಂದುವನು; ಅಥವಾ ಯುದ್ಧದಲ್ಲಿ ಮಡಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇದಲ್ಲದೆ ಇನ್ನೂ ದಾವೀದನು, “ಯೆಹೋವ ದೇವರ ಜೀವದಾಣೆ, ಯೆಹೋವ ದೇವರೇ ಅವನನ್ನು ಹೊಡೆಯುವರು, ಇಲ್ಲವೆ ಅವನ ಕಾಲ ಬಂದು ಅವನು ಸಾಯುವನು, ಇಲ್ಲವೆ ಯುದ್ಧಕ್ಕೆ ಹೋಗಿ ನಾಶವಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 26:10
23 ತಿಳಿವುಗಳ ಹೋಲಿಕೆ  

ಯೆಹೋವನು ಮೋಶೆಗೆ, “ನೀನು ಸಾಯುವ ಸಮಯವು ಹತ್ತಿರವಾಗುತ್ತಾ ಬಂತು. ಯೆಹೋಶುವನನ್ನು ದೇವದರ್ಶನ ಗುಡಾರಕ್ಕೆ ಕರೆದುಕೊಂಡು ಬಾ. ಅವನು ಮಾಡಬೇಕಾದ ವಿಷಯಗಳನ್ನು ನಾನು ಯೆಹೋಶುವನಿಗೆ ತಿಳಿಸುವೆನು” ಎಂದು ಹೇಳಿದನು. ಮೋಶೆಯೂ ಯೆಹೋಶುವನೂ ದೇವದರ್ಶನ ಗುಡಾರದೊಳಗೆ ಹೋದರು.


ಇಸ್ರೇಲನು ಸಾಯುವ ಕಾಲ ಸಮೀಪಿಸಿತು. ಅವನಿಗೆ ತಾನು ಸಾಯುತ್ತೇನೆಂದು ತಿಳಿದು ಬಂದಾಗ, ತನ್ನ ಮಗನಾದ ಯೋಸೇಫನನ್ನು ಕರೆಯಿಸಿ, “ನೀನು ನನ್ನನ್ನು ಪ್ರೀತಿಸುವುದಾದರೆ, ನಿನ್ನ ಕೈಯನ್ನು ನನ್ನ ತೊಡೆಯ ಕೆಳಗಿಟ್ಟು ಪ್ರಮಾಣಮಾಡು. ನಾನು ಹೇಳಿದ್ದನ್ನು ನಡೆಸುವುದಾಗಿಯೂ ನನಗೆ ನಂಬಿಗಸ್ತನಾಗಿರುವುದಾಗಿಯೂ ಪ್ರಮಾಣ ಮಾಡು. ನಾನು ಸತ್ತಾಗ, ನನ್ನನ್ನು ಈಜಿಪ್ಟಿನಲ್ಲಿ ಸಮಾಧಿ ಮಾಡಬೇಡ.


ನನ್ನ ಸ್ನೇಹಿತರೇ, ನಿಮಗೆ ಕೇಡುಮಾಡುವ ಜನರನ್ನು ದಂಡಿಸಲು ಪ್ರಯತ್ನಿಸಬೇಡಿ. ದೇವರು ತನ್ನ ಕೋಪದಿಂದ ಅವರನ್ನು ದಂಡಿಸುವವರೆಗೆ ಕಾದುಕೊಂಡಿರಿ. “ನಾನೇ ದಂಡಿಸುವವನು; ನಾನೇ ಜನರಿಗೆ ಮುಯ್ಯಿತೀರಿಸುವವನು ಎಂದು ಪ್ರಭುವು ಹೇಳುತ್ತಾನೆ” ಎಂಬುದಾಗಿ ಬರೆಯಲ್ಪಟ್ಟಿದೆ.


ಆದರೆ ನಮ್ಮ ಒಡೆಯನು ಆ ದುಷ್ಟರನ್ನು ನೋಡಿ ನಗುವನು. ಅವರಿಗೆ ಬರಲಿರುವ ಆಪತ್ತುಗಳು ಆತನಿಗೆ ತಿಳಿದಿವೆ.


ಹೀಗೆ ಸೌಲನು ಮತ್ತು ಅವನ ಮೂವರು ಗಂಡುಮಕ್ಕಳೂ ಮತ್ತು ಸೌಲನ ಆಯುಧವಾಹಕನೂ ಅದೇ ದಿನ ಸತ್ತುಹೋದರು.


ಹತ್ತು ದಿನಗಳಾದ ಮೇಲೆ, ಯೆಹೋವನು ನಾಬಾಲನಿಗೆ ಸಾವನ್ನು ಬರಮಾಡಿದನು.


ಮುಗ್ದಜನರನ್ನು ಕೊಂದು ಅಪರಾಧಿಯಾಗದಂತೆ ಯೆಹೋವನು ನಿನ್ನನ್ನು ಕಾಪಾಡಿದ್ದಾನೆ. ಯೆಹೋವನ ಆಣೆಯಾಗಿಯೂ ನಿನ್ನ ಆಣೆಯಾಗಿಯೂ ನಿನ್ನ ಶತ್ರುಗಳೂ ನಿನಗೆ ಕೇಡುಮಾಡುವವರೂ ನಾಬಾಲನಂತಾಗಲಿ.


ಅವರ ದುಷ್ಕೃತ್ಯಗಳಿಗಾಗಿ ನಾನು ಅವರನ್ನು ಶಿಕ್ಷಿಸುವೆನು. ಅವರು ಜಾರಿ ಕೆಟ್ಟಕಾರ್ಯಗಳನ್ನು ಮಾಡಿದಾಗ ನಾನು ಅವರನ್ನು ಶಿಕ್ಷಿಸುವೆನು. ಅವರ ಮಹಾಸಂಕಟ ಕಾಲವು ಹತ್ತಿರವೇ ಇದೆ. ಅವರಿಗೋಸ್ಕರ ಸಿದ್ಧವಾಗಿರುವ ಶಿಕ್ಷೆಯು ಬೇಗನೆ ಬರುತ್ತದೆ.’


ಆದ್ದರಿಂದ ಅವಳಿಗೆ ಮರಣ, ಗೋಳಾಟ, ಭೀಕರ ಕ್ಷಾಮ ಎಂಬ ಉಪದ್ರವಗಳು ಒಂದೇ ದಿನದಲ್ಲಿ ಬರುತ್ತವೆ. ಅವಳಿಗೆ ತೀರ್ಪು ನೀಡಿದ ದೇವರಾಗಿರುವ ಪ್ರಭುವು ಬಲಿಷ್ಠನಾಗಿರುವುದರಿಂದ ಅವಳು ಬೆಂಕಿಯಿಂದ ನಾಶವಾಗುತ್ತಾಳೆ.”


ಪ್ರತಿಯೊಬ್ಬರೂ ಒಂದೇಸಾರಿ ಸಾಯುವರು. ಅನಂತರ ಅವರಿಗೆ ನ್ಯಾಯತೀರ್ಪಾಗುವುದು.


ದೇವಜನರು ದೇವರಿಗೆ ಹಗಲಿರುಳು ಮೊರೆಯಿಡಬೇಕು. ದೇವರು ತನ್ನ ಜನರಿಗೆ ಸರಿಯಾದದ್ದನ್ನೇ ಯಾವಾಗಲೂ ಕೊಡುತ್ತಾನೆ. ತನ್ನ ಜನರಿಗೆ ಉತ್ತರ ಕೊಡುವುದರಲ್ಲಿ ದೇವರು ತಡಮಾಡುವುದಿಲ್ಲ!


ಹುಟ್ಟುವ ಸಮಯ, ಸಾಯುವ ಸಮಯ. ನೆಡುವ ಸಮಯ, ಸಸಿಗಳನ್ನು ಕೀಳುವ ಸಮಯ.


ಆತನು ಆ ದುಷ್ಟ ನ್ಯಾಯಾಧೀಶರನ್ನು ಅವರ ದುಷ್ಕೃತ್ಯಗಳ ನಿಮಿತ್ತ ದಂಡಿಸುವನು. ಅವರ ಪಾಪಗಳ ನಿಮಿತ್ತ ದೇವರು ಅವರನ್ನು ನಾಶಮಾಡುವನು. ನಮ್ಮ ದೇವರಾದ ಯೆಹೋವನು ಆ ದುಷ್ಟ ನ್ಯಾಯಾಧೀಶರನ್ನು ನಾಶಮಾಡುವನು.


ಇನ್ನು ಸ್ವಲ್ಪ ಕಾಲದೊಳಗೆ ದುಷ್ಟರು ಇರುವುದೇ ಇಲ್ಲ. ನೀನು ಅವರಿಗಾಗಿ ಹುಡುಕಿದರೂ ಅವರು ಸಿಕ್ಕುವುದಿಲ್ಲ!


ಸತ್ತ ಮನುಷ್ಯನು ಮತ್ತೆ ಬದುಕುವನೇ? ಬದುಕುವುದಾಗಿದ್ದರೆ, ನನಗೆ ಬಿಡುಗಡೆಯಾಗುವ ತನಕ ನನ್ನ ಎಲ್ಲಾ ಕಷ್ಟದ ದಿನಗಳಲ್ಲಿಯೂ ಕಾದುಕೊಂಡಿರುವೆ.


ಮನುಷ್ಯನ ದಿನಗಳು ಇಷ್ಟೇ ಎಂದು ನಿರ್ಣಯವಾಗಿದೆ; ಅವನ ತಿಂಗಳುಗಳನ್ನು ನೀನು ನಿರ್ಣಯಿಸಿರುವೆ. ಅವನ ಆಯುಷ್ಯಕ್ಕೆ ದಾಟಲಾರದ ಮೇರೆಯನ್ನು ಹಾಕಿರುವೆ.


“ಭೂಲೋಕದಲ್ಲಿ ಮನುಷ್ಯನಿಗೆ ಬಹು ಪ್ರಯಾಸದ ಕೆಲಸವಿದೆ. ಅವನ ಜೀವನವು ಕೂಲಿ ಕೆಲಸದವನ ಜೀವನದಂತಿದೆ.


ಯೆಹೋವನೇ ನಮ್ಮಿಬ್ಬರಿಗೂ ನ್ಯಾಯಾಧೀಶನಾಗಿದ್ದು ತೀರ್ಪು ನೀಡಲಿ. ಯೆಹೋವನು ನನ್ನ ಪರವಾಗಿ ವಾದಿಸಿ ನಾನು ನೀತಿವಂತನೆಂದು ನಿರೂಪಿಸಿ ನನ್ನನ್ನು ನಿನ್ನಿಂದ ರಕ್ಷಿಸುತ್ತಾನೆ” ಎಂದು ಹೇಳಿದನು.


“ಜನರು ಮಾಡುವ ತಪ್ಪು ಕಾರ್ಯಗಳಿಗಾಗಿ ನಾನು ಅವರನ್ನು ದಂಡಿಸುತ್ತೇನೆ. ನಾನು ಮುಯ್ಯಿಗೆ ಮುಯ್ಯಿ ತೀರಿಸುತ್ತೇನೆ.” ಎಂದು ದೇವರು ಹೇಳಿದ್ದು ನಮಗೆ ತಿಳಿದೇ ಇದೆ.


ಯೆಹೋವನೇ ನಮಗೆ ನ್ಯಾಯಾಧೀಶನಾಗಿರಲಿ! ನೀನು ಮಾಡಿರುವ ತಪ್ಪಿಗಾಗಿ ಯೆಹೋವನು ನಿನ್ನನ್ನು ದಂಡಿಸಲಿ. ಆದರೆ ನಾನು ನಿನ್ನೊಡನೆ ಹೋರಾಡುವುದಿಲ್ಲ.


ನಾಬಾಲನು ಸತ್ತನೆಂಬುದು ದಾವೀದನಿಗೆ ತಿಳಿಯಿತು. ದಾವೀದನು, “ಯೆಹೋವನಿಗೆ ಸ್ತೋತ್ರವಾಗಲಿ! ನಾಬಾಲನು ನನ್ನ ಬಗ್ಗೆ ಕೆಟ್ಟಮಾತುಗಳನ್ನು ಆಡಿದನು, ಆದರೆ ಯೆಹೋವನು ನನಗೆ ಸಹಾಯ ಮಾಡಿದನು. ನಾನು ತಪ್ಪುಮಾಡದಂತೆ ಯೆಹೋವನು ನನ್ನನ್ನು ತಡೆದನು. ನಾಬಾಲನು ಕೆಟ್ಟದನ್ನು ಮಾಡಿದ್ದರಿಂದ ಯೆಹೋವನು ಅವನಿಗೆ ಸಾವನ್ನು ಬರಮಾಡಿದನು” ಎಂದು ಹೇಳಿದನು. ನಂತರ ದಾವೀದನು ಅಬೀಗೈಲಳಿಗೆ ಒಂದು ಸಂದೇಶವನ್ನು ಕಳುಹಿಸಿ ತನ್ನ ಹೆಂಡತಿಯಾಗಬೇಕೆಂದು ಕೇಳಿಕೊಂಡನು.


ಸೌಲನು ತನ್ನ ಅಯುಧವಾಹಕನಿಗೆ, “ನಿನ್ನ ಖಡ್ಗದಿಂದ ಇರಿದು ನನ್ನನ್ನು ಕೊಂದುಬಿಡು. ಆಗ, ಈ ಪರದೇಶೀಯರು ನನ್ನನ್ನು ಗಾಯಗೊಳಿಸುವುದಕ್ಕಾಗಲಿ ಅಪಹಾಸ್ಯ ಮಾಡುವುದಕ್ಕಾಗಲಿ ಸಾಧ್ಯವಾಗುವುದಿಲ್ಲ” ಎಂದನು. ಆದರೆ ಸೌಲನ ಆಯುಧವಾಹಕನು ನಿರಾಕರಿಸಿದನು. ಸೌಲನ ಸಹಾಯಕನು ಬಹಳ ಭಯಗೊಂಡಿದ್ದನು. ಆದ್ದರಿಂದ ಸೌಲನು ತನ್ನ ಸ್ವಂತ ಖಡ್ಗದಿಂದಲೇ ಇರಿದು ಆತ್ಮಹತ್ಯೆ ಮಾಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು