Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 26:12 - ಪರಿಶುದ್ದ ಬೈಬಲ್‌

12 ಅಂತೆಯೇ, ಸೌಲನ ತಲೆಯ ಹತ್ತಿರವಿದ್ದ ಭರ್ಜಿಯನ್ನೂ ನೀರಿನ ತಂಬಿಗೆಯನ್ನೂ ದಾವೀದನು ತೆಗೆದುಕೊಂಡನು. ನಂತರ ದಾವೀದ ಮತ್ತು ಅಬೀಷೈ ಸೌಲನ ಪಾಳೆಯನ್ನು ಬಿಟ್ಟು ಹೋದರು. ಇದನ್ನು ಯಾರೂ ನೋಡಲಿಲ್ಲ. ಇದರ ಬಗ್ಗೆ ಯಾರಿಗೂ ತಿಳಿಯಲಿಲ್ಲ. ಒಬ್ಬನಾದರೂ ನಿದ್ರೆಯಿಂದ ಎಚ್ಚರಗೊಳ್ಳಲಿಲ್ಲ! ಸೌಲನು ಮತ್ತು ಅವನ ಸೈನಿಕರೆಲ್ಲರೂ ನಿದ್ರಿಸುತ್ತಿದ್ದರು. ಏಕೆಂದರೆ ಯೆಹೋವನು ಅವರಿಗೆ ಗಾಢನಿದ್ರೆಯನ್ನು ಬರಮಾಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸೌಲನ ತಲೆದಿಂಬಿನ ಬಳಿಯಲ್ಲಿದ್ದ ಬರ್ಜಿ ಮತ್ತು ನೀರಿನ ತಂಬಿಗೆಯನ್ನು ತೆಗೆದುಕೊಂಡು ಹೋದರು. ಯಾರೂ ನೋಡಲಿಲ್ಲ, ಯಾರಿಗೂ ಗೊತ್ತಾಗಲಿಲ್ಲ, ಯಾರೂ ಎಚ್ಚರವಾಗಲಿಲ್ಲ. ಏಕೆಂದರೆ ಯೆಹೋವನು ಅವರಿಗೆ ಗಾಢನಿದ್ರೆಯನ್ನು ಬರಮಾಡಿದ್ದನು. ಒಬ್ಬರಿಗೂ ಎಚ್ಚರವಿಲ್ಲದೆ ಎಲ್ಲರೂ ನಿದ್ರೆಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸೌಲನ ತಲೆದಿಂಬಿನ ಬಳಿಯಲ್ಲಿದ್ದ ಭರ್ಜಿ ಹಾಗೂ ತಂಬಿಗೆಗಳನ್ನು ತೆಗೆದುಕೊಂಡು ಹೋದರು. ಯಾರೂ ಕಾಣಲಿಲ್ಲ; ಯಾರಿಗೂ ಗೊತ್ತಾಗಲಿಲ್ಲ, ಯಾರಿಗೂ ಎಚ್ಚರವಾಗಲಿಲ್ಲ. ಏಕೆಂದರೆ ಸರ್ವೇಶ್ವರ ಅವರಿಗೆ ಗಾಢನಿದ್ರೆಯನ್ನು ಬರಮಾಡಿದ್ದರು; ಒಬ್ಬರಿಗೂ ಎಚ್ಚರವಿಲ್ಲದೆ ಎಲ್ಲರು ಮೈಮರೆತು ನಿದ್ರೆಯಲ್ಲಿ ಮಗ್ನರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಸೌಲನ ತಲೆಗಿಂಬಿನ ಬಳಿಯಲ್ಲಿದ್ದ ಬರ್ಜಿ ತಂಬಿಗೆಗಳನ್ನು ತೆಗೆದುಕೊಂಡು ಹೋದನು. ಯಾರೂ ಕಾಣಲಿಲ್ಲ, ಯಾರಿಗೂ ಗೊತ್ತಾಗಲಿಲ್ಲ; ಯಾರೂ ಎಚ್ಚರವಾಗಲಿಲ್ಲ. ಯಾಕಂದರೆ ಯೆಹೋವನು ಅವರಿಗೆ ಗಾಢನಿದ್ರೆಯನ್ನು ಬರಮಾಡಿದ್ದನು; ಒಬ್ಬರಿಗೂ ಎಚ್ಚರವಿಲ್ಲದೆ ಎಲ್ಲರೂ ನಿದ್ರೆಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ದಾವೀದನು ಸೌಲನ ತಲೆದಿಂಬಿನ ಬಳಿಯಲ್ಲಿದ್ದ ಈಟಿಯನ್ನೂ, ನೀರಿನ ತಂಬಿಗೆಯನ್ನೂ ತೆಗೆದುಕೊಂಡನು. ಅವರು ಹೊರಟು ಹೋದರು. ಒಬ್ಬರಾದರೂ ನೋಡಲಿಲ್ಲ ಇಲ್ಲವೆ ತಿಳಿದುಕೊಳ್ಳಲಿಲ್ಲ, ಅರಿತಿದ್ದಿಲ್ಲ, ಯಾರೂ ಎಚ್ಚೆತ್ತಿರಲಿಲ್ಲ. ಏಕೆಂದರೆ ಯೆಹೋವ ದೇವರಿಂದ ಗಾಢನಿದ್ರೆಯು ಅವರ ಮೇಲೆ ಇಳಿದ ಕಾರಣ ಅವರೆಲ್ಲರು ಗಾಢ ನಿದ್ರೆಯಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 26:12
7 ತಿಳಿವುಗಳ ಹೋಲಿಕೆ  

ಆದ್ದರಿಂದ ದೇವರಾದ ಯೆಹೋವನು ಮನುಷ್ಯನಿಗೆ ಗಾಢವಾದ ನಿದ್ರೆಯನ್ನು ಬರಮಾಡಿ ಅವನ ದೇಹದ ಪಕ್ಕೆಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಆ ಪಕ್ಕೆಲುಬಿನ ಸ್ಥಳವನ್ನು ಮಾಂಸದಿಂದ ಮುಚ್ಚಿದನು.


ಸಾಯಂಕಾಲವಾಯಿತು, ಸೂರ್ಯ ಮುಳುಗತೊಡಗಿದಾಗ ಅಬ್ರಾಮನಿಗೆ ಗಾಢ ನಿದ್ರೆ ಬಂದಿತು. ಅವನು ನಿದ್ರೆ ಮಾಡುತ್ತಿರುವಾಗ ಕಾರ್ಗತ್ತಲಾಯಿತು.


ಯೆಹೋವನು ನಿಮಗೆ ತೂಕಡಿಕೆ ಬರಮಾಡುವನು. ಆತನು ನಿಮ್ಮ ಕಣ್ಣುಗಳನ್ನು ಮುಚ್ಚುವನು. (ಪ್ರವಾದಿಗಳು ನಿಮ್ಮ ಕಣ್ಣುಗಳಾಗಿದ್ದಾರೆ.) ಯೆಹೋವನು ನಿಮ್ಮ ತಲೆಗಳನ್ನು ಮುಚ್ಚುವನು. (ಪ್ರವಾದಿಗಳು ನಿಮ್ಮ ತಲೆಗಳಾಗಿದ್ದಾರೆ.)


ಆ ರಾತ್ರಿ ಅರಸನಿಗೆ ನಿದ್ರಿಸಲಾಗಲಿಲ್ಲ. ಒಬ್ಬ ಸೇವಕನನ್ನು ಕರೆದು ರಾಜಕಾಲವೃತ್ತಾಂತ ಪುಸ್ತಕವನ್ನು ತರಹೇಳಿ ಅವನಿಂದ ಅದನ್ನು ಓದಿಸಿದನು. (ಈ ಪುಸ್ತಕದಲ್ಲಿ ಅರಸರ ರಾಜ್ಯ ಆಳ್ವಿಕೆಯಲ್ಲಿ ನಡೆದ ಘಟನೆಗಳು ಲಿಖಿತವಾಗಿರುತ್ತದೆ.)


ರಾತ್ರಿಯಾಯಿತು. ದಾವೀದ ಮತ್ತು ಅಬೀಷೈ ಸೌಲನ ಪಾಳೆಯಕ್ಕೆ ಹೋದರು. ಪಾಳೆಯದ ಮಧ್ಯದಲ್ಲಿ ಸೌಲನು ನಿದ್ರಿಸುತ್ತಿದ್ದನು. ಅವನ ಭರ್ಜಿಯು ಅವನ ತಲೆಯ ಹತ್ತಿರ ನೆಲದಲ್ಲಿ ನೆಡಲ್ಪಟ್ಟಿತ್ತು. ಸೌಲನ ಸುತ್ತಲೂ ಅಬ್ನೇರನು ಸೈನ್ಯದೊಡನೆ ನಿದ್ರಿಸುತ್ತಿದ್ದನು.


ಜನರು ದಾವೀದನಿಗೆ, “ಯೆಹೋವನು ಈ ದಿನವನ್ನೇ ಕುರಿತು ನಿನ್ನೊಂದಿಗೆ ಮಾತನಾಡಿದನು. ಯೆಹೋವನು ನಿನಗೆ, ‘ನಾನು ನಿನ್ನ ಶತ್ರುವನ್ನು ನಿನಗೆ ಒಪ್ಪಿಸುತ್ತೇನೆ. ನಿನ್ನ ಇಷ್ಟದಂತೆ ಶತ್ರುವಿಗೆ ಏನು ಬೇಕಾದರೂ ಮಾಡು’ ಎಂದು ಹೇಳಿದನು” ಎಂದರು. ನಂತರ ದಾವೀದನು ಸೌಲನ ಹತ್ತಿರಕ್ಕೆ ತೆವಳುತ್ತಾ ಹೋಗಿ ಸೌಲನ ಅಂಗಿಯ ಒಂದು ಮೂಲೆಯನ್ನು ಕತ್ತರಿಸಿದನು. ದಾವೀದನನ್ನು ಸೌಲನು ನೋಡಲಿಲ್ಲ.


ದಾವೀದನು ಕಣಿವೆಯ ಮತ್ತೊಂದು ಕಡೆಗೆ ಹೋಗಿ ಬೆಟ್ಟದ ತುದಿಯಲ್ಲಿ ನಿಂತುಕೊಂಡನು. ದಾವೀದನ ಮತ್ತು ಸೌಲನ ಪಾಳೆಯಗಳಿಗೆ ತುಂಬಾ ಅಂತರವಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು